ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸಮ್ಮಿಶ್ರ ಸರ್ಕಾರ ಹೊಡೆದು ಹೋಗಲು ಸಿದ್ಧರಾಮಯ್ಯ ಕಾರಣ! - ಡಾ. ಸುಧಾಕರ್

Twitter
Facebook
LinkedIn
WhatsApp
dr k sudhakar

ಬೆಂಗಳೂರು: 2023ರ ಮೇ 13ರಂದು ಹೊರಬಿದ್ದ 16ನೇ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ(Karnataka Assembly Elections 2023 Result) ಹೀನಾಯವಾಗಿ ಸೋಲು ಕಂಡ ಮಾಜಿ ಸಚಿವ ಡಾ.ಕೆ.ಸುಧಾಕರ್(Dr K Sudhkar) ಅವರು ಸಮ್ಮಿಶ್ರ ಸರ್ಕಾರ ಪತನ ಕುರಿತು ಹೊಸ ಬಾಂಬ್​​ ಸಿಡಿಸಿದ್ದಾರೆ. ಸಮ್ಮಿಶ್ರ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ(Siddaramaiah) ಕಾರಣ ಎಂಬಂತೆ ಟ್ವೀಟ್ ಮಾಡುವ ಮೂಲಕ ಪರೋಕ್ಷವಾಗಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸಮ್ಮಿಶ್ರ ಸರ್ಕಾರದ ಪತನದಲ್ಲಿ ಸಿದ್ದರಾಮಯ್ಯ ಪಾತ್ರ ನಿರಾಕರಿಸಲು ಸಾಧ್ಯವೇ? ಎಂದು ಟ್ವೀಟರ್​ನಲ್ಲಿ ಸುಧಾಕರ್ ಪ್ರಶ್ನೆ ಮಾಡಿದ್ದಾರೆ.

JDS-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ನಮ್ಮ ಸಮಸ್ಯೆ ಬಗ್ಗೆ, ನಮಗೆ ಆಗುತ್ತಿದ್ದ ಅನ್ಯಾಯಗಳ ಬಗ್ಗೆ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯ ಬಳಿ ಪ್ರಸ್ತಾಪ ಮಾಡುತ್ತಿದ್ದೆವು. ಸಿದ್ದರಾಮಯ್ಯ ಆಗ ಈ ಸರ್ಕಾರದಲ್ಲಿ ನನ್ನ ಮಾತು ನಡೆಯುತ್ತಿಲ್ಲ. ನನ್ನ ಕ್ಷೇತ್ರ, ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು. 2019ರ ಲೋಕಸಭಾ ಚುನಾವಣೆವರೆಗೂ ಸಹಿಸಿಕೊಳ್ಳಿ. ಲೋಕಸಭಾ ಚುನಾವಣೆ ಮುಗಿದ ಬಳಿಕ ಮೈತ್ರಿ ಸರ್ಕಾರ ಇರಲ್ಲ. ಹೆಚ್​ಡಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಇರಲು ಬಿಡಲ್ಲ ಎಂದು ಹೇಳ್ತಿದ್ದರು. ಸಿದ್ದರಾಮಯ್ಯ ಶಾಸಕರಿಗೆ ಸಮಾಧಾನ ಹೇಳಿ ಕಳುಹಿಸುತ್ತಿದ್ದರು. ಕಾರ್ಯಕರ್ತರು, ಮುಖಂಡರನ್ನು ಉಳಿಸಿಕೊಳ್ಳಲು ರಿಸ್ಕ್ ತೆಗೆದುಕೊಂಡ್ವಿ. ರಾಜೀನಾಮೆ ನೀಡಿ ಮತ್ತೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು. ನಮ್ಮ ಈ ನಡೆಯಲ್ಲಿ ಸಿದ್ದರಾಮಯ್ಯ ಪ್ರೇರಣೆ ಇದೆ. ಇದನ್ನು ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲ ಎನ್ನಲು ಸಾಧ್ಯವೇ? ಎಂದು ಟ್ವೀಟ್​ ಮೂಲಕ ಸಿದ್ದರಾಮಯ್ಯ ವಿರುದ್ಧ ಡಾ.ಸುಧಾಕರ್​ ಆರೋಪ ಮಾಡಿದ್ದಾರೆ.

 

 

ಸುಧಾಕರ್ ಅವರ ಟ್ವೀಟ್ ಈ ರೀತಿ ಇದೆ

2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಮಾನ್ಯ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು.

2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಮಾನ್ಯ ಕುಮಾರಸ್ವಾಮಿ ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು.

ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನ, ಮುಖಂಡರನ್ನ ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು. ನಮ್ಮ ನಡೆಯಲ್ಲಿ ಮಾನ್ಯ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ? ಎಂದು ಪ್ರಶ್ನೆ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist