ಶನಿವಾರ, ಮೇ 11, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೇರಳ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇಕಡಾ 99.70 ರಷ್ಟು ಉತ್ತೀರ್ಣ!

Twitter
Facebook
LinkedIn
WhatsApp
Untitled 12

ತಿರುವನಂತಪುರಂ: ಕೇರಳ ಸರ್ಕಾರ 2023 ನೇ ಸಾಲಿನ 10ನೇ(ಎಸ್‌ಎಸ್‌ಎಲ್‌ಸಿ) ತರಗತಿಯ ಬೋರ್ಡ್ ಪರೀಕ್ಷೆಯ ಫಲಿತಾಂಶ ಶುಕ್ರವಾರ ಪ್ರಕಟಿಸಿದ್ದು, ಒಟ್ಟು ಶೇಕಡಾ 99.70 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 

ಇಂದು ತಿರುವನಂತಪುರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಕೇರಳ ಸಾಮಾನ್ಯ ಶಿಕ್ಷಣ ಸಚಿವ ವಿ ಶಿವನ್‌ಕುಟ್ಟಿ ಅವರು 2023ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟಿಸಿದರು.ಮಾರ್ಚ್‌ನಲ್ಲಿ ಕೇರಳ, ಲಕ್ಷದ್ವೀಪ ಮತ್ತು ಗಲ್ಫ್ ಪ್ರದೇಶದ ವಿವಿಧ ಕೇಂದ್ರಗಳಲ್ಲಿ ನಡೆದ ಸಾಮಾನ್ಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಒಟ್ಟು 4,19,128 ವಿದ್ಯಾರ್ಥಿಗಳು ಹಾಜರಾಗಿದ್ದರು ಎಂದು ಅವರು ತಿಳಿಸಿದ್ದಾರೆ.

ಒಟ್ಟು 4,19,128 ವಿದ್ಯಾರ್ಥಿಗಳ ಪೈಕಿ 4,17,864 ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ಅರ್ಹತೆ ಪಡೆದಿದ್ದಾರೆ ಎಂದು ಕೇರಳ ಶಿಕ್ಷಣ ಸಚಿವರು ಹೇಳಿದ್ದಾರೆ.

ಕಳೆದ ವರ್ಷ 99.26 ರಷ್ಟಿದ್ದ ಎಸ್ಎಸ್ಎಲ್ ಸಿ ಫಲಿತಾಂಶ ಈ ವರ್ಷ ಶೇ. 99.70ಕ್ಕೆ ಹೆಚ್ಚಿದೆ ಎಂದು ಶಿವನ್ ಕುಟ್ಟಿ ತಿಳಿಸಿದ್ದಾರೆ.

ಒಟ್ಟು 68,604 ವಿದ್ಯಾರ್ಥಿಗಳು ಎಲ್ಲಾ ವಿಷಯಗಳಲ್ಲೂ ಪೂರ್ಣ A+ ಪಡೆದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ