ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುಪ್ರೀಂಕೋರ್ಟ್‌ನಲ್ಲಿ ಜನಾರ್ದನ ರೆಡ್ಡಿಗೆ ಹಿನ್ನಡೆ ಬಳ್ಳಾರಿ ಪ್ರವೇಶಕ್ಕೆ ಅವಕಾಶ ಇಲ್ಲ

Twitter
Facebook
LinkedIn
WhatsApp
Madhuri Dixit Nene in white chikankari Tarun Tahiliani lehenga 3

ನವದೆಹಲಿ: ಕೆಆರ್‌ಪಿಪಿ (KRPP) ಪಕ್ಷ ಸ್ಥಾಪಿಸಿ ರಾಜ್ಯ ವಿಧಾನಸಭೆ ಚುನಾವಣೆ ಅಖಾಡಕ್ಕೆ ಇಳಿದಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ (Janardhan Reddy) ಸುಪ್ರೀಂಕೋರ್ಟ್‌ನಲ್ಲಿ (Supreme Court) ಹಿನ್ನಡೆಯಾಗಿದೆ. ಪತ್ನಿ ಅರುಣಾ ಪರ ಪ್ರಚಾರ ಮಾಡುವ ಲೆಕ್ಕಚಾರದಲ್ಲಿದ್ದ ರೆಡ್ಡಿಗೆ ಸುಪ್ರೀಂಕೋರ್ಟ್ ಬಳ್ಳಾರಿಗೆ (Ballari) ಪ್ರವೇಶವನ್ನು ನಿರಾಕರಿಸಿದೆ.

ರಾಜ್ಯ ವಿಧಾನಸಭೆ ಚುನಾವಣೆ (Karnataka Election) ಹಿನ್ನಲೆ ಬಳ್ಳಾರಿ ತೆರಳಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಜನಾರ್ದನ ರೆಡ್ಡಿ ಮುಂದಾಗಿದ್ದರು. ಈ ಹಿನ್ನಲೆ ಬಳ್ಳಾರಿ ಪ್ರವೇಶಕ್ಕೆ ನೀಡಿರುವ ಅನುಮತಿಯನ್ನು ವಿಸ್ತರಿಸಬೇಕು ಎಂದು ಸುಪ್ರೀಂಗೆ ಮನವಿ ಮಾಡಿದ್ದರು. ಇಂದು ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಎಂ ಆರ್ ಶಾ ನೇತೃತ್ವದ ದ್ವಿಸದಸ್ಯ ಪೀಠ ಅನುಮತಿ ನಿರಾಕರಿಸಿತು.

ವಿಚಾರಣೆ ವೇಳೆ ವಾದ ಮಂಡಿಸಿದ ಹಿರಿಯ ವಕೀಲೆ ಮೀನಾಕ್ಷಿ ಅರೋರಾ, ರೆಡ್ಡಿ ಮೊಮ್ಮಗಳ ಜನನ ಹಿನ್ನಲೆ ಬಳ್ಳಾರಿ ತೆರಳಲು ಅನುಮತಿ ನೀಡಿತ್ತು. ಜನಾರ್ದನ ರೆಡ್ಡಿಗೆ ವಿಧಿಸಿದ್ದ ಜಾಮೀನು ಷರತ್ತುಗಳನ್ನು ಸಡಿಲಗೊಳಿಸಿತ್ತು. ಅದನ್ನು ಸದ್ಯ ವಿಸ್ತರಿಸಬೇಕು ಎಂದು ಮನವಿ ಮಾಡಿದರು. ಅನುಮತಿ ನಿರಾಕರಿಸಿ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ರೆಡ್ಡಿ ಪರ ವಕೀಲರು ಅರ್ಜಿಯನ್ನು ವಾಪಸ್ ಪಡೆದರು.

ಸುಪ್ರೀಂಕೋರ್ಟ್ ನಿರ್ಧಾರದಿಂದ ಜನಾರ್ದನ ರೆಡ್ಡಿಗೆ ತೀವ್ರ ಹಿನ್ನಡೆಯಾಗಿದ್ದು ಬಳ್ಳಾರಿಗೆ ತೆರಳುವ ಅವಕಾಶದಿಂದ ವಂಚಿತರಾಗಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಪತ್ನಿ ಅರುಣಾ ಸೇರಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡದಂತಹ ಪರಿಸ್ಥಿತಿಯಲ್ಲಿದ್ದಾರೆ. ಅಕ್ರಮ ಗಣಿಗಾರಿಕೆ ಆರೋಪ ಎದುರಿಸುತ್ತಿರುವ ಗಾಲಿ ಜನಾರ್ದನ ರೆಡ್ಡಿ ಬಳ್ಳಾರಿ ಜಿಲ್ಲೆ ಪ್ರವೇಶಿಸದಂತೆ ಷರತ್ತು ವಿಧಿಸಿ ಜಾಮೀನು ನೀಡಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ