ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪಗೆ​ ಶಾಕ್; ಜಗದೀಶ್ ಶೆಟ್ಟರ್​ ಗೆಲುವಿಗೆ ಲಿಂಗಾಯತ ಮುಖಂಡರು ಶಪಥ..?

Twitter
Facebook
LinkedIn
WhatsApp

ಹುಬ್ಬಳ್ಳಿ: ಕಾಂಗ್ರೆಸ್‌  ಸೇರ್ಪಡೆಯಾಗಿರುವ ಮಾಜಿ ಸಿಎಂ ಜಗದೀಶ ಶೆಟ್ಟರ್‌ ಅವರನ್ನು ಸೋಲಿಸಲು ಬಿಜೆಪಿ ಪಣ ತೊಟ್ಟಿದೆ. ಇದರಿಂದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಗೆಲುವಿಗೆ ರಾಜ್ಯ ಹಾಗೂ ಕೇಂದ್ರ ನಾಯಕರು ಇನ್ನಿಲ್ಲದ ತಂತ್ರಗಳನ್ನು ರೂಪಿಸುತ್ತಿದ್ದಾರೆ. ಸಾಲದಕ್ಕೆ ಜಗದೀಶ್​ ಶೆಟ್ಟರ್ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಮೂಲಕ ಲಿಂಗಾಯತ ಅಸ್ತ್ರ ಪ್ರಯೋಗಿಸಿದೆ.​ ಅದರಂತೆ ಮಾಜಿ ಸಿಎಂ ಯಡಿಯೂರಪ್ಪ ಲಿಂಗಾಯತ ಮುಖಂಡರ ಸಭೆ ನಡೆಸಿದ ಬೆನ್ನಲ್ಲೇ ಇದೀಗ ಶೆಟ್ಟರ್‌ ಕೂಡ ವೀರಶೈವ ಲಿಂಗಾಯತ ಮುಖಂಡರ ಸಭೆ ನಡೆಸಿದ್ದು, ಶೆಟ್ಟರ್‌ ಗೆಲುವಿಗೆ ಶ್ರಮಿಸುವುದಾಗಿ ಸಭೆಯಲ್ಲಿದ್ದ ಎಲ್ಲರೂ ಶಪಥ ಕೂಡ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರವನ್ನು ಮತ್ತಷ್ಟು ರಂಗೇರುವಂತೆ ಮಾಡಿದೆ. ಅಲ್ಲದೇ ಜಗದೀಶ್ ಶೆಟ್ಟರ್​ ಅವರು ಬಿಜೆಪಿ ನಾಯಕರಿಗೆ ಚೆಕ್ ಮೆಟ್ ಕೊಟ್ಟಿದ್ದಾರೆ.

ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ವೀರಶೈವ ಲಿಂಗಾಯತ ಮುಖಂಡರ ಸಭೆ ನಡೆಸಿದ ಜಗದೀಶ್ ಶೆಟ್ಟರ್‌, ತಮಗೆ ಬಿಜೆಪಿಯಲ್ಲಿ ಆದ ಅಪಮಾನ ಹಾಗೂ ಸ್ವಾಭಿಮಾನಕ್ಕೆ ಧಕ್ಕೆಯಾಗಿರುವುದರಿಂದ ಆ ಪಕ್ಷ ತೊರೆದಿದ್ದೇನೆ. ಇದೀಗ ಕಾಂಗ್ರೆಸ್‌ ಸೇರಿದ್ದೇನೆ. ಈ ಹಿಂದೆಯೂ ನೀವು ನನಗೆ ಬೆಂಬಲಿಸಿದ್ದೀರಿ. ಈಗಲೂ ಬೆಂಬಲಿಸಬೇಕು ಎಂದು ಮನವಿ ಮಾಡಿದರು. ಬಳಿಕ ಸಭೆಯಲ್ಲಿದ್ದವರೆಲ್ಲರೂ ಕೈ ಎತ್ತುವ ಮೂಲಕ ಜಗದೀಶ್​ ಶೆಟ್ಟರ್‌ಗೆ ಬೆಂಬಲ ಸೂಚಿಸಿದರು.

 

ಈ ವೇಳೆ ಬಂಗಾರೇಶ ಹಿರೇಮಠ ಮಾತನಾಡಿ, ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಶೆಟ್ಟರ್‌ ಮತ್ತೆ ಅತ್ಯುನ್ನತ ಸ್ಥಾನ ಅಲಂಕರಿಸುವ ಅವಕಾಶವಿದೆ. ಕಾರಣ ನಾವೆಲ್ಲರೂ ನಾವೇ ಅಭ್ಯರ್ಥಿ ಎಂದು ಕೆಲಸ ಮಾಡಿ ಹೆಚ್ಚಿನ ಅಂತರದಲ್ಲಿ ಗೆಲ್ಲಿಸೋಣ. ಅಲ್ಲಿವರೆಗೂ ವಿಶ್ರಮಿಸುವುದು ಬೇಡ ಎಂದು ಮನವಿ ಮಾಡಿದರು.

ಇನ್ನು ರಾಜಶೇಖರ ಮೆಣಸಿನಕಾಯಿ ಮಾತನಾಡಿ, 1994ರ ಚುನಾವಣೆಯಲ್ಲಿನ ಒಗ್ಗಟ್ಟು ಈ ಚುನಾವಣೆಯಲ್ಲಿ ಕಂಡು ಬರುತ್ತಿದೆ. ಬಿಜೆಪಿಯವರ ಪೊಳ್ಳು ಬೆದರಿಕೆಗಳಿಗೆ ಭಯ ಪಡದೆ ನಾವೆಲ್ಲರೂ ಶೆಟ್ಟರ್‌ ಗೆಲುವಿಗೆ ಎಲ್ಲರೂ ಶ್ರಮಿಸೋಣ ಎಂದರು.

ಎಲ್ಲರ ಭಾಷಣದ ಬಳಿ ಯಾರೂ ನಮ್ಮ ಜೊತೆ ಇರ್ತಾರೆ ಅವರನ್ನು ಬೆಂಬಲಿಸೋಣ. ನಮ್ಮ ನೋವಿಗೆ ಸ್ಪಂದಿಸುವವರಿಗೆ ಮತ ಹಾಕೋಣ ಎಂದು ಸಭೆಯಲ್ಲಿದ್ದ ಸುಮಾರು 200 ಕ್ಕೂ ಹೆಚ್ಚು ವೀರಶೈವ ಲಿಂಗಾಯತ ಮುಖಂಡರು ಕೈ ಎತ್ತಿ ಗೆಲ್ಲಿಸುವ ಶಪಥ ಮಾಡಿದರು. ಇದರೊಂದಿಗೆ ಜಗದೀಶ್​ ಶೆಟ್ಟರ್ ಅವರಿಗೆ ಮತ್ತಷ್ಟು ಬಲ ಬಂದಂತಾಗಿದೆ.

ಈ ವೇಳೆ ಮಾಜಿ ಸಂಸದ ಐ.ಜಿ.ಸನದಿ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅನಿಲಕುಮಾರ ಪಾಟೀಲ, ನೀಲಕಂಠ ಅಸೂಟಿ, ಗಂಗಾಧರ ದೊಡ್ಡವಾಡ, ಮಲ್ಲಿಕಾರ್ಜುನ ಸಾವಕಾರ, ಬಾಪೂಗೌಡ ಪಾಟೀಲ, ಶಿವಪುತ್ರಪ್ಪ ಕಮತರ , ಸದಾಶಿವಯ್ಯ ಹಿರೇಮಠ , ಕಲ್ಲಪ್ಪ ಯಲಿವಾಳ , ಆರ್‌.ಕೆ.ಪಾಟೀಲ್‌, ಎಂ.ಎಸ್‌.ಪಾಟೀಲ್‌, ಸುನೀಲ್‌ ಮಠಪತಿ, ಸರೋಜಾ ಹೂಗಾರ, ಸುನಿತಾ ಹುರಕಡ್ಲಿ ಸೇರಿದಂತೆ ಮತ್ತಿತರರು ಇದ್ದರು.

ಯಡಿಯೂರಪ್ಪ ಹೇಳಿದ್ದೇನು?

ಯಾವುದೇ ಸಮೀಕ್ಷೆ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ಯಾವ ಕಾರಣಕ್ಕೂ ಶೆಟ್ಟರ್ ಇಲ್ಲಿಂದ ಗೆಲ್ಲಲು ಸಾಧ್ಯವಿಲ್ಲ. ನಾಳೆ ರಾಲಿ ಏರ್ಪಡಿಸಲಾಗಿದೆ. ಹತ್ತಾರು ಸಾವಿರ ಜನರನ್ನು ಸೇರಿಸಿ ಶಕ್ತಿ ಪ್ರದರ್ಶನ‌ ಮಾಡಿ. ರಾಜಕೀಯ ದೊಂಬರಾಟ ಮಾಡುವವರಿಗೆ ತಕ್ಕ ಪಾಠ ಕಲಿಸಬೇಕು. ಇವತ್ತಿನಿಂದ ಜಗದೀಶ್ ಶೆಟ್ಟರ್ ಹೆಸರನ್ನು ಹೇಳಲ್ಲ. ನಂಬಿಕೆ‌ ದ್ರೋಹಿ, ವಿಶ್ವಾಸ ದ್ರೋಹಿ ಪಕ್ಷಾಂತರಿಗಳಿಗೆ ಕ್ಷಮಿಸುವುದಿಲ್ಲ ಎನ್ನುವ ಸುದ್ದಿ ಎಲ್ಲೆಡೆ ಹೋಗಬೇಕು. ಪ್ರಹ್ಲಾದ್ ಜೋಶಿ‌ ಮತ್ತು ಇತರೆ ನಾಯಕರು ಕೆಲಸ ಬದಿಗೊತ್ತಿ ಎಲ್ಲ‌ ಮುಖಂಡರು‌ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ. ಜಗದೀಶ್ ಶೆಟ್ಟರ್ ಕಂಪನಿಗೆ ಪಾಠ ಕಲಿಸಬೇಕು. ಶೆಟ್ಟರ್ ಸೋಲಿಸುವುದೇ ನಮ್ಮ ಗುರಿಯಾಗಬೇಕು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ವೀರಶೈವ ಲಿಂಗಾಯತರ ಸಭೆಯಲ್ಲಿ ಹೇಳಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist