ಸೌದಿ ಅರೇಬಿಯಾದಲ್ಲಿ ಕಾರು ಅಪಘಾತ - ಗಂಭೀರ ಗಾಯಗೊಂಡಿದ್ದ ಉಡುಪಿಯ ಯುವಕ ಮೃತ್ಯು
ಉಡುಪಿ, ಏ 10: ಸೌದಿ ಅರೇಬಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಉಡುಪಿಯ ಯುವಕನೋರ್ವ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಎರಡು ವಾರದ ಹಿಂದೆ ಸೌದಿಯಲ್ಲಿ ರಸ್ತೆ ಅಪಘಾತ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ಕಾಪು ನಿವಾಸಿ ಮಜೂರು ಕೊಂಬಗುಡ್ಡೆ ನಿವಾಸಿ ಮುಹಮ್ಮದ್ ರಿಯಾಝ್(27) ಜುಬೈಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಮಾರ್ಚ್ 25ರಂದು ಜುಬೈಲ್‌ನಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮುಹಮ್ಮದ್ ರಿಯಾಝರನ್ನು ಜುಬೈಲ್‌ನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಿಸದೆ ರವಿವಾರ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರು ತಂದೆತಾಯಿ, ಪತ್ನಿಯನ್ನು ಅಗಲಿದ್ದಾರೆ.
ಕಾಸರಗೋಡು: ಮೀನಿಗೆ ಗಾಳ ಹಾಕಲು ತೆರಳಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು:
ಕಾಸರಗೋಡು, ಏ 10: ಹೊಳೆಯಲ್ಲಿ ಗಾಳ ಹಾಕಿ ಮೀನು ಹಿಡಿಯುತ್ತಿದ್ದಾಗ ಹೊಳೆಗೆ ಬಿದ್ದು ಕೂಲಿ ಕಾರ್ಮಿಕರೋರ್ವ ಮೃತ ಪಟ್ಟ ಘಟನೆ ಉಪ್ಪಳ ಪತ್ವಾಡಿ ಹೊಳೆಯಲ್ಲಿ ನಡೆದಿದೆ.
ಜೋಡುಕಲ್ಲಿನ ಶೇಖರ(48) ಮೃತಪಟ್ಟವರು. ಸ್ನೇಹಿತರ ಜೊತೆ ಮೀನು ಹಿಡಿಯುತ್ತಿದ್ದಾಗ ಆಕಸ್ಮಿಕವಾಗಿ ಹೊಳೆಗೆ ಬಿದ್ದಿದ್ದು ಜೊತೆಗಿದ್ದವರು ಮೇಲಕ್ಕೆತ್ತಿ ಆಸ್ಪತ್ರೆಗೆ ತಲುಪಿಸಿದರೂ ಜೀವ ಉಳಿಸಲಾಗಲಿಲ್ಲ