ಗುರುವಾರ, ಮೇ 9, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಮ್ಮ ಹೊಸ ಸಂಸತ್ತಿನ ಉದ್ಘಾಟನೆಗೆ ಭಾರತದ ರಾಷ್ಟ್ರಪತಿಗಳು ಏಕೆ ಹಾಜರಾಗಬಾರದು? ಪ್ರಧಾನಿ ಮೋದಿಗೆ ಕಮಲ್ ಹಾಸನ್ ಪ್ರಶ್ನೆ!

Twitter
Facebook
LinkedIn
WhatsApp
images 12

ಹೊಸ ಸಂಸತ್ ಭವನದ ಉದ್ಘಾಟನೆಯ ಕುರಿತು ಮಕ್ಕಳ್ ನೀಧಿ ಮೈಯಂ ಮುಖ್ಯಸ್ಥ ಕಮಲ್ ಹಾಸನ್ ( Kamal Haasan) ಶನಿವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಪ್ರಶ್ನಿಸಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಕಾರ್ಯಕ್ರಮಕ್ಕೆ ಯಾಕೆ ಹಾಜರಾಗುತ್ತಿಲ್ಲ ಎಂದು ಕೇಳಿದ್ದಾರೆ. ದೇಶದ ಹೆಮ್ಮೆಯ ಈ ಕ್ಷಣವು ರಾಜಕೀಯವಾಗಿ ವಿಭಜನೆಯಾಗಿದೆ. ನಾನು ನನ್ನ ಪ್ರಧಾನಿಯವರಿಗೆ ಒಂದು ಸರಳ ಪ್ರಶ್ನೆ ಕೇಳುತ್ತೇನೆ. ನಮ್ಮ ಹೊಸ ಸಂಸತ್ತಿನ ಉದ್ಘಾಟನೆಗೆ ಭಾರತದ ರಾಷ್ಟ್ರಪತಿಗಳು ಏಕೆ ಹಾಜರಾಗಬಾರದು ಎಂದು ದಯವಿಟ್ಟು ದೇಶಕ್ಕೆ ತಿಳಿಸಿ. ರಾಷ್ಟ್ರದ ಮುಖ್ಯಸ್ಥರಾಗಿ ಭಾರತದ ರಾಷ್ಟ್ರಪತಿಗಳು ಈ ಐತಿಹಾಸಿಕ ಸಂದರ್ಭದ ಭಾಗವಾಗದಿರಲು ಯಾವುದೇ ಕಾರಣ ನನಗೆ ಕಾಣುತ್ತಿಲ್ಲ ಎಂದು ನಟ-ರಾಜಕಾರಣಿ ಕಮಲ್ ಹಾಸನ್ ಹೇಳಿದ್ದಾರೆ.

ನೂತನ ಸಂಸತ್ತಿನ ಕಟ್ಟಡ ಉದ್ಘಾಟನೆ ಕುರಿತ ವಿವಾದ ತಾರಕಕ್ಕೇರಿದೆ. ಕಾಂಗ್ರೆಸ್, ಆಮ್ ಆದ್ಮಿ ಪಕ್ಷ ಮತ್ತು ತೃಣಮೂಲ ಕಾಂಗ್ರೆಸ್ ಸೇರಿದಂತೆ ಕನಿಷ್ಠ 20 ವಿರೋಧ ಪಕ್ಷಗಳು ಜಂಟಿ ಅಧಿವೇಶನದಲ್ಲಿ ಭಾನುವಾರದ ಕಾರ್ಯಕ್ರಮವನ್ನು ಬಹಿಷ್ಕರಿಸುವ ನಿರ್ಧಾರವನ್ನು ಘೋಷಿಸಿದ್ದು, ಉದ್ಘಾಟನೆಯನ್ನು ‘ಘೋರ ಅವಮಾನ’ ಮತ್ತು ಪ್ರಜಾಪ್ರಭುತ್ವದ ಮೇಲಿನ ‘ನೇರ ದಾಳಿ’ ಎಂದು ಕರೆದಿವೆ. ರಾಷ್ಟ್ರಪತಿ ಬದಲು ಪ್ರಧಾನಿ ಮೋದಿ ಅಧ್ಯಕ್ಷತೆ ವಹಿಸಿದ್ದಕ್ಕೆ ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸುತ್ತಿವೆ.

 ಆಡಳಿತಾರೂಢ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಕಾರ್ಯಕ್ರಮವನ್ನು ಬಹಿಷ್ಕರಿಸಿದ್ದಕ್ಕಾಗಿ ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದೆ, ಇದು ಪ್ರಜಾಪ್ರಭುತ್ವದ ಮೂಲತತ್ವದ ತಿರಸ್ಕಾರ ಎಂದು ಕರೆದಿದೆ. ಭಾರತದ 140 ಕೋಟಿ ಜನರು ನಮ್ಮ ಪ್ರಜಾಪ್ರಭುತ್ವಕ್ಕೆ ಮತ್ತು ಅವರ ಚುನಾಯಿತ ಪ್ರತಿನಿಧಿಗಳಿಗೆ ಮಾಡಿದ ಈ ಘೋರ ಅವಮಾನವನ್ನು ಮರೆಯುವುದಿಲ್ಲ ಎಂದು ಎನ್‌ಡಿಎ ನಾಯಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ