ಸೋಮವಾರ, ಮೇ 20, 2024
ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ-ಅಭಿಷೇಕ್ ಶರ್ಮರಿಂದ ಕೊಹ್ಲಿ ದಾಖಲೆ ಉಡಿಸ್; ಹೈದರಾಬಾದಿಗೆ ಭರ್ಜರಿ ಗೆಲುವು..!-ಗಗನೇಕ್ಕೇರುತ್ತಿದೆ ಚಿಕನ್ ದರ; ಮೊಟ್ಟೆ ಬೆಲೆಯೂ ಏರಿಕೆ.!-ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೊಹ್ಲಿಯ ಸಿಡಿಲಬ್ಬರದ ಶತಕ - ಹೈದರಾಬಾದ್ ವಿರುದ್ಧ ಅಮೋಘ ಜಯ ; ಟಾಪ್-4 ಕ್ಕೆ ಆರ್ ಸಿಬಿ ಎಂಟ್ರಿ

Twitter
Facebook
LinkedIn
WhatsApp
Untitled 9

ಹೈದರಾಬಾದ್: ಪ್ಲೇ ಆಫ್ ಸ್ಥಾನಕ್ಕೇರಲು ತೀವ್ರ ಹೋರಾಟ ಸಂಘಟಿಸುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಗುರುವಾರ ನಡೆದ ಪಂದ್ಯದಲ್ಲಿ ಅಮೋಘ ಜಯ ಸಾಧಿಸಿದೆ.

ಟಾಸ್ ಗೆದ್ದ ಫಾಫ್ ಡು ಪ್ಲೆಸಿಸ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಹೈದರಾಬಾದ್ ಹೆನ್ರಿಕ್ ಕ್ಲಾಸೆನ್ ಅವರ ಅತ್ಯಮೋಘ ಶತಕದ ನೆರವಿನಿಂದ 5 ವಿಕೆಟ್ ನಷ್ಟಕ್ಕೆ 186 ರನ್ ಕಲೆ ಹಾಕಿತು. ದಕ್ಷಿಣ ಆಫ್ರಿಕಾ ಮೂಲದ ಕ್ಲಾಸೆನ್ 51 ಎಸೆತಗಳಲ್ಲಿ ಸ್ಪೋಟಕ ಆಟವಾಡಿ 104 ರನ್ ಗಳಿಸಿ ಔಟಾದರು. 8ಬೌಂಡರಿ ಮತ್ತು 6 ಸಿಕ್ಸರ್ ಸಿಡಿಸಿದ್ದರು. ಅಭಿಷೇಕ್ ಶರ್ಮಾ 11, ತ್ರಿಪಾಠಿ 15, ನಾಯಕ ಮಾರ್ಕ್ರಾಮ್ 18, ಹ್ಯಾರಿ ಬ್ರೂಕ್ ಔಟಾಗದೆ 27, ಗ್ಲೆನ್ ಫಿಲಿಪ್ಸ್ 5 ರನ್ ಗಳಿಸಿ ಔಟಾದರು.

ಗುರಿ ಬೆನ್ನಟ್ಟಿದ ಆರ್ ಸಿಬಿ ಪರ ವಿರಾಟ್ ಕೊಹ್ಲಿ ಮತ್ತು ನಾಯಕ ಪ್ಲೆಸಿಸ್ ಭರ್ಜರಿ ಜತೆಯಾಟವಾಡಿದರು. 19.2 ಓವರ್ ಗಳಲ್ಲಿ 187 ರನ್ ಗಳಿಸುವ ಮೂಲಕ ಅನಿವಾರ್ಯವಾಗಿದ್ದ ಪಂದ್ಯದಲ್ಲಿ 8 ವಿಕೆಟ್ ಗಳ ಭರ್ಜರಿ ಜಯ ತನ್ನದಾಗಿಸಿಕೊಂಡಿತು. ಜವಾಬ್ದಾರಿಯುತ ಆಟವಾಡಿದ ಕೊಹ್ಲಿ 62 ಎಸೆತಗಳಿಂದ ಅಮೋಘ ಶತಕ ಸಿಡಿಸಿ ಔಟಾದರು. ನಾಲ್ಕು ವರ್ಷಗಳ ನಂತರ ಐಪಿಎಲ್‌ನಲ್ಲಿ ಶತಕ ಸಿಡಿಸಿ ಸಂಭ್ರಮಿಸಿದರು. 12 ಬೌಂಡರಿ ಮತ್ತು 4 ಸಿಕ್ಸರ್ ಅವರ ಇನ್ನಿಂಗ್ಸ್ ನಲ್ಲಿ ಒಳಗೊಂಡಿತ್ತು. ಪ್ಲೆಸಿಸ್ ನಾಯಕನ ಆಟವಾಡಿ ಕೊಹ್ಲಿಗೆ ಸಾಥ್ ನೀಡಿದರು. 47 ಎಸೆತಗಳಲ್ಲಿ 71 ರನ್ ಗಳಿಸಿ ಔಟಾದರು.13 ಪಂದ್ಯಗಳಿಂದ 14 ಅಂಕವನ್ನು ಆರ್ ಸಿಬಿ ಗಳಿಸಿದ್ದು , ಮುಂಬೈ ಕೂಡ 13 ಪಂದ್ಯಗಳಿಂದ 14 ಅಂಕ ಹೊಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ