ಡಿವೈಡರ್ಗೆ ಡಿಕ್ಕಿ ಹೊಡೆದ ವಾಹನ, ಮಹಿಳಾ ಪೊಲೀಸ್ ಹಾಗೂ ಡ್ರೈವರ್ ಸಾವು
ಯಮುನಾ ಎಕ್ಸ್ಪ್ರೆಸ್ ವೇನಲ್ಲಿ ಡಿವೈಡರ್ಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಹಿಳಾ ಪೊಲೀಸ್ ಹಾಗೂ ಡ್ರೈವರ್ ಮೃತಪಟ್ಟಿದ್ದಾರೆ. ಮಹಿಳಾ ಪೊಲೀಸ್ ಪೇದೆ ಹಾಗೂ ಹರ್ಯಾಣ ಪೊಲೀಸ್ ಇಲಾಖೆಯ ಡ್ರೈವರ್ ಸಾವನ್ನಪ್ಪಿದ್ದಾರೆ. ವೇಗವಾಗಿ ವಾಹನ ಚಲಾಯಿಸುತ್ತಿದ್ದು, ನಿಯಂತ್ರಣ ಸಿಗದೆ ಡಿವೈಡರ್ಗೆ ಡಿಕ್ಕಿ ಹೊಡೆದಿದ್ದರು. ಗ್ರೇಟರ್ ನೋಯ್ಡಾದ ಥಾನಾ ದಂಕೌರ್ ಪ್ರದೇಶದ ಬಳಿ ಯಮುನಾ ಎಕ್ಸ್ಪ್ರೆಸ್ವೇಯಲ್ಲಿ ಅಪಘಾತ ಸಂಭವಿಸಿದೆ.
ಮೃತರು ಛತ್ತೀಸ್ಗಢದಿಂದ ನಾಪತ್ತೆಯಾಗಿದ್ದ ಸೋನಿಪತ್ ಬಾಲಕಿಯನ್ನು ಯಶಸ್ವಿಯಾಗಿ ಪತ್ತೆ ಹಚ್ಚಿದ ತಂಡದ ಭಾಗವಾಗಿದ್ದರು. ಇಬ್ಬರೂ ತಂಡದೊಂದಿಗೆ ಛತ್ತೀಸ್ಗಢದಿಂದ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ.
ವಾಹನವನ್ನು ಅತಿವೇಗದಲ್ಲಿ ಚಲಾಯಿಸಿಕೊಂಡು ಬಂದಿದ್ದರಿಂದ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘರ್ಷಣೆಯ ಪರಿಣಾಮ ತೀವ್ರವಾಗಿದ್ದು, ಮಹಿಳಾ ಪೇದೆ ಮತ್ತು ಚಾಲಕ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.
ಅಪಘಾತದಲ್ಲಿ ಓರ್ವ ಪೊಲೀಸ್ ಅಧಿಕಾರಿ ಸೇರಿದಂತೆ ಇತರ ಐವರು ಪ್ರಯಾಣಿಕರಿಗೆ ಗಾಯಗಳಾಗಿವೆ. ತಕ್ಷಣ ಅವರಿಗೆ ವೈದ್ಯಕೀಯ ನೆರವು ನೀಡಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಪೊಲೀಸರು ಅಪಘಾತದ ಬಗ್ಗೆ ತನಿಖೆ ಆರಂಭಿಸಿದ್ದಾರೆ.