ಬುಧವಾರ, ಮೇ 1, 2024
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭವಿಷ್ಯ ಹೇಳುತ್ತಿದ್ದ ಸ್ನೇಹಿತನಿಗೆ ಕಲ್ಲಿನಿಂದ ಹೊಡೆದು ಹತ್ಯೆ

Twitter
Facebook
LinkedIn
WhatsApp
ಭವಿಷ್ಯ ಹೇಳುತ್ತಿದ್ದ ಸ್ನೇಹಿತನಿಗೆ ಕಲ್ಲಿನಿಂದ ಹೊಡೆದು ಹತ್ಯೆ

ಬೆಂಗಳೂರು: ಮದ್ಯದ ಅಮಲಿನಲ್ಲಿ ಭವಿಷ್ಯ ಹೇಳುತ್ತಿದ್ದ ಸ್ನೇಹಿತನಿಗೆ (Friend) ಕಲ್ಲಿನಿಂದ ಹೊಡೆದು ಹತ್ಯೆಗೈದಿದ್ದ ಘಟನೆ ಬೆಂಗಳೂರಿನ (Bengaluru) ಗೋವಿಂದರಾಜನಗರದಲ್ಲಿ ನಡೆದಿದೆ.

ನರೇಶ್ ಸಾವನ್ನಪ್ಪಿದ ವ್ಯಕ್ತಿ ಹಾಗೂ ಮಾರಿಮುತ್ತು ಬಂಧಿತ ವ್ಯಕ್ತಿ. ಮಾರಿಮುತ್ತು ಹೆಚ್ಚು ಯಾರೊಂದಿಗೂ ಬೆರೆಯದೇ ವಿಚಿತ್ರ ಮನಸ್ಥಿತಿಯವನಾಗಿದ್ದ. ಹನ್ನೊಂದು ವರ್ಷದವನಿದ್ದಾಗಲೇ ವಿಜಯನಗರ ವ್ಯಾಪ್ತಿಯಲ್ಲಿ ಹತ್ಯೆ ಮಾಡಿ ಸೆರೆವಾಸ ಅನುಭವಿಸಿ ಹೊರಬಂದಿದ್ದ.

ಶನಿವಾರ ಮಧ್ಯಾಹ್ನ ಮಾರಿಮುತ್ತು ಜೊತೆ ನಾಗರಭಾವಿ ಮುಖ್ಯರಸ್ತೆಯಲ್ಲಿರುವ ಬಾರ್‌ನಲ್ಲಿ ಕುಡಿಯಲು ಬಂದಿದ್ದ ನರೇಶ್ ನಿನ್ನ ಭವಿಷ್ಯ ಹೇಳ್ತೀನಿ ಎಂದು ಆತನ ಬಳಿ ನಿನಗೆ ದುಶ್ಚಟಗಳಿವೆ, ಹುಡುಗಿಯರ ಸಹವಾಸ ಜಾಸ್ತಿ, ಕೆಲವೇ ವರ್ಷಗಳಲ್ಲಿ ನೀನು ಸಾಯುತ್ತೀಯ ಎಂದು ಆತನನ್ನ ವ್ಯಂಗ್ಯವಾಡಿದ್ದಾನೆ.

ಇದರಿಂದಾಗಿ ಸಿಟ್ಟಿಗೆದ್ದ ಮಾರಿಮುತ್ತು ಬಾರ್ ಒಳಗಡೆ ಪರಸ್ಪರ ಕಿತ್ತಾಡಿಕೊಂಡಿದ್ದರು. ಜಗಳವಾಡುತ್ತಲೇ ಇಬ್ಬರೂ ಹೊರಬಂದಿದ್ದರು. ಈ ವೇಳೆ ರಸ್ತೆ ಪಕ್ಕದಲ್ಲಿದ್ದ ಟೈಲ್ಸ್ ಕಲ್ಲಿನಿಂದ ನರೇಶ್ ತಲೆಗೆ ಹೊಡೆದು ಕೊಲೆ ಮಾಡಿ ಆರೋಪಿ ಪರಾರಿಯಾಗಿದ್ದ. ಪರಿಣಾಮ ತೀವ್ರ ರಕ್ತಸ್ರಾವ ಉಂಟಾಗಿ ಕುಸಿದುಬಿದ್ದು ನರೇಶ್ ಸಾವನ್ನಪ್ಪಿದ್ದ.

ಘಟನೆಗೆ ಸಂಬಂಧಿ ಗೋವಿಂದರಾಜನಗರ (Govindraj Nagar) ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದರು. ನಂತರ ನರೇಶ್ ಪತ್ನಿಯ ದೂರಿನ ಮೇರೆಗೆ ಕೇಸ್ ದಾಖಲಿಸಿಕೊಂಡಿದ್ದರು. ಪ್ರಕರಣ ದಾಖಲಾಗಿ 24 ಗಂಟೆ ಕಳೆಯುವಷ್ಟರಲ್ಲಿ ಗೋವಿಂದರಾಜನಗರ ಪೊಲೀಸರು ಆರೋಪಿ ಮಾರಿಮುತ್ತುನನ್ನು ಬಂದಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ