ಬೆಳ್ತಂಗಡಿ: ಮನೆ ಮೇಲೆ ತೆಂಗಿನ ಮರ ಉರುಳಿ ಹಾನಿ; ಮನೆ ಮಂದಿ ಅಪಾಯದಿಂದ ಪಾರು
Twitter
Facebook
LinkedIn
WhatsApp

ಬೆಳ್ತಂಗಡಿ: ಪಡಂಗಡಿ ಗ್ರಾಮದ ಬದ್ಯಾರು ಸಮೀಪದ ಕಳೆಂಜಿರೋಡಿ ಜೊಬೆಲ್ಲಾ ಫೆಲಿಕ್ಸ್ ಅವರ ಮನೆಗೆ ಶುಕ್ರವಾರ ರಾತ್ರಿ ತೆಂಗಿನ ಮರ ಬಿದ್ದ ಪರಿಣಾಮ ಮನೆ ಸಂಪೂರ್ಣ ಹಾನಿಗೀಡಾಗಿದೆ.
ಫೆಲಿಕ್ಸ್ ಅವರ ಪುತ್ರ ನವೀನ ಹಾಗೂ ಆತನ ಪತ್ನಿ, ಇಬ್ಬರು ಮಕ್ಕಳು ಮನೆಯಲ್ಲಿ ವಾಸವಾಗಿದ್ದರು. ಆದರೆ ಪೂಜೆ ನಿಮಿತ್ತ ಅವರೆಲ್ಲರೂ ಚರ್ಚ್‌ಗೆ ತೆರಳಿದ್ದರಿಂದ ಜೀವಹಾನಿ ತಪ್ಪಿದೆ. ಘಟನಾ ಸ್ಥಳಕ್ಕೆ ಪಂಚಾಯತ್ ಸಿಬಂದಿ ಭೇಟಿ ನೀಡಿದ್ಧಾರೆ.
ಕರಾವಳಿಯಲ್ಲಿ ಮಳೆ ಸಾಧ್ಯತೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎ. 9ರಂದು ಬೆಳಗ್ಗೆವರೆಗೆ ಎಲ್ಲೋ ಅಲರ್ಟ್ ಘೋಷಿಸಿದೆ.
ಜಿಲ್ಲೆಯ ಹಲವೆಡೆ ಶನಿವಾರ ಬೆಳಗ್ಗೆಯಿಂದ ಮೊಡದಿಂದ ಕೂಡಿದ ವಾತಾವರಣ ಇತ್ತು. ಉರಿ ಸೆಕೆ ಹೆಚ್ಚಿತ್ತು. ಮಂಗಳೂರಿನಲ್ಲಿ 34.2 ಡಿ.ಸೆ. ಗರಿಷ್ಠ ಮತ್ತು 23.8 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.