ಕಾರ್ಕಳ: ಜೋಕಾಲಿಯಲ್ಲಿ ಸೀರೆ ಕುತ್ತಿಗೆಗೆ ಸಿಲುಕಿ ಬಾಲಕಿ ಸಾವು
Twitter
Facebook
LinkedIn
WhatsApp
ಉಡುಪಿ: ಸೀರೆ ಜೋಕಾಲಿಯಲ್ಲಿ (Swing) ಸಿಲುಕಿ ಬಾಲಕಿ ಸಾವನ್ನಪ್ಪಿದ ಘಟನೆ ಉಡುಪಿ (Udupi) ಜಿಲ್ಲೆಯ ಕಾರ್ಕಳದಲ್ಲಿ (Karkala) ನಡೆದಿದೆ.
ಕಾರ್ಕಳ ತಾಲೂಕು ನಿಟ್ಟೆ (Nitte) ಗ್ರಾಮ ಕೆಮ್ಮಣ್ಣುವಿನ ಲಕ್ಷ್ಮಿ ಪೂಜಾರಿ ಎಂಬವರ ಮಗಳು ಮಾನ್ವಿ (9) ಮೃತ ಬಾಲಕಿ. ಚಿಕ್ಕಪ್ಪನ ಮನೆಗೆ ಆಟವಾಡಲೆಂದು ಹೋಗಿದ್ದ ವೇಳೆ ಘಟನೆ ನಡೆದಿದೆ.
ಸಮೀಪದ ಮನೆಯ ಮತ್ತೊಬ್ಬ ಬಾಲಕಿಯ ಜೊತೆ ಚಿಕ್ಕಪ್ಪನ ಮನೆಯಲ್ಲಿ ಸೀರೆಯಲ್ಲಿ ಜೋಕಾಲಿ ಕಟ್ಟಿ ಆಡುತ್ತಿದ್ದರು. ಈ ವೇಳೆ ಸೀರೆ ಕುತ್ತಿಗೆಗೆ ಸುತ್ತಿಕೊಂಡ ಪರಿಣಾಮ ಅವಘಡ ಸಂಭವಿಸಿದೆ. ಸ್ಥಳದಲ್ಲಿದ್ದವರು ತಕ್ಷಣ ಬಾಲಕಿಯನ್ನು ಆಸ್ಪತ್ರೆಗೆ ರವಾನಿಸಿದರಾದರೂ ಚಿಕಿತ್ಸೆಗೆ ಸ್ಪಂದಿಸದೆ ಬಾಲಕಿ ಮೃತಪಟ್ಟಿದ್ದಾಳೆ.
ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದಿದೊಯ್ದು ಚಿಕಿತ್ಸೆ ನೀಡಲು ಪ್ರಯತ್ನಿಸಲಾಯಿತು ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.