ಗುರುವಾರ, ಮೇ 16, 2024
ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿದ್ಯಾರ್ಥಿಗಳ ಕಳೆದ ಸಾಲಿನ ಬಸ್ ಪಾಸ್ ಜೂನ್ 15 ರ ವರೆಗೆ ವಿಸ್ತರಿಸಿದ ಕೆಎಸ್ಆರ್ ಟಿಸಿ!

Twitter
Facebook
LinkedIn
WhatsApp
Untitled 32

ಬೆಂಗಳೂರು: 2023-24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಂತೆ ಬುಧವಾರದಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿವೆ. ಈ ಹಿನ್ನೆಲೆಯಲ್ಲಿ ಕೆಎಸ್​ಆರ್​​ಟಿಸಿ, ವಿದ್ಯಾರ್ಥಿಗಳ ಹಳೆಯ ಬಸ್ ಪಾಸ್ (Students Bus Pass) ಅವಧಿ ವಿಸ್ತರಿಸಿದೆ. ಜೂನ್ 15ರ ವರೆಗೂ ಹಳೆಯ ಬಸ್ ಪಾಸ್ ಅವಧಿ ವಿಸ್ತರಣೆ ಮಾಡಿ ಇಂದು(ಮೇ 31) ಕೆಎಸ್​ಆರ್​​ಟಿಸಿ ಆದೇಶ ಹೊರಡಿಸಿದ್ದು, ಇದು ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ. ವಿದ್ಯಾರ್ಥಿ ತಮ್ಮ ಈ ಹಿಂದಿನ ವರ್ಷದ ಪಾಸನ್ನೇ ಬಸ್ ಗಳಲ್ಲಿ ತೋರಿಸಿ ಪ್ರಯಾಣ ಮಾಡಬಹುದು. ಪಾಸ್ ಇಲ್ಲದಿದ್ರೆ ಪ್ರಸಕ್ತ ವರ್ಷದ ಶಾಲಾ ಶುಲ್ಕ ರಸೀದಿ ತೋರಿಸಿಬೇಕೆಂದು ಕೆಎಸ್​ಆರ್​​ಟಿಸಿ ತನ್ನ ಆದೇಶದಲ್ಲಿ ತಿಳಿಸಿದೆ.

ಬೇಸಿಗೆ ರಜೆ ಅಂತ್ಯವಾಗಿದ್ದು, ಇಂದಿನಿಂದ ರಾಜ್ಯಾದ್ಯಂತ ಶಾಲೆ ಪ್ರಾರಂಭವಾಗಿವೆ. ಇನ್ನು ಶಾಲೆಗೆ ಮಕ್ಕಳನ್ನು ಬರಮಾಡಿಕೊಳ್ಳುವ ಬಗ್ಗೆ ಶಿಕ್ಷಣ ಇಲಾಖೆ ಕೆಲ ಮಾರ್ಗಸೂಚನೆಗಳನ್ನು ನೀಡಿದೆ. ಪ್ರಾರಂಭೋತ್ಸವ ನಡೆಸಿ ಮೊದಲ ದಿನ ಮಕ್ಕಳನ್ನು ಬರಮಾಡಿಕೊಳ್ಳಬೇಕು.

ಅಂದು ಬಿಸಿಯೂಟದಲ್ಲಿ ಸಿಹಿ ವಿತರಿಸಬೇಕು. ಮೊದಲ ದಿನವೇ ಒಂದೆರಡು ಗಂಟೆ ನಂತರ ಶೈಕ್ಷಣಿಕ ತರಗತಿ ಚಟುವಟಿಕೆಗಳನ್ನು ಆರಂಭಿಸಬೇಕು ಎಂದು ಇಲಾಖೆ ಸೂಚಿಸಿದೆ. ಒಂದು ವೇಳೆ ಮಳೆಯಿಂದಾಗಿ ಮಕ್ಕಳು ಶಾಲೆಗೆ ಬರಲು ತೊಂದರೆಯಾಗುತ್ತಿದ್ದರೆ ಅಧಿಕಾರಿಗಳ ಗಮನಕ್ಕೆ ತಂದು ಶಾಲೆಗೆ ರಜೆ ಘೋಷಿಸಬೇಕು ಎಂದು ಶಿಕ್ಷಣ ಇಲಾಖೆ ತನ್ನ ಸುತ್ತೋಲೆಯಲ್ಲಿ ಸೂಚಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ