ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೊಹ್ಲಿ ದಾಖಲೆ ಮುರಿದ ಕೆಎಲ್ ರಾಹುಲ್!

Twitter
Facebook
LinkedIn
WhatsApp
ಕೊಹ್ಲಿ ದಾಖಲೆ ಮುರಿದ ಕೆಎಲ್ ರಾಹುಲ್!

IPL 2023: ಐಪಿಎಲ್​ನ 30ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಅರ್ಧಶತಕ ಬಾರಿಸಿ ಮಿಂಚಿದ್ದರು. ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದ ರಾಹುಲ್ 61 ಎಸೆತಗಳಲ್ಲಿ 8 ಫೋರ್​ನೊಂದಿಗೆ 68 ರನ್​ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಕೆಎಲ್​ಆರ್​ ಟಿ20 ಕ್ರಿಕೆಟ್​ನಲ್ಲಿ 7 ಸಾವಿರ ರನ್ ಪೂರೈಸಿದ್ದಾರೆ. ಅದು ಕೂಡ ವಿರಾಟ್ ಕೊಹ್ಲಿಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. 

ಅಂದರೆ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 7 ಸಾವಿರ ರನ್ ಪೂರೈಸಿದ್ದ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು. ಕೇವಲ 212 ಇನಿಂಗ್ಸ್​ಗಳ ಮೂಲಕ ಕಿಂಗ್ ಕೊಹ್ಲಿ ಈ ಸಾಧನೆ ಮಾಡಿದ್ದರು. ಇದೀಗ ಈ ದಾಖಲೆ ಮುರಿದು ಕೆಎಲ್ ರಾಹುಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. 

ಕೇವಲ 197 ಟಿ20 ಇನಿಂಗ್ಸ್​ಗಳ ಮೂಲಕ ಕೆಎಲ್ ರಾಹುಲ್ 7 ಸಾವಿರ ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗವಾಗಿ ಏಳು ಸಾವಿರ ರನ್ ಪೂರೈಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ. ಪಾಕ್ ಆಟಗಾರ ಕೇವಲ 187 ಇನಿಂಗ್ಸ್​ಗಳ ಮೂಲಕ ಟಿ20 ಕ್ರಿಕೆಟ್​ನಲ್ಲಿ 7 ಸಾವಿರ ರನ್ ಕಲೆಹಾಕಿದ್ದಾರೆ.

ಅಂದಹಾಗೆ ಕೆಎಲ್ ರಾಹುಲ್ ಅವರ ಈ ದಾಖಲೆಯ ಇನಿಂಗ್ಸ್ ಹೊರತಾಗಿಯೂ ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಸೋಲನುಭವಿಸಿರುವುದೇ ಅಚ್ಚರಿ. ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ನೀಡಿದ 136 ರನ್​ಗಳ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ 7 ವಿಕೆಟ್ ನಷ್ಟಕ್ಕೆ 128 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಇದರೊಂದಿಗೆ ಗುಜರಾತ್ ಟೈಟಾನ್ಸ್ ತಂಡ 7 ರನ್​ಗಳ ರೋಚಕ ಜಯ ತನ್ನದಾಗಿಸಿಕೊಂಡಿತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ