ನೆಲ್ಯಾಡಿ: ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಗೆಳತಿಯರಿಬ್ಬರೂ ಚಿಕಿತ್ಸೆ ಫಲಿಸದೆ ಒಂದೇ ದಿನ ಸಾವು
ಕೊಕ್ಕಡ: ನೆರೆಕೆರೆ ಮನೆಯ ಸ್ನೇಹಿತೆಯರಿಬ್ಬರು ತೀವ್ರ ಹೊಟ್ಟೆ ನೋವಿನ ಕಾರಣದಿಂದ ಪ್ರತ್ಯೇಕ ಆಸ್ಪತ್ರೆಯಲ್ಲಿ ದಾಖಲಿಸಲಾಗಿ ಚಿಕಿತ್ಸೆ ಫಲಿಸದೆ ಇಬ್ಬರೂ ಸಾವನ್ನೊಪ್ಪಿದ ಘಟನೆ ಎಪ್ರಿಲ್ 6ರಂದು ನಡೆದಿದೆ.
ಪಟ್ರಮೆ ಗ್ರಾಮದ ಪಟ್ಟೂರು ಬಾಬು ಎಂಬವರ ಪುತ್ರಿ ರಕ್ಷಿತಾ (22) ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ಮುಂಜಾನೆ ಮೃತಪಟ್ಟರೆ, ಅವರ ನೆರೆಯಮನೆಯವರಾದ ಶ್ರೀನಿವಾಸ ಆಚಾರ್ಯ ಎಂಬವರ ಪುತ್ರಿ ಲಾವಣ್ಯ (21) ಸುರತ್ಕಲ್ ಆಸ್ಪತ್ರೆಯಲ್ಲಿ ನಿನ್ನೆ ಮಧ್ಯಾಹ್ನ ಮೃತಪಟ್ಟರೆನ್ನಲಾಗಿದೆ.
ಇವರಿಬ್ಬರು ಸೇವಾ ಪ್ರತಿನಿಧಿಯಾಗಿ ಕೆಲ ಸಮಯಗಳಿಂದ ಕಾರ್ಯವನ್ನು ನಿರ್ವಹಿಸುತ್ತಿದ್ದರು. ಎ.4ರಂದು ಸಂಜೆ ರಕ್ಷಿತಾ ಮತ್ತು ಲಾವಣ್ಯ ತಮ್ಮ ಮನೆಯಲ್ಲಿ ಹೊಟ್ಟೆ ನೋವೆಂದು ನರಳಾಡಿ ತೀವ್ರ ಅಸ್ವಸ್ಥಗೊಂಡಿದ್ದರು. ಇವರಿಬ್ಬರನ್ನು ಸ್ಥಳೀಯರ ಸಹಕಾರದಲ್ಲಿ ನೆಲ್ಯಾಡಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ರಕ್ಷಿತಾ ಅವರನ್ನು ಅವರ ಮನೆಯವರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದರು. ಲಾವಣ್ಯರನ್ನು ಅವರ ಮನೆಯವರು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಅಲ್ಲಿಯ ವೈದ್ಯರ ಸಲಹೆಯಂತೆ ಸುರತ್ಕಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಕ್ಷಿತಾ ಅವರನ್ನು ಅವರ ಮನೆಯವರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದರು.
ಲಾವಣ್ಯರನ್ನು ಅವರ ಮನೆಯವರು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಅಲ್ಲಿಯ ವೈದ್ಯರ ಸಲಹೆಯಂತೆ ಸುರತ್ಕಲ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಕ್ಷಿತಾ ಅವರು ಎ.6 ಇಂದು ಮುಂಜಾನೆ ಆಸ್ಪತ್ರೆಯಲ್ಲಿ ಮೃತಪಟ್ಟರೆ, ಲಾವಣ್ಯ ಇಂದು ಮಧ್ಯಾಹ್ನ ಸುರತ್ಕಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇವರಿಬ್ಬರೂ ಪಟ್ಟೂರಿನಲ್ಲಿ ನೆರೆಕರೆಯವರಾಗಿದ್ದರು.
ಇವರ ಸಾವಿಗೆ ಕಾರಣ ಏನು ಎಂದು ಸ್ಪಷ್ಟಗೊಂಡಿಲ್ಲ. ಈ ಬಗ್ಗೆ ವೈದ್ಯಕೀಯ ವರದಿ ಬಂದ ನಂತರವಷ್ಟೇ ತಿಳಿದು ಬರಬೇಕಾಗಿದೆ.
ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಅಸಹಜ ಸಾವು ಪ್ರಕರಣ ದಾಖಲಿಸಿದ್ದಾರೆ. ಒಂದೇ ದಿನ ಯುವತಿಯರಿಬ್ಬರು ಒಂದೇ ಕಾರಣಕ್ಕೆ ಸಾವನ್ನಪ್ಪಿರುವ ಬಗ್ಗೆ ಸಾರ್ವಜನಿಕರಲ್ಲಿ ಅನುಮಾನ ಹುಟ್ಟುಹಾಕಿದೆ.