ಚಿಕ್ಕಬಳ್ಳಾಪುರ: ಸದ್ಯದಲ್ಲೇ ಕನ್ನಡ ಸೇರಿ ಎಲ್ಲಾ ಸ್ಥಳೀಯ ಭಾಷೆಗಳಲ್ಲೇ ಮೆಡಿಕಲ್, ಇಂಜಿನಿಯರ್ ಶಿಕ್ಷಣ ಪಡೆಯಬಹುದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ತಿಳಿಸಿದರು.
ಚಿಕ್ಕಬಳ್ಳಾಪುರದ (Chikkaballapur) ಸತ್ಯಸಾಯಿ ಗ್ರಾಮದಲ್ಲಿ ನಿರ್ಮಿಸಿರುವ ಮಧುಸೂದನಸಾಯಿ ಖಾಸಗಿ ಮೆಡಿಕಲ್ ಕಾಲೇಜು (Medical College) ಲೋಕಾರ್ಪಣೆ ಮಾಡಿದ ಅವರು, ಬಡವರನ್ನು ವೋಟ್ ಬ್ಯಾಂಕ್ ಎಂದು ಪರಿಗಣಸಿದ್ದ ದೇಶದ ಪರಿಸ್ಥಿತಿಯನ್ನು ಬಿಜೆಪಿ ಸರ್ಕಾರ ಬದಲಾಯಿಸಿದೆ. ಬಡವರ ಮಕ್ಕಳು ಕನ್ನಡದಲ್ಲಿ ವೈದ್ಯಕೀಯ ಓದುವಂತಹ ಸೌಲಭ್ಯಗಳನ್ನು ನಾವು ಕಲ್ಪಿಸಿದ್ದೇವೆ. ಕನ್ನಡ ಮಾತ್ರವಲ್ಲದೆ, ಅನೇಕ ಪ್ರಾಂತೀಯ ಭಾಷೆಗಳಲ್ಲಿ ಮಕ್ಕಳು ಇಂದು ವೈದ್ಯಕೀಯ ವಿಜ್ಞಾನ ಓದುವಂತೆ ನಾವು ಹೊಸ ವ್ಯವಸ್ಥೆಯನ್ನು ಸದ್ಯದಲ್ಲೇ ಎಲ್ಲಾ ಕಡೆಗೂ ತರಲಿದ್ದೇವೆ ಎಂದು ಹೇಳಿದರು.