ಗುರುವಾರ, ನವೆಂಬರ್ 21, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ದ.ಕ.ಜಿಲ್ಲೆ: 12 ಅಭ್ಯರ್ಥಿಗಳಿಂದ ನಾಮಪತ್ರ ಹಿಂತೆಗೆತ

Twitter
Facebook
LinkedIn
WhatsApp
ದ.ಕ.ಜಿಲ್ಲೆ: 12 ಅಭ್ಯರ್ಥಿಗಳಿಂದ ನಾಮಪತ್ರ ಹಿಂತೆಗೆತ

ಮಂಗಳೂರು: ದ.ಕ. ಜಿಲ್ಲೆಯ ೮ ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 12 ಮಂದಿ ಅಭ್ಯರ್ಥಿಗಳು ನಾಮಪತ್ರವನ್ನು ಹಿಂಪಡೆದಿದ್ದಾರೆ. ದ.ಕ.ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳಿಗೆ 72 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಅಂತಿಮವಾಗಿ 60 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈ ಪೈಕಿ 52 ಪುರುಷ ಮತ್ತು 8 ಮಂದಿ ಮಹಿಳಾ ಅಭ್ಯರ್ಥಿಗಳಿದ್ದಾರೆ.

ಮಂಗಳೂರು ನಗರ ಉತ್ತರ ಕ್ಷೇತ್ರದಿಂದ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ಕಾಟಿಪಳ್ಳ ಮುಹಮ್ಮದ್ ನವಾಝ್, ಸುಪ್ರೀತ್ ಕುಮಾರ್ ಪೂಜಾರಿ, ಬಂಟ್ವಾಳ ಕ್ಷೇತ್ರದಿಂದ ಅಬ್ದುಲ್ ಮಜೀದ್ ಖಾನ್, ಬೆಳ್ತಂಗಡಿಯಿಂದ ಕೆ. ಸುಬ್ರಹ್ಮಣ್ಯ ಭಟ್, ನವಾಝ್ ಶರೀಫ್ , ಮೂಡುಬಿದಿರೆಯಿಂದ ಮ್ಯಾಕ್ಸಿಂ ಪಿಂಟೋ, ಪುತ್ತೂರಿನಿಂದ ಪಿ. ಇಬ್ರಾಹಿಂ, ಮುಹಮ್ಮದ್ ಅಶ್ರಫ್ ಕಲ್ಲೇಗ, ಮಂಗಳೂರು ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ನಾಮಪತ್ರ ಸಲ್ಲಿಸಿದ್ದ ಅಲ್ತಾಫ್ , ಪಕ್ಷೇತರಾಗಿ ಮುಹಮ್ಮದ್ ಅತಾವುಲ್ಲಾ, ಜನಹಿತ ಪಕ್ಷದಿಂದ ಬಾಲಕೃಷ್ಣ ಪೂಜಾರಿ ಬೋಳಿಯಾರು ಹಾಗೂ ಸುಳ್ಯ ಕ್ಷೇತ್ರದಿಂದ ಪಕ್ಷೇತರಾಗಿ ಸತೀಶ್ ಬೂಡುಮಕ್ಕಿ ನಾಮಪತ್ರ ಹಿಂಪಡೆದಿದ್ದಾರೆ. ಸೋಮವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು.

ಮಂಗಳೂರು ದಕ್ಷಿಣ ಮತ್ತು ಬಂಟ್ವಾಳ ಕ್ಷೇತ್ರದ ಯಾವೊಬ್ಬ ಅಭ್ಯರ್ಥಿಯೂ ನಾಮಪತ್ರ ಹಿಂಪಡೆದಿಲ್ಲ.

ಮಂಗಳೂರು: ಬೆದರಿಕೆ ಹಾಕಿ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ನಾಮಪತ್ರ ಹಿಂಪಡೆಯಲಾಗಿದೆ-ಜೆಡಿಎಸ್ ಮುಖಂಡರ ಆರೋಪ:

ಮಂಗಳೂರು, ಏ 24: ಉಳ್ಳಾಲದಲ್ಲಿ ಜೆಡಿಎಸ್ ಅಭ್ಯರ್ಥಿ ನಾಮಪತ್ರ ವಾಪಾಸ್ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಜೆ.ಡಿ.ಎಸ್ ರಾಜ್ಯ ವಕ್ತಾರ ಎಂ.ಬಿ.ಸದಾಶಿವ ಸುದ್ದಿಗೋಷ್ಠಿ ನಡೆಸಿದ್ದು, ಬೆದರಿಕೆ ಹಾಕಿಸಿ ಅಲ್ತಾಫ್ ಅವರಿಂದ ನಾಮಪತ್ರ ವಾಪಸ್ ಪಡೆಯಲಾಗಿದೆ ಎಂದು ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಎಂಟು ಕ್ಷೇತ್ರಗಳಲ್ಲಿ ಜಿಲ್ಲೆಯಲ್ಲಿ ನಾಮಪತ್ರ ಸಲ್ಲಿಸಿದ್ದೇವೆ. ನಮ್ಮ ಎಂಟೂ ನಾಮಪತ್ರಗಳು ಸಿಂಧುವಾಗಿ ಸ್ವೀಕಾರವಾಗಿದೆ. ಮಂಗಳೂರು ಉತ್ತರದಲ್ಲಿ ಪ್ರಭಾವಿ ನಾಯಕ ಮೊಯಿದ್ದೀನ್ ಬಾವಾ ಸ್ಪರ್ಧೆ ಮಾಡಿದ್ದಾರೆ. ಮಂಗಳೂರು ಕ್ಷೇತ್ರದಲ್ಲಿ ಅಲ್ತಾಫ್ ಎಂಬ ಅಭ್ಯರ್ಥಿಯನ್ನ ಆಯ್ಕೆ ಮಾಡಿದ್ದೆವು. ಜನಸಾಮಾನ್ಯರಿಗೆ ಬೇಕೆನಿಸಿದ ಸಾಮಾಜಿಕ ಕಳಕಳಿಯ ವ್ಯಕ್ತಿ ಅವರು. ಇವರಿಗೆ ಜನರ ಪ್ರೀತಿ, ವಿಶ್ವಾಸ ಇದೆ, ಉತ್ತಮ ನಾಯಕ ಇವರು. ಅಲ್ತಾಪ್ ಎ.20ರಂದು ಉಳ್ಳಾಲದಲ್ಲಿ ನಾಮಪತ್ರ ಸಲ್ಲಿಸಿದ್ದರು. ಮುಂದೆ ಅವರ ಹಬ್ಬದ ದಿನ ಮಸೀದಿಯಲ್ಲಿ ಪ್ರಾರ್ಥನೆ ಮಾಡಿ ಹೊರ ಬರ್ತಾ ಇದ್ದರು. ಆ ವೇಳೆ ಯಾರೋ ಅವರನ್ನು ಕರೆದುಕೊಂಡು ಹೋಗಿ ಪತ್ರಕ್ಕೆ ಸಹಿ ಹಾಕಿಸಿ ಚುನಾವಣಾಧಿಕಾರಿ ಎದುರು ನಿಲ್ಲಿಸಿದರು. ಚುನಾವಣಾಧಿಕಾರಿ ಎದುರು ನಿಲ್ಲಿಸಿ ನಾಮ ಪತ್ರ ವಾಪಸ್ ತೆಗೆಸಿದರು. ಸಜ್ಜನ ವ್ಯಕ್ತಿ ಕುಟುಂಬದ ಬೆದರಿಕೆಗೆ ಒಳಗಾಗಿ ನಾಮ ಪತ್ರ ವಾಪಸ್ ಪಡೆದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಇಂಥಹ ಘಟನೆ ಇಡೀ ಜಿಲ್ಲೆಗೆ ಒಂದು ಕಪ್ಪು ಚುಕ್ಕೆಯಾಗಿದೆ. ಒಬ್ಬ ಸಾಮಾನ್ಯ ವ್ಯಕ್ತಿಯನ್ನು ಎದುರಿಸಲಾಗದವರು ಎಂಥ ನಾಯಕ? ಇದನ್ನ ನಾವು ಉಗ್ರವಾಗಿ ಖಂಡಿಸ್ತೇವೆ, ಕಾನೂನು ಮೂಲಕ ಹೋರಾಟ ಮಾಡ್ತೇವೆ ಎಂದಿದ್ದಾರೆ. ಪೊಲೀಸ್ ಕಮಿಷನರ್ ಹಾಗೂ ಚುನಾವಣಾಧಿಕಾರಿಗೆ ದೂರು ನೀಡಿದ್ದೇವೆ. ಒಬ್ಬ ಪ್ರಭಾವಿ ಮತ್ತು ರಾಷ್ಟ್ರೀಯ ಪಕ್ಷದ ಅಭ್ಯರ್ಥಿಯ ಷಡ್ಯಂತ್ರ ಇದಾಗಿದೆ ಎಂದು ಅವರು ದೂರಿದ್ದಾರೆ. ಒಬ್ಬ ಸಾಮಾನ್ಯ ಅಭ್ಯರ್ಥಿಯನ್ನ ಎದುರಿಸಲು ಆಗಿಲ್ಲ. ಇಂಥ ಹುನ್ನಾರಕ್ಕೆ ಖಂಡನೆ ಇದೆ, ಸಂಬಂಧ ಪಟ್ಟವರ ತನಿಖೆ ಆಗಲಿ ಎಂದು ಅವರು ಆಗ್ರಹಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ