ಮೀನು ಹಿಡಿಯುವ ಬಲೆಗೆ ಸಿಲುಕಿ ಇಬ್ಬರು ಮೃತ್ಯು
Twitter
Facebook
LinkedIn
WhatsApp
ಶಿಡ್ಲಘಟ್ಟ: ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ಬಲೆಗೆ ಸಿಲುಕಿ ಜಲಸಮಾಧಿಯಾಗಿರುವ ಘಟನೆ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣ ವ್ಯಾಪ್ತಿಯ ತಲಕಾಯಲಬೆಟ್ಟ ಗ್ರಾಮದಲ್ಲಿ ಸಂಭವಿಸಿದೆ.
ತಾಲೂಕಿನ ಪಲಚೇರ್ಲು ಗ್ರಾಮದ ಮಂಜುನಾಥ್(35) ಮಂಜುನಾಥ್ (37) ಮೃತಪಟ್ಟ ದುರ್ದೈವಿಗಳು.
ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟದ ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ಬಲೆಯಲ್ಲಿ ಸಿಕ್ಕಿಹಾಕಿಕೊಂಡು ಮೃತಪಟ್ಟಿದ್ದಾರೆ ಎಂದು ದಿಬ್ಬೂರಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ವೇಣುಗೋಪಾಲ್ ತಿಳಿಸಿದ್ದಾರೆ.
ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ.