ಪುತ್ತೂರು: ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ನಾಳೆ (ಏ. 19) ನಾಮಪತ್ರ ಸಲ್ಲಿಕೆ
Twitter
Facebook
LinkedIn
WhatsApp
ಪುತ್ತೂರು :ಅಶೋಕ್ ರೈ ಈ ಬಾರಿ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿತಿದ್ದು ನಾಳೆ ನಾಮಪತ್ರ ಸಲ್ಲಿಸುತ್ತಿದ್ದಾರೆ
ಏಪ್ರಿಲ್ 19 ನೇ ತಾರೀಕಿನಂದು ನಾನು ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಲು ನನ್ನ ನಾಮಪತ್ರವನ್ನು ಸಲ್ಲಿಸುತ್ತಿದ್ದೇನೆ. ಆ ದಿನ ಬೆಳಗ್ಗೆ 9.30 ಕ್ಕೆ ದರ್ಭೆ ಸರ್ಕಲ್ ನಿಂದ ನನ್ನ ಪಾದಯಾತ್ರೆಯ ಮೂಲಕ ಪುತ್ತೂರು ಅಸಿಸ್ಟೆಂಟ್ ಕಮಿಷನರ್ ಅವರ ಕಚೇರಿಗೆ ಹೋಗಿ ನಾನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತಿದ್ದೇನೆ.
ಈ ಸಂದರ್ಭದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಾದ್ಯಂತವಿರುವ ಕಾಂಗ್ರೆಸ್ ಪಕ್ಷದ ಸದಸ್ಯರು, ಕಾರ್ಯಕರ್ತರು, ಪದಾಧಿಕಾರಿಗಳು, ನನ್ನ ಅಭಿಮಾನಿಗಳು, ಎಲ್ಲರೂ ದೊಡ್ಡ ಸಂಖ್ಯೆಯಲ್ಲಿ ಬರಬೇಕು ಅಂತ ನನ್ನ ವಿನಮ್ರ ಕೋರಿಕೆ.