ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಲೈಂಗಿಕ ಕಿರುಕುಳ ಅನುಭವಿಸುತ್ತಿರುವ ನಟಿ ಐಶ್ವರ್ಯಾ

Twitter
Facebook
LinkedIn
WhatsApp
342209727 1587805555027553 6420748993116079768 n 6

ನಟಿಯರಿಗೆ ಸಾಮಾಜಿಕ ಜಾಲತಾಣಗಳು (Social Media) ವರಕ್ಕಿಂತಲೂ ಶಾಪವಾಗಿ ಪರಿಣಮಿಸಿರುವುದೇ ಹೆಚ್ಚು. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಬಹುತೇಕ ನಟಿಯರು ಟ್ರೋಲಿಂಗ್, ಬಾಡಿ ಶೇಮಿಂಗ್ (Body Shaming) ಲೈಂಗಿಕ ಲೈಂಗಿಕ ಕಿರುಕುಳಗಳನ್ನು ಎದುರಿಸುತ್ತಲೇ ಬರುತ್ತಿದ್ದಾರೆ. ಕೆಲವರು ಧೈರ್ಯವಾಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಕೆಲವರು ಬಹಿರಂಗವಾಗಿ ಈ ಸಮಸ್ಯೆಯ ಬಗ್ಗೆ ಚರ್ಚಿಸಿದ್ದಾರೆ. ಆದರೆ ಇದು ಅಂತ್ಯವಂತೂ ಆಗಿಲ್ಲ. ಇದೀಗ ನಟಿ ಐಶ್ವರ್ಯಾ ಭಾಸ್ಕರನ್ ಈ ಆನ್​ಲೈನ್ ಲೈಂಗಿಕ ಕಿರುಕುಳದಿಂದ ಅನುಭವಿಸುತ್ತಿರುವ ಮಾನಸಿಕ ಹಿಂಸೆಯ ಬಗ್ಗೆ ಮಾತನಾಡಿದ್ದಾರೆ.

ಐಶ್ವರ್ಯಾ ಭಾಸ್ಕರನ್ (Aishwarya Bhaskaran), ಖ್ಯಾತ ನಟಿ ಜೂಲಿ ಲಕ್ಷ್ಮಿ ಪುತ್ರಿ. ತೆಲುಗು ತಮಿಳಿನ ಹಲವು ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿರುವ ಇವರು ಹಲವು ಟಿವಿ ಧಾರಾವಾಹಿಗಳಲ್ಲಿಯೂ ನಟಿಸುತ್ತಿದ್ದಾರೆ. ಸಂಕಷ್ಟದ ಜೀವನ ನಡೆಸುತ್ತಿದ್ದ ವೇಳೆಯಲ್ಲಿ ಸೋಪು ಮಾರಾಟವನ್ನೂ ಮಾಡುತ್ತಿದ್ದರು, ಈಗಲೂ ಆ ಬ್ಯುಸಿನೆಸ್ ಮುಂದುವರೆಸುತ್ತಿದ್ದಾರೆ. ತಮ್ಮ ಸೋಪನ್ನು ಹೆಚ್ಚು ಮಂದಿಗೆ ತಲುಪಿಸುವ ನಿಟ್ಟಿನಲ್ಲಿ ಸಂದರ್ಶನವೊಂದರಲ್ಲಿ ತಮ್ಮ ಮೊಬೈಲ್ ನಂಬರ್ ಅನ್ನು ನಟಿ ಬಹಿರಂಗಪಡಿಸಿದ್ದರು. ಆಗಿನಿಂದ ಅವರಿಗೆ ಕಿರುಕುಳ ಪ್ರಾರಂಭವಾಗಿದೆ.

ಮೊಬೈಲ್​ ನಂಬರ್​ಗೆ ಹಲವಾರು ಮಂದಿ ಕಟ್ಟ-ಕೆಟ್ಟದಾಗಿ ಸಂದೇಶಗಳನ್ನು ಕಳಿಸುತ್ತಿದ್ದಾರೆ. ಕೆಲವು ಪುರುಷರು ತಮ್ಮ ಮರ್ಮಾಂಗದ ಚಿತ್ರಗಳನ್ನು ಕಳಿಸಿದ್ದಾರೆ. ಇನ್ನು ಕೆಲವರು ತಮ್ಮ ಚಿತ್ರವನ್ನು ತಿದ್ದಿ ಅಸಭ್ಯ ಚಿತ್ರವನ್ನಾಗಿ ಎಡಿಟ್ ಮಾಡಿ ನನಗೇ ಕಳಿಸಿದ್ದಾರೆ. ಕೆಟ್ಟ-ಕೆಟ್ಟದಾಗಿ ಕಮೆಂಟ್​ಗಳನ್ನು ಮಾಡಿದ್ದಾರೆ ಒಟ್ಟಾರೆ ನನ್ನ ಮಾನಸಿಕ ನೆಮ್ಮದಿಯನ್ನು ಹಾಳು ಮಾಡುತ್ತಿದ್ದಾರೆ. ತೀವ್ರ ಕಿರುಕುಳ ನೀಡುತ್ತಿದ್ದಾರೆ, ಕರೆ ಮಾಡಿ ಕೆಟ್ಟದಾಗಿ ಮಾತನಾಡಿದ್ದಾರೆ ಎಂದು ಐಶ್ವರ್ಯಾ ಹೇಳಿದ್ದಾರೆ.

ನಾನು ಅನುಭವಿಸುತ್ತಿರುವ ಕಿರುಕುಳದ ಬಗ್ಗೆ ಬಹಿರಂಗವಾಗಿ ಮಾತನಾಡುವುದು ಬೇಡ ಎಂದುಕೊಂಡು ಸುಮ್ಮನಿದ್ದೆ ಆದರೆ ನನ್ನ ಮಗಳೇ ಇದರ ವಿರುದ್ಧ ಏನಾದರೂ ಕ್ರಮ ಜರುಗಿಸಲೇ ಬೇಕು ಎಂದು ಹೇಳಿದಳು, ಹಾಗಾಗಿ ಈ ಬಗ್ಗೆ ಮಾತನಾಡುತ್ತಿದ್ದೇನೆ, ಪೊಲೀಸರಿಗೆ ದೂರು ನೀಡುವ ಉದ್ದೇಶವೂ ಇರಲಿಲ್ಲ ಆದರೆ ದಿನೇ-ದಿನೇ ಕಿರುಕುಳ ಹೆಚ್ಚಾದ ಕಾರಣ ಅದರ ಬಗ್ಗೆಯೂ ಯೋಚಿಸುತ್ತದ್ದೇನೆ. ನನಗೆ ಕೆಟ್ಟದಾಗಿ ಸಂದೇಶ ಕಳಿಸುವವರ ವಿರುದ್ಧ ಕಾನೂನು ಮೂಲಕ ಸಮರ ಸಾರಲಿದ್ದೇನೆ ಎಂದಿದ್ದಾರೆ.

ತಮ್ಮ ಸೋಪಿನ ಬ್ಯುಸಿನೆಸ್​ ಬಗ್ಗೆಯೂ ಮಾತನಾಡಿರುವ ಐಶ್ವರ್ಯಾ ಬಾಲಕೃಷ್ಣ, ಇತ್ತೀಚೆಗೆ ನಟನೆಯ ಅವಕಾಶಗಳು ಕಡಿಮೆ ಆಗಿರುವ ಸೋಪಿನ ಉದ್ಯಮವೇ ನನ್ನ ಏಕೈಕ ಹಾಗೂ ಪ್ರಮುಖ ಆದಾಯದ ಮೂಲವಾಗಿದೆ. ಉದ್ಯಮವನ್ನು ನಾನು ಮುಂದುವರೆಸುತ್ತಿದ್ದೇನೆ ಎಂದಿದ್ದಾರೆ. ಕೋವಿಡ್ ಸಮಯದಲ್ಲಿ ಮನೆ-ಮನೆಗೆ ತೆರಳಿ ಸೋಪು ಮಾರಿದ್ದಾಗಿಯೂ ನಟಿ ಐಶ್ವರ್ಯಾ ಹೇಳಿಕೊಂಡಿದ್ದರು.

ಐಶ್ವರ್ಯಾ ಬಾಲಕೃಷ್ಣ, ನಟಿ ಜೂಲಿ ಲಕ್ಷ್ಮಿಯವರ ಪುತ್ರಿ. ಬಹಳ ಹಿಂದೆಯೇ ಪತಿಯಿಂದ ವಿಚ್ಛೇದನ ಪಡೆದು ಮಗಳೊಟ್ಟಿಗೆ ಒಬ್ಬರೇ ಬದುಕುತ್ತಿದ್ದಾರೆ ಈ ನಟಿ. ಐಶ್ವರ್ಯಾ ಅವರು ತಮಗಾಗುತ್ತಿರುವ ಸಮಸ್ಯೆಗಳ ಬಗ್ಗೆ ಹೇಳಿಕೊಂಡ ಬಳಿಕ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಬೆಂಬಲ ವ್ಯಕ್ತವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist