ಗುರುವಾರ, ಮೇ 16, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

'ಹೆಮ್ಮೆಯ' ಬಿಜೆಪಿ ಕಾರ್ಯಕರ್ತರೊಂದಿಗೆ 'ವಿಶೇಷ' ಸೆಲ್ಫಿ ಕ್ಲಿಕ್ಕಿಸಿಕೊಂಡ ಪ್ರಧಾನಿ ಮೋದಿ

Twitter
Facebook
LinkedIn
WhatsApp
'ಹೆಮ್ಮೆಯ' ಬಿಜೆಪಿ ಕಾರ್ಯಕರ್ತರೊಂದಿಗೆ 'ವಿಶೇಷ' ಸೆಲ್ಫಿ ಕ್ಲಿಕ್ಕಿಸಿಕೊಂಡ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ(Narendra Modi) ಯವರ ಜತೆ ಸೆಲ್ಫಿ(Selfie) ತೆಗೆದುಕೊಳ್ಳಬೇಕು ಎಂಬುದು ಎಷ್ಟೋ ಮಂದಿಯ ಕನಸಾಗಿರುತ್ತದೆ. ಆದರೆ ಮೋದಿಯವರೇ ಬಂದು ನಿಮ್ಮ ಜತೆ ಸೆಲ್ಫಿ ಕ್ಲಿಕ್ಕಿಸಿದಾಗ ಎಷ್ಟು ಸಂತೋಷವಾಗಬಹುದಲ್ಲವೇ. ಅಂತಹ ಒಂದು ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಪ್ರಧಾನಿ ಮೋದಿ ಚೆನ್ನೈಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ತಿರು ಎಸ್. ಮಣಿಕಂಠನ್ ಅವರ ಬಳಿ ಸೆಲ್ಫಿಯನ್ನು ತೆಗೆದುಕೊಂಡು ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದ್ದಾರೆ.

ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸುವ ಸಲುವಾಗಿ ಪ್ರಧಾನಿ ಮೋದಿ ಶನಿವಾರ ಚೆನ್ನೈಗೆ ಭೇಟಿ ನೀಡಿದ್ದರು. ಈ ವೇಳೆ ದಿವ್ಯಾಂಗರಾಗಿಯೂ ಒಂದು ಅಂಗಡಿಯನ್ನು ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರಾದ ತಿರು.ಎಸ್.ಮಣಿಕಂದನ್ ಅವರನ್ನು ಭೇಟಿಯಾಗಿ ಅವರೊಡನೆ ಸೆಲ್ಫಿ ತೆಗೆದುಕೊಂಡಿದ್ದಾರೆ. ಬಳಿಕ ಇದನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಅನೇಕರು ಪ್ರೇರೇಪಿತರಾಗಲಿ ಎಂದು ಅವರಿಗೆ ಶುಭಾಶಯ ಕೋರಿದ್ದಾರೆ.

ಚೆನ್ನೈನಲ್ಲಿ ನಾನು ತಿರು ಎಸ್.ಮಣಿಕಂದನ್ ಅವರನ್ನು ಭೇಟಿಯಾದೆ. ಅವರು ಈರೋಡ್‌ನ (Erode) ಬಿಜೆಪಿ ಕಾರ್ಯಕರ್ತ ಹಾಗೂ ಬೂತ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರು ದಿವ್ಯಾಂಗರಾಗಿದ್ದರೂ ತನ್ನದೇ ಸ್ವಂತ ಅಂಗಡಿಯನ್ನು ನಡೆಸುತ್ತಿರುವುದು ಎಲ್ಲರಿಗೂ ಪ್ರೇರಣೆಯಾಗಿದೆ. ಅಲ್ಲದೇ ಅವರು ತಮಗೆ ಬಂದ ದೈನಂದಿನ ಲಾಭದಲ್ಲಿ ಗಣನೀಯ ಭಾಗವನ್ನು ಬಿಜೆಪಿಗೆ ನೀಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಅವರ ಫೋಟೋದೊಂದಿಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ತಿರು ಎಸ್.ಮಣಿಕಂದನ್ ಅವರಂತಹ ಕಾರ್ಯಕರ್ತರನ್ನು ಹೊಂದಿರುವ ಬಿಜೆಪಿ ಪಕ್ಷದಲ್ಲಿ ನಾನು ಕಾರ್ಯಕರ್ತನಾಗಿರುವುದಕ್ಕೆ ನನಗೆ ತುಂಬಾ ಹೆಮ್ಮೆಯಿದೆ ಎಂದು ಮಣಿಕಂದನ್ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

ನಡೆದ ಜಾಥಾದಲ್ಲಿ ಮೋದಿ ಮಾತನಾಡಿ, ತಮಿಳುನಾಡಿನ ಶ್ರೀಮಂತ ಇತಿಹಾಸವನ್ನು ಹೊಗಳಿದರು. ಇದು ಭಾಷೆ ಮತ್ತು ಸಾಹಿತ್ಯದ ನಾಡು. ದೇಶಭಕ್ತಿ ಮತ್ತು ರಾಷ್ಟ್ರೀಯ ಪ್ರಜ್ಞೆಯ ಕೇಂದ್ರವಾಗಿದೆ. ದೇಶದ ಅನೇಕ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರು ತಮಿಳುನಾಡಿನವರು ಎಂದು ಹೇಳಿದರು.

2014ರ ನಂತರ ಭಾರತದ ಮೂಲಸೌಕರ್ಯ ವಲಯದಲ್ಲಿ ಕ್ರಾಂತಿಕಾರಿ ಬದಲಾವಣೆ ತರುವಲ್ಲಿ ಎನ್​ಡಿಎ ಪ್ರಯತ್ನದ ಬಗ್ಗೆ ಮಾತನಾಡಿದರು. ಇನ್ನು, ತಮಿಳುನಾಡಿನಲ್ಲಿ ಪ್ರಧಾನಿ ಮೋದಿ ಭೇಟಿಗೆ ಭಾರಿ ವಿರೋಧ ವ್ಯಕ್ತವಾಗಿದ್ದು, ಗೋಬ್ಯಾಕ್ ಮೋದಿ ಎಂಬ ಹ್ಯಾಶ್ ಟ್ಯಾಗ್ ಬಳಸಿ ನೆಟ್ಟಿಗರು ಮಾಡಿರುವ ಟ್ವೀಟ್​ಗಳು ಟ್ರೆಂಡ್ ಆಗಿದ್ದವು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ