ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಾಧ್ಯಮದವರು ಬಂದು ಮುಖ ತೋರಿಸುವವರೆಗೂ ನಾ ಇಳಿಯಲ್ಲ ;ಟಿಕೆಟ್ ಕೊಡಲಿಲ್ಲವೆಂದು ಟವರ್ ಏರಿ ಕುಳಿತ ಬಿಜೆಪಿ ಕಾರ್ಯಕರ್ತ

Twitter
Facebook
LinkedIn
WhatsApp
census1655064901 2

ಚಿಕ್ಕಮಗಳೂರು: ಟಿಕೆಟ್ ಸಿಗದ ಹಿನ್ನೆಲೆ ಮನನೊಂದು ಬಿಜೆಪಿ ಕಾರ್ಯಕರ್ತನೋರ್ವ (BJP Worker) 100 ಅಡಿ ಎತ್ತರದ ಟವರ್ (Tower) ಏರಿ ಆತ್ಮಹತ್ಯೆಯ ಬೆದರಿಕೆ ಒಡ್ಡಿರುವ ಘಟನೆ ಜಿಲ್ಲೆಯ ಅಜ್ಜಂಪುರ (Ajjampur) ತಾಲೂಕಿನ ಶಿವನಿ ರೈಲ್ವೆ ಸ್ಟೇಷನ್ ಬಳಿ ನಡೆದಿದೆ.

ಟವರ್ ಏರಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಬೆದರಿಸಿರುವ ರಂಗಪ್ಪ ಬೋವಿಯನ್ನು ಕೆಳಗಿಳಿಸಲು ಪೊಲೀಸರು ಹಾಗೂ ಸ್ಥಳೀಯರು ಹರಸಹಾಸಪಡುತ್ತಿದ್ದಾರೆ. ಟಿವಿಯವರು ಬಂದು ಮುಖ ಹಾಗೂ ಲೋಗೋ ತೋರಿಸುವವರೆಗೂ ನಾನು ಕೆಳಗೆ ಇಳಿಯುವುದಿಲ್ಲ ಎಂದು ರಂಗಪ್ಪ ಹಠಕಟ್ಟಿದ್ದಾನೆ.

ನಾನು ಚುನಾವಣೆಗೆ ಸ್ಪರ್ಧಿಸಿದರೆ ಬಿಜೆಪಿಯಿಂದಲೇ ಸ್ಪರ್ಧಿಸಬೇಕು. ಎಸ್‌ಸಿ, ಎಸ್‌ಟಿ ಸಮಾಜಕ್ಕೆ ಮುಂದೆ ಆಗುತ್ತದೆ ಎಂದು ಹೇಳುವುದಕ್ಕಿಂತ ಹಿಂದಿನಿಂದಲೂ ಕೂಡ ಅನ್ಯಾಯವಾಗಿದೆ. ದಲಿತ ಜನರಲ್ಲಿ ಒಗ್ಗಟ್ಟಿಲ್ಲ ಎಂಬ ಭಾವನೆ ಮೂಡಿದೆ. ನೀವೆಲ್ಲ ಸೇರಿ ನನ್ನನ್ನು ಉಳಿಸಿಕೊಳ್ಳುವುದಾದರೆ ಉಳಿಸಿಕೊಳ್ಳಿ. ಇಲ್ಲವಾದರೆ ಕೆಳಗೆ ಬೀಳುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ.

ನನ್ನನು ಏಳುವರೆ ವರ್ಷದ ಹಿಂದೆ ಕರೆದರು. ನೋಡೋದಕ್ಕೆ ಒಳ್ಳೆಯ ಆಳು. ನಿನ್ನನ್ನು ನೋಡಿದರೆ ಜನ ಹೆದರುತ್ತಾರೆ, ಹಣ ಕೊಡುತ್ತಾರೆ. ರೌಡಿಸಂ ಹಾಗೂ ರಿಯಲ್ ಎಸ್ಟೇಟ್‌ಗೆ ಬಾ ಎಂದು ಕರೆದರು. ಆದರೆ ನಾನು ಹೋಗಲಿಲ್ಲ. ನನಗೆ ಡಿಗ್ರಿ ಹಾಗೂ ಡಬಲ್ ಡಿಗ್ರಿ ಓದಿರುವ ಮೂವರು ಮಕ್ಕಳಿದ್ದಾರೆ. ಅವರಿಗೂ ಕೂಡಾ ಫೋನ್ ಆಪರೇಷನ್ ಮೂಲಕ ಕೆಲಸ ಸಿಗದಂತೆ ಮಾಡಿದ್ದಾರೆ. ನನ್ನ ಖಾತೆಯಲ್ಲಿದ್ದ ಹಣವನ್ನೂ ಹ್ಯಾಕ್ ಮಾಡಿದ್ದಾರೆ. ನಾನು ಶಿಕ್ಷಕರು, ಸೈನಿಕರು, ಆರಕ್ಷಕರಿಗೆ ತುಂಬಾ ಬೆಲೆ ಕೊಡುತ್ತೇನೆ. ನಾನು ಸತ್ತರೂ ಕೂಡ ನನ್ನ ಮಕ್ಕಳಿಗಾದರೂ ನ್ಯಾಯ ಕೊಡಿಸಿ ಎಂದು ಮನವಿ ಮಾಡಿದ್ದಾನೆ.

ನನಗಾದ ನೋವು ಬೇರೆ ಯಾವ ಸಣ್ಣ ಹಾಗೂ ಬಡ ಸಮಾಜಗಳಿಗೆ ಆಗಬಾರದು ಎಂದು ಹೇಳಿದ್ದು, ಟವರ್ ಹತ್ತಿ ವೀಡಿಯೋ ರೆಕಾರ್ಡ್ ಮಾಡಿದ್ದಾನೆ. ವೀಡಿಯೋದಲ್ಲಿ ಆತ ಉದ್ಭವ ಆಂಜನೇಯ ಸ್ವಾಮಿ, ನಿರಂಜನ ಸ್ವಾಮೀಜಿಗೆ ವಂದನೆ ತಿಳಿಸಿದ್ದಾನೆ. ಆತನನ್ನು ಟವರ್‌ನಿಂದ ಕೆಳಗಿಳಿಸಲು ಅಜ್ಜಂಪುರ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ