ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸಹೋದರನ ಜೊತೆ ಜಗಳ ಮಾಡ್ಕೊಂಡು ಮೊಬೈಲ್‌ನ್ನೇ ನುಂಗಿದ ಯುವತಿ!

Twitter
Facebook
LinkedIn
WhatsApp
266555262 455697132591257 8258542406249121750 n 3

ಭೋಪಾಲ್: ಅಣ್ಣ-ತಮ್ಮಂದಿರ, ಅಕ್ಕ-ತಂಗಿಯರ ನಡುವೆ ಹೊಡೆದಾಟ ಆಗಿಂದಾಗೆ ನಡೆಯುತ್ತಲೇ ಇರುತ್ತದೆ. ಕೆಲವೊಮ್ಮೆ ಇದು ಸಣ್ಣಪುಟ್ಟ ಜಗಳದಲ್ಲಿ ನಿಂತು ಹೋದರೆ, ಇನ್ನು ಕೆಲವೊಮ್ಮೆ ದೊಡ್ಡ ಅವಾಂತರಕ್ಕೂ ಕಾರಣವಾಗುತ್ತದೆ. ಇಲ್ಲಾಗಿದ್ದು ಅದೇ. ಸಹೋದರನೊಂದಿಗೆ ಜಗಳವಾಡುತ್ತಿದ್ದ ವೇಳೆ 18 ವರ್ಷದ ಯುವತಿ ಮೊಬೈಲ್ ನುಂಗಿದ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ. ಮೊಬೈಲ್‌ ಫೋನ್ ವಿಚಾರವಾಗಿ ಯುವತಿ ತನ್ನ ಸಹೋದರನೊಂದಿಗೆ ಜಗಳವಾಡುತ್ತಿದ್ದಳು. ಮಾತಿನಲ್ಲೇ ಆರಂಭವಾದ ಜಗಳ ತಾರಕಕ್ಕೇರಿ ಕೊನೆಗೆ ಮೊಬೈಲ್‌ನ್ನೇ ನುಂಗಿಬಿಟ್ಟಿದ್ದಾಳೆ. ಇಲ್ಲಿನ ಭಿಂಡ್ ಜಿಲ್ಲೆಯಲ್ಲಿ ಘಟನೆ ನಡೆದಿದೆ.

ಸೆಲ್ ಫೋನ್ ನುಂಗಿದ ತಕ್ಷಣ ಆಕೆಗೆ ವಿಪರೀತ ಹೊಟ್ಟೆನೋವು (Stomach pain) ಮತ್ತು ನಿರಂತರ ವಾಂತಿಯಾಗತೊಡಗಿತು. ಇದು ಕುಟುಂಬ ಸದಸ್ಯರಲ್ಲಿ ಆತಂಕವನ್ನು ಉಂಟುಮಾಡಿತು ಮತ್ತು ಅವರು ಹೆಚ್ಚು ಸಮಯ ವ್ಯರ್ಥ ಮಾಡದೆ ಆಸ್ಪತ್ರೆಗೆ ಕರೆದೊಯ್ದರು. ನಂತರ ಬಾಲಕಿಯನ್ನು ತಕ್ಷಣವೇ ಗ್ವಾಲಿಯರ್ಸ್‌ನ ಜಯಆರೋಗ್ಯ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಆಕೆಗೆ ಶಸ್ತ್ರಚಿಕಿತ್ಸೆ (Operation) ನಡೆಸಿ ಸೆಲ್ ಫೋನ್ ಹೊರತೆಗೆಯಲಾಯಿತು. 

ಹೊಟ್ಟೆಯೊಳಗೆ ಸಿಲುಕಿಕೊಂಡಿದ್ದ ಮೊಬೈಲ್
ಯುವತಿ ಮೊಬೈಲ್‌ ನುಂಗಿದ ತಕ್ಷಣ ವೈದ್ಯರು ತಕ್ಷಣ ತಪಾಸಣೆ ನಡೆಸಿದ್ದಾರೆ. ಶಸ್ತ್ರ ಚಿಕಿತ್ಸೆ ವಿಭಾಗದಲ್ಲಿ ವೈದ್ಯರ ತಂಡ ತಪಾಸಣೆ ನಡೆಸಿದಾಗ ಬಾಲಕಿಯ ಹೊಟ್ಟೆಯಲ್ಲಿ ಮೊಬೈಲ್ ಸಿಕ್ಕಿಹಾಕಿಕೊಂಡಿತ್ತು. ಮೊಬೈಲ್ ತೆಗೆಯಲು ಓಪನ್ ಸರ್ಜರಿ ಒಂದೇ ಮಾರ್ಗವಾಗಿತ್ತು. ಕೊನೆಗೆ ಓಪನ್ ಸರ್ಜರಿ ಮಾಡಿ ಮೊಬೈಲ್ ತೆಗೆಯಲು ವೈದ್ಯರು (Doctors) ನಿರ್ಧರಿಸಿದರು. ಸುಮಾರು ಅರ್ಧ ಡಜನ್ ವೈದ್ಯರ ತಂಡ ಶಸ್ತ್ರಚಿಕಿತ್ಸಾ ವಿಭಾಗದಲ್ಲಿ, ಸುಮಾರು ಒಂದೂವರೆ ಗಂಟೆಗಳ ಕಾಲ ಆಪರೇಷನ್ ಮಾಡಿ ಯುವತಿಯ ಹೊಟ್ಟೆಯಲ್ಲಿದ್ದ ಮೊಬೈಲ್ ಹೊರತೆಗೆದಿದ್ದಾರೆ.

ಸುಮಾರು ಎರಡು ಗಂಟೆಗಳ ಕಾಲ ತುರ್ತು ಶಸ್ತ್ರಚಿಕಿತ್ಸೆ  ನಡೆಸಲಾಯಿತು. ಬಾಲಕಿಗೆ ಹತ್ತು ಹೊಲಿಗೆ ಹಾಕಲಾಗಿದ್ದು, ಈಗ ಆಕೆ ಸ್ಥಿರವಾಗಿದ್ದಾಳೆ ಎಂದು ಜಯರೋಗ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಈ ಘಟನೆಯನ್ನರಿತ ವೈದ್ಯರೇ ಒಂದು ಬಾರಿ ದಂಗಾಗಿದ್ದಾರೆ. ಇಬ್ಬರ ನಡುವಿನ ಜಗಳಕ್ಕೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ ಎಂದು ಕುಟುಂಬಸ್ಥರು ಹೇಳಿದ್ದಾರೆ. ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯಯಿಂದ ಪಾರಾಗಿದ್ದಾಳೆಂದು ವೈದ್ಯರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist