ಒಂದೇ ದಿನ ಪ್ರಚಾರ- 1 ಲಕ್ಷಕ್ಕೂ ಅಧಿಕ ಮತಗಳನ್ನು ಪಡೆದು ಗೆದ್ದ ಡಿಕೆಶಿ
ಬೆಂಗಳೂರು: ಕನಕಪುರ (Kanakapura) ಕ್ಷೇತ್ರದ ಕಾಂಗ್ರೆಸ್ (Congress) ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಿಕೆ ಶಿವಕುಮಾರ್ (DK Shivakumar) 1 ಲಕ್ಷಕ್ಕೂ ಅಧಿಕ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಈ ಬಾರಿ ಡಿಕೆ ಶಿವಕುಮಾರ್ ಅವರನ್ನು ಸೋಲಿಸಲು ಬಿಜೆಪಿ ಸಾಕಷ್ಟು ಪ್ರಯತ್ನ ಮಾಡಿತ್ತು. ಈ ಹಿನ್ನೆಲೆಯಲ್ಲೇ ಬಿಜೆಪಿಯ (BJP) ಪ್ರಮುಖ ನಾಯಕ ಆರ್. ಅಶೋಕ್ (R Ashok) ಅವರನ್ನು ಕನಕಪುರ ಕ್ಷೇತ್ರದಿಂದ ಅಭ್ಯರ್ಥಿಯನ್ನಾಗಿ ಮಾಡಿತ್ತು. ಆದರೆ ಡಿಕೆ ಶಿವಕುಮಾರ್ ಬಿಜೆಪಿಗೆ ತಿರುಗೇಟು ನೀಡಿ, ನಾಮಪತ್ರ ಸಲ್ಲಿಸಿದ ಬಳಿಕ ಚುನಾವಣಾ ಪ್ರಚಾರಕ್ಕೆ ಬರುವುದಿಲ್ಲ ಎಂದು ಹೇಳಿದ್ದರು.
ಅದಾದ ಬಳಿಕವೂ ಡಿಕೆಶಿ ಮಾತಿನಂತೆ ನಡೆದುಕೊಂಡಿದ್ದು, ಪ್ರಚಾರದ ಕೊನೆಯ ದಿನವಷ್ಟೇ ಕನಕಪುರ ಕ್ಷೇತ್ರಕ್ಕೆ ಬಂದು ಭರ್ಜರಿ ಪ್ರಚಾರ ನಡೆಸಿದ್ದರು. ಇದೀಗ ಕನಕಪುರ ಕ್ಷೇತ್ರದ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಮತದಾರರು ಡಿಕೆಶಿಯ ಕೈಹಿಡಿದಿದ್ದಾರೆ.
ಕನಕಪುರ ಕ್ಷೇತ್ರದಲ್ಲಿ ಬಿಜೆಪಿಯ ಆರ್. ಅಶೋಕ್ ಹಾಗೂ ಜೆಡಿಎಸ್ನ (JDS) ಬಿ. ನಾಗರಾಜು ವಿರುದ್ಧ ಡಿಕೆ ಶಿವಕುಮಾರ್ ಸ್ಪರ್ಧಿಸಿದ್ದರು. ಆರ್. ಅಶೋಕ್ 3ನೇ ಸ್ಥಾನ ಪಡೆದಿದ್ದಾರೆ.