ಭಾನುವಾರ, ಮೇ 5, 2024
ಕ್ರಿಸ್ ಗೇಲ್ ದಾಖಲೆ ಮುರಿದ RCB ನಾಯಕ ಫಾಫ್ ಡುಪ್ಲೆಸಿಸ್!-ಕೆರೆ ಮೀನು ತಿಂದು ಇಬ್ಬರು ಮೃತ: ಹಲವರು ಅಸ್ವಸ್ಥ-ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಮ ಮಂದಿರದ ಹೊರಗೆ ಗಲಾಟೆ- ಉದ್ರಿಕ್ತರಿಂದ ಪೊಲೀಸ್ ವಾಹನಕ್ಕೆ ಬೆಂಕಿ

Twitter
Facebook
LinkedIn
WhatsApp
All about coconut tree 28

ಮುಂಬೈ: ಇಬ್ಬರ ನಡುವೆ ಗಲಾಟೆ ನಡೆದು, ನೆರೆದಿದ್ದ ಜನ ಕಲ್ಲು ತೂರಾಟ ನಡೆಸಿ ಖಾಸಗಿ ಹಾಗೂ ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆ ಛತ್ರಪತಿ ಸಂಭಾಜಿನಗರದ (Chhatrapati Sambhajinagar) ಕಿರದಪುರದ (Kiradpura) ರಾಮಮಂದಿರದ ಹೊರಗೆ ಬುಧವಾರ ರಾತ್ರಿ ನಡೆದಿದೆ.

ಪೊಲೀಸರು ಅಶ್ರವಾಯು ಸಿಡಿಸಿ ಉದ್ರಿಕ್ತ ಗುಂಪನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ವಾಹನಗಳಿಗೆ ತಗುಲಿದ್ದ ಬೆಂಕಿಯನ್ನು ಮೂರು ಅಗ್ನಿಶಾಮಕ ವಾಹನಗಳಿಂದ ಕಾರ್ಯಾಚರಣೆ ನಡೆಸಿ ಆರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. 

ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ನಿಖಿಲ್ ಗುಪ್ತಾ ತಿಳಿಸಿದ್ದಾರೆ.

ಔರಂಗಾಬಾದ್ (Aurangabad) ಸಂಸದ ಇಮ್ತಿಯಾಜ್ ಜಲೀಲ್ ರಾಮ ಮಂದಿರಕ್ಕೆ (Ram temple) ತೆರಳಿದ್ದ ವೀಡಿಯೋ ಒಂದನ್ನು ಎಐಎಂಐಎಂನ (AIMIM) ರಾಷ್ಟ್ರೀಯ ಕಾರ್ಪೋರೇಟರ್ ಮೊಹಮ್ಮದ್ ನಾಸಿರುದ್ದೀನ್ ಹಂಚಿಕೊಂಡಿದ್ದರು. ಇದನ್ನು ಕೆಲವು ಕಿಡಿಗೇಡಿಗಳು ದೇವಾಲಯದ ಮೇಲೆ ದಾಳಿ ಎಂದು ಬಿಂಬಿಸಿ ಹಂಚಿಕೊಂಡಿದ್ದರು.

ಸುಳ್ಳು ಸುದ್ದಿಗಳನ್ನು ಪೊಲೀಸರು ಸಾಮಾಜಿಕ ಜಾಲತಾಣಗಳಿಂದ ತೆಗೆಸಿದ್ದು. ಶಾಂತಿಯನ್ನು ಕಾಪಾಡುವಂತೆ ಮನವಿ ಮಾಡಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ