ಸೋಮವಾರ, ಮೇ 13, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಖಾದರ್ ವಿರುದ್ಧ ಅವಹೇಳನಕಾರಿ ಪೋಸ್ಟ್ – ಶ್ರೀರಾಮಸೇನೆ ಮುಖಂಡನ ವಿರುದ್ಧ ದೂರು

Twitter
Facebook
LinkedIn
WhatsApp
Ravi Bopara 3 17

ಚಿಕ್ಕಮಗಳೂರು: ನೂತನ ಸ್ಪೀಕರ್ ಯುಟಿ ಖಾದರ್ (UT Khader) ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದಕ್ಕೆ ಶ್ರೀರಾಮಸೇನೆಯ (Sri Ram Sena) ನಾಯಕನ ವಿರುದ್ಧ ಕಾಂಗ್ರೆಸ್ (Congress) ದೂರು ದಾಖಲಿಸಿದೆ.

ಶ್ರೀರಾಮಸೇನೆಯ ಮುಖಂಡ ಪ್ರೀತೇಶ್ ಎಂಬುವವರು ಯುಟಿ ಖಾದರ್ ಬಗ್ಗೆ ಅವಹೇಳನಕಾರಿಯಾಗಿ ವ್ಯಂಗ್ಯ ಮಾಡಿದ್ದಾರೆ. ಅಲ್ಲದೆ ಕೋಮು ದ್ವೇಷ ಹಾಗೂ ಜನಾಂಗದ ನೋವಿಗೆ ಪ್ರೀತೇಶ್ ಕಾರಣರಾಗಿದ್ದಾರೆ. ಈ ರೀತಿ ಸಂವಿಧಾನಾತ್ಮಕ ಹುದ್ದೆಗೆ ಅಗೌರವ ತೋರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪಕ್ಷದ ಐಟಿ ಸೆಲ್‍ನ ಜಿಲ್ಲಾ ಕಾರ್ಯದರ್ಶಿ ಎಂಎಲ್‍ಎ ಮಂಜು ಎಂಬುವವರು ಒತ್ತಾಯಿಸಿದ್ದಾರೆ. 

ಪೋಸ್ಟ್‌ನಲ್ಲಿ ಏನಿತ್ತು?
`ಸದನದಲ್ಲಿ ಮಾನ್ಯ ಸಭಾಧ್ಯಕ್ಷರೇ ಅನ್ನಬೇಕಾ? ಸಾಬಾಧ್ಯಕ್ಷರೇ ಅನ್ನಬೇಕಾ?’ ಎಂದು ಶ್ರೀರಾಮ ಸೇನೆ ಮುಖಂಡ ಬರೆದುಕೊಂಡಿದ್ದರು. ಅಲ್ಲದೆ ಯುಟಿ ಖಾದರ್ ಅವರ ಹೆಸರಿನಲ್ಲಿ ಟ್ಯಾಗ್ ಬಳಸಿ ಪೋಸ್ಟ್ ಮಾಡಲಾಗಿತ್ತು.

ಈ ಸಂಬಂಧ ಚಿಕ್ಕಮಗಳೂರು (Chikkamagaluru) ನಗರದ ಸೈಬರ್ ಕ್ರೈಮ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುವ ಭರವಸೆ ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ