ಬೈಕ್‌ನಲ್ಲಿ ಪತ್ನಿಯೊಂದಿಗೆ ಮೊಬೈಲ್‌ನಲ್ಲಿ ಮಾತನಾಡುತ್ತಾ ಮನೆಗೆ ಹೋಗುವಾಗ ಸಿಡಿಲು ಬಡಿದು ನವವಿವಾಹಿತ ಯುವಕ ಮೃತ್ಯು!

ಮಂಡ್ಯ;ಬೈಕ್‌ನಲ್ಲಿ ಪತ್ನಿಯೊಂದಿಗೆ ಮೊಬೈಲ್‌ನಲ್ಲಿ ಮಾತನಾಡುತ್ತಾ ಮನೆಗೆ ಹೋಗುವಾಗ ಸಿಡಿಲು ಬಡಿದು ಯುವಕನೋರ್ವ ಸಾವನ್ನಪ್ಪಿರುವ ದುರ್ಘಟನೆ ಮಂಡ್ಯದಲ್ಲಿ ನಡೆದಿದೆ.ನಿನ್ಮೆ ಮತದಾನ ಮಾಡಿ ಪತ್ನಿಯನ್ನು ತವರು ಮನೆಗೆ ಬಿಟ್ಟು ಬರಲು ಹೋಗಿದ್ದ ಮಧು, ಸಣ್ಣದಾಗಿ ಸುರಿಯುತ್ತಿದ್ದ ಮಳೆಯ ನಡುವೆ ತಮ್ಮ ಮನೆಗೆ ವಾಪಾಸ್ಸು ಬರುತ್ತಿದ್ದ.ನಿನ್ಮೆ ಮತದಾನ ಮಾಡಿ ಪತ್ನಿಯನ್ನು ತವರು ಮನೆಗೆ ಬಿಟ್ಟು ಬರಲು ಹೋಗಿದ್ದ ಮಧು, ಸಣ್ಣದಾಗಿ ಸುರಿಯುತ್ತಿದ್ದ ಮಳೆಯ ನಡುವೆ ತಮ್ಮ ಮನೆಗೆ ವಾಪಾಸ್ಸು ಬರುತ್ತಿದ್ದ.
ಮಳೆ ಜೋರಾದ ಹಿನ್ನಲೆ ಬೈಕ್ ನ್ನು ಹರಳಹಳ್ಳಿ ಸರ್ಕಲ್ ಬಳಿ ಮರದಡಿಯಲ್ಲಿ ನಿಲ್ಲಿಸಿ ನಿಂತುಕೊಂಡಿದ್ದನು. ಹೆಲ್ಮೆಟ್ ಧರಿಸಿ, ಪೋನ್ ನಲ್ಲಿ ಹೆಂಡತಿಯೊಂದಿಗೆ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಮಧು ಮೃತಪಟ್ಟಿದ್ದಾರೆ.ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿಯಲಿದೆ. ಇನ್ನು ಮೂರು ದಿನ ಸಾಧಾರಣ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಮೋಖಾ ಚಂಡಮಾರುತ ರಾಜ್ಯಕ್ಕೆ ಎಫೆಕ್ಟ್ ಇಲ್ಲ. ಆದರೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವು ಕಡೆ ಅಧಿಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.ದಕ್ಣಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನಿನ್ನೆ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಿದೆ.