ಗುರುವಾರ, ಮೇ 9, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರ್ತವ್ಯ ಲೋಪ ಆರೋಪ: ದ.ಕ. ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ (ಡಿಡಿಪಿಯು) ಅಮಾನತು

Twitter
Facebook
LinkedIn
WhatsApp
Suspended

ಮಂಗಳೂರು: ವಿಧಾನಸಭೆ ಚುನಾವಣೆ ಸಂದರ್ಭ ಜಿಲ್ಲಾ ಚುನಾವಣಾಧಿಕಾರಿ ಅವರಿಂದ ಅನುಮತಿ ಪಡೆಯದೆ ಬೆಂಗಳೂರಿಗೆ ತೆರಳಿ ಕರ್ತವ್ಯಲೋಪ ಎಸಗಿದ್ದಾರೆ ಎಂಬ ಆರೋಪದಡಿಯಲ್ಲಿ ದ.ಕ. ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ (ಡಿಡಿಪಿಯು) ಜಯಣ್ಣ ಅವರನ್ನು ದ.ಕ. ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಅಮಾನತುಗೊಳಿಸಿದ್ದಾರೆ.

ಮೇ 9ರಂದು ಜಿಲ್ಲಾ ಚುನಾವಣಾಧಿಕಾರಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಭಾಗವಹಿಸುವಂತೆ ಡಿಡಿಪಿಯು ಅವರಿಗೆ ಸೂಚನೆ ನೀಡಲಾಗಿತ್ತು. ಆದರೆ ಅವರು ಗೈರಾಗಿದ್ದರು. ಈ ಬಗ್ಗೆ ನೋಟೀಸ್‌ ನೀಡಲಾಗಿತ್ತು. ಅದಕ್ಕೆ ನೀಡಿದ ಉತ್ತರ ಸಮಾಧಾನ ತರಲಿಲ್ಲ ಎಂಬ ನೆಲೆಯಿಂದ ಡಿಡಿಪಿಯು ಅವರನ್ನು ಅಮಾನತುಗೊಳಿಸಲಾಗಿದೆ. ಕೊಕ್ಕಡ ಪಿಯು ಕಾಲೇಜು ಪ್ರಾಂಶುಪಾಲ ವೆಂಕಟೇಶಮೂರ್ತಿ ಅವರನ್ನು ಪ್ರಭಾರವಾಗಿ ನೇಮಕ ಮಾಡಲಾಗಿದೆ.

ಮೇ 22ರಂದು ಜಯಣ್ಣ ಮತ್ತೆ ಲಿಖೀತ ಉತ್ತರ ನೀಡಿದ್ದು, ನನ್ನ ಮೇಲಿನ ಎಲ್ಲ ಆರೋಪಗಳನ್ನು ನಿರಾಕರಿಸುವುದಾಗಿ ಉಲ್ಲೇಖೀಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ