ಇಂದಿನಿಂದ ರಾಜ್ಯಾದ್ಯಂತ ಎಸೆಸೆಲ್ಸಿ ಪರೀಕ್ಷೆ ಆರಂಭ
Twitter
Facebook
LinkedIn
WhatsApp
![clipboard 2021 11 21t042709460 1052955 1637449248](https://urtv24.com/wp-content/uploads/2023/03/clipboard-2021-11-21t042709460-1052955-1637449248-1024x576.jpg)
ಬೆಂಗಳೂರು, ಮಾ 31 : ಇಂದಿನಿಂದ ರಾಜ್ಯಾದ್ಯಂತ ಎಸೆಸೆಲ್ಸಿ ಮುಖ್ಯ ಪರೀಕ್ಷೆ ಆರಂಭಗೊಡು ಎಪ್ರಿಲ್ 15ರ ವರೆಗೆ ನಡೆಯಲಿದ್ದು, 3,305 ಪರೀಕ್ಷಾ ಕೇಂದ್ರಗಳಲ್ಲೂ ಸಕಲ ಸಿದ್ಧತೆ ನಡೆದಿದೆ.
ಎಸೆಸೆಲ್ಸಿ ಪರೀಕ್ಷೆಗೆ ರಾಜ್ಯದ 15,498 ಶಾಲೆಗಳಿಂದ 8,42,811 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ 5,833 ಸರಕಾರಿ ಶಾಲೆಗಳು, 3,605 ಅನುದಾನಿತ ಹಾಗೂ 6,060 ಅನುದಾನರಹಿತ ಶಾಲೆಗಳಾಗಿವೆ.
ಇನ್ನು ಪರೀಕ್ಷಾ ಅಕ್ರಮ ತಡೆಗಟ್ಟುವ ಹಿನ್ನೆಲೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪರೀಕ್ಷಾ ಕೇಂದ್ರಗಳಲ್ಲಿ ನಿಗಾ ವಹಿಸಿದೆ. ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಪರೀಕ್ಷಾ ಕೇಂದ್ರದ ಸುತ್ತ ಮುತ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಎಸೆಸೆಲ್ಸಿ ಪರೀಕ್ಷೆ ಕುರಿತಾದ ಯಾವುದೇ ಗೊಂದಲಗಳಿದ್ದಲ್ಲಿ ಮಾಹಿತಿಗೆ 080 -23310075/76 ಸಂಪರ್ಕಿಸಬಹುದಾಗಿದೆ.