ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ದೆಹಲಿಯಿಂದ ಚಂಡೀಗಢಕ್ಕೆ ಟ್ರಕ್​​ನಲ್ಲಿ ಪ್ರಯಾಣಿಸಿದ ರಾಹುಲ್ ಗಾಂಧಿ

Twitter
Facebook
LinkedIn
WhatsApp
AA1bxrgd 3

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸೋಮವಾರ ರಾತ್ರಿ ಟ್ರಕ್ ಚಾಲಕರನ್ನು (truck drivers) ಭೇಟಿ ಮಾಡಿ ಅವರ ಸಮಸ್ಯೆಗಳನ್ನು ತಿಳಿದುಕೊಳ್ಳುವುದಕ್ಕಾಗಿ ಅವರ ಮನ್ ಕಿ ಬಾತ್ (Mann ki Baat)  ಆಲಿಸಿದರು.  ಈ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ರಾಹುಲ್ ಗಾಂಧಿಯವರು ಟ್ರಕ್‌ನೊಳಗೆ ಕುಳಿತುಕೊಂಡು ಒಬ್ಬ ಡ್ರೈವರ್‌ನೊಂದಿಗೆ ಪ್ರಯಾಣಿಸುತ್ತಿರುವುದನ್ನು ಮತ್ತು ಟ್ರಕ್ ಡ್ರೈವರ್‌ಗಳೊಂದಿಗೆ ಮಾತನಾಡುತ್ತಿರುವುದನ್ನು ಫೋಟೊಗಳಲ್ಲಿ ಕಾಣಬಹುದು. ಟ್ರಕ್ ಚಾಲಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ರಾಹುಲ್ ಗಾಂಧಿ ಚಾಲಕರೊಂದಿಗೆ ದೆಹಲಿಯಿಂದ ಚಂಡೀಗಢಕ್ಕೆ ಪ್ರಯಾಣಿಸಿದರು ಎಂದು ಪಕ್ಷ ತಿಳಿಸಿದೆ.

ಈ ವಿಡಿಯೊವನ್ನು ಟ್ವೀಟ್ ಮಾಡಿರುವ ಕಾಂಗ್ರೆಸ್ ಪಕ್ಷ, ಜನನಾಯಕ ರಾಹುಲ್ ಗಾಂಧಿ ಜಿ ಟ್ರಕ್ ಡ್ರೈವರ್‌ಗಳ ಸಮಸ್ಯೆಗಳನ್ನು ತಿಳಿದುಕೊಳ್ಳಲು ಚಾಲಕರೊಂದಿಗೆ ದೆಹಲಿಯಿಂದ ಚಂಡೀಗಢಕ್ಕೆ ಪ್ರಯಾಣಿಸಿದರು. ಮಾಧ್ಯಮ ವರದಿಗಳ ಪ್ರಕಾರ, ಭಾರತೀಯ ರಸ್ತೆಗಳಲ್ಲಿ ಸುಮಾರು 90 ಲಕ್ಷ ಟ್ರಕ್ ಚಾಲಕರಿದ್ದಾರೆ. ಅವರಿಗೆ ಅವರದ್ದೇ ಆದ ಸಮಸ್ಯೆಗಳಿವೆ. ರಾಹುಲ್ ಜೀ ಅವರ ಮನ್ ಕಿ ಬಾತ್ ಕೇಳುವ ಕೆಲಸವನ್ನು ಮಾಡಿದ್ದಾರೆ ಎಂದಿದ್ದಾರೆ.

ಟ್ರಕ್ ಚಾಲಕರ ನಡುವೆ ಗಾಂಧಿ ಕುಳಿತಿರುವ ಚಿತ್ರಗಳನ್ನು ಪೋಸ್ಟ್ ಮಾಡಿದ ಕಾಂಗ್ರೆಸ್, “ನಿಮ್ಮ ಮಧ್ಯೆ ನಿಮ್ಮ ರಾಹುಲ್ ಗಾಂಧಿ” ಎಂದು ಬರೆದಿದೆ.

ಈ ತಿಂಗಳ ಆರಂಭದಲ್ಲಿ, ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ, ರಾಹುಲ್, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ನಿಲ್ದಾಣದಲ್ಲಿ ಕಾಲೇಜು ವಿದ್ಯಾರ್ಥಿಗಳು ಮತ್ತು ಮಹಿಳೆಯರೊಂದಿಗೆ ಸಂವಾದ ನಡೆಸಿದರು. ಬಿಎಂಟಿಸಿ ಬಸ್‌ ನೊಳಗೆ ಕುಳಿತು ಅವರು ಮಹಿಳಾ ಪ್ರಯಾಣಿಕರಲ್ಲಿಯೂ ಮಾತನಾಡಿದ್ದರು.

ಕರ್ನಾಟಕದಲ್ಲಿದ್ದಾಗ ರಾಹುಲ್, ಬೆಂಗಳೂರಿನಲ್ಲಿ ಬಾಡಿಗೆ ಟ್ಯಾಕ್ಸಿ ಚಾಲಕರು ಮತ್ತು ಆಹಾರ ವಿತರಣೆ ಮಾಡುವ ವ್ಯಕ್ತಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ. ರಾಹುಲ್, ಊಬರ್, ಓಲಾದಂತ ಬಾಡಿಗೆ ವಾಹನ ಚಾಲಕರ ಕಷ್ಟಗಳನ್ನು ಕೇಳಿದರು. ರಾಹುಲ್ ಆಹಾರ ವಿತರಣೆ ಮಾಡುವ ವ್ಯಕ್ತಿಗಳೊಂದಿಗೆ ರೆಸ್ಟೋರೆಂಟ್‌ನಲ್ಲಿ ಮಸಾಲೆ ದೋಸೆ ಮತ್ತು ಕಾಫಿ ಸೇವಿಸಿದರು. ತಮ್ಮ ಹೋಟೆಲ್‌ಗೆ ತಲುಪಲು ದ್ವಿಚಕ್ರ ವಾಹನದ ಹಿಂಬದಿ ಸವಾರರಾಗಿ ಹೋಗಿದ್ದರು ರಾಹುಲ್.

ಏಪ್ರಿಲ್ ಅಂತ್ಯದಲ್ಲಿ, ದೆಹಲಿಯ ಮುಖರ್ಜಿ ನಗರದಲ್ಲಿ ನಾಗರಿಕ ಸೇವಾ ಆಕಾಂಕ್ಷಿಗಳೊಂದಿಗೆ ಗಾಂಧಿ ಸಂವಾದ ನಡೆಸಿದರು. ಸುದ್ದಿ ಸಂಸ್ಥೆ ಎಎನ್ಐ ಹಂಚಿಕೊಂಡ ವಿಡಿಯೊದಲ್ಲಿ ಮಾಜಿ ಲೋಕಸಭಾ ಸದಸ್ಯರು ಉನ್ನತ ಸರ್ಕಾರಿ ಉದ್ಯೋಗಗಳಿಗಾಗಿ ಆಕಾಂಕ್ಷಿಗಳ ಗುಂಪಿನೊಂದಿಗೆ ಚರ್ಚೆ ನಡೆಸುತ್ತಿರುವುದನ್ನು ತೋರಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist