ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

2024 ರ ಸಾರ್ವತ್ರಿಕ ಚುನಾವಣೆಯ ಫಲಿತಾಂಶವು ಜನರನ್ನು ಆಶ್ಚರ್ಯಗೊಳಿಸಲಿದೆ: ರಾಹುಲ್ ಗಾಂಧಿ

Twitter
Facebook
LinkedIn
WhatsApp
233831489 380003373482147 2412848297956402447 n 2

ವಾಷಿಂಗ್‌ಟನ್: ನ್ಯಾಷನಲ್ ಪ್ರೆಸ್ ಕ್ಲಬ್‌ನಲ್ಲಿ ನಡೆದ ಸಂವಾದದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

 

, 2024 ರ ಸಾರ್ವತ್ರಿಕ ಚುನಾವಣೆಯ ಫಲಿತಾಂಶವು ಜನರನ್ನು ಆಶ್ಚರ್ಯಗೊಳಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಮತ್ತು ಸಂಯುಕ್ತ ವಿರೋಧ ಪಕ್ಷದ ಬಲದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.

‘ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಉತ್ತಮ ಸಾಧನೆ ಮಾಡಲಿದೆ. ಇದು ಜನರನ್ನು ಆಶ್ಚರ್ಯಗೊಳಿಸುತ್ತದೆ ಎಂದು ನಾನು ಭಾವಿಸುತ್ತೇನೆ. ಸುಮ್ಮನೆ ಲೆಕ್ಕಾಚಾರ ಮಾಡಿ, ಒಗ್ಗಟ್ಟಿನ ಪ್ರತಿಪಕ್ಷ ಬಿಜೆಪಿಯನ್ನು ತಾನಾಗಿಯೇ ಸೋಲಿಸುತ್ತದೆ’ ಎಂದಿದ್ದಾರೆ.

ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವನ್ನು ಕಾಂಗ್ರೆಸ್ ಸೋಲಿಸಿದ ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಉಲ್ಲೇಖಿಸಿ ರಾಹುಲ್ ಗಾಂಧಿ ಮಾತನಾಡುತ್ತಾ, ಮುಂಬರುವ ರಾಜ್ಯ ಚುನಾವಣೆಗಳು ಭಾರತದ ರಾಜಕೀಯದಲ್ಲಿ ಬದಲಾವಣೆಯನ್ನು ತರಲಿವೆ. ಸಂಸತ್ ಚುನಾವಣೆಗೆ ಒಂದು ವರ್ಷಕ್ಕಿಂತ ಕಡಿಮೆ ಅವಧಿಯಿದ್ದು, ಕಾಂಗ್ರೆಸ್ ಇತರ ವಿರೋಧ ಪಕ್ಷಗಳೊಂದಿಗೆ ನಿಯಮಿತವಾಗಿ ಮಾತುಕತೆ ನಡೆಸುತ್ತಿದೆ ಎಂದು ಹೇಳಿದರು. ರಾಜಸ್ಥಾನ ಮತ್ತು ಛತ್ತೀಸ್‌ಗಢ ಕಾಂಗ್ರೆಸ್ ಆಡಳಿತದ ರಾಜ್ಯಗಳಾಗಿದ್ದು, ಈ ವರ್ಷಾಂತ್ಯದಲ್ಲಿ ರಾಜ್ಯ ಚುನಾವಣೆಗೆ ತಯಾರಿ ನಡೆಸುತ್ತಿವೆ.


‘ಪ್ರತಿಪಕ್ಷಗಳು ಸಾಕಷ್ಟು ಒಗ್ಗಟ್ಟಾಗಿವೆ. ನಾವು ಎಲ್ಲಾ ವಿರೋಧ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ. ಅಲ್ಲಿ ಸಾಕಷ್ಟು ಒಳ್ಳೆಯ ಕೆಲಸಗಳು ನಡೆಯುತ್ತಿವೆ. ನಾವು ಪ್ರತಿಪಕ್ಷಗಳೊಂದಿಗೆ ಸ್ಪರ್ಧಿಸುವ ಸ್ಥಳಗಳಿರುವುದರಿಂದ ಇದು ಸಂಕೀರ್ಣವಾದ ಚರ್ಚೆಯಾಗಿದೆ. ಹಾಗಾಗಿ ಸ್ವಲ್ಪ ಕೊಡು ಕೊಳ್ಳುವ ಅಗತ್ಯವಿದೆ. ಮಹಾ ವಿರೋಧ ಪಕ್ಷದ ಮೈತ್ರಿ ಸಂಭವಿಸುತ್ತದೆ ಎಂದು ನನಗೆ ವಿಶ್ವಾಸವಿದೆ’ ಎಂದು ಅವರು ಹೇಳಿದರು.

ಸರ್ಕಾರವು ಸ್ವತಂತ್ರ ಸಂಸ್ಥೆಗಳನ್ನು ತನ್ನ ವಶಕ್ಕೆ ತೆಗೆದುಕೊಳ್ಳುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದರು. ಈ ಹಿಂದೆ ವಿವಿಧ ವಿರೋಧ ಪಕ್ಷದ ನಾಯಕರು ಈ ಬಗ್ಗೆ ಆರೋಪಿಸಿದರೂ, ಆಡಳಿತ ಪಕ್ಷ ಮಾತ್ರ ಪ್ರತಿಕ್ರಿಯಿಸಿಲ್ಲ ಎಂದರು.

ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ಗುರಿಯಾಗಿ ಸಂಸತ್ತಿನ ಸದಸ್ಯತ್ವವನ್ನು ಕಳೆದುಕೊಂಡಿರುವ ಬಗ್ಗೆ ಮಾತನಾಡಿ, ಇದು ತನಗೆ ಅನುಕೂಲವಾಗಿದೆ ಎಂದರು. ಇದು ನನ್ನನ್ನು ಸಂಪೂರ್ಣವಾಗಿ ಮರು ವ್ಯಾಖ್ಯಾನಿಸಲು ಅನುವು ಮಾಡಿಕೊಟ್ಟಿದೆ. ಅವರು ನನಗೆ ಉಡುಗೊರೆ ನೀಡಿದ್ದಾರೆ ಎಂದು ನಾನು ಭಾವಿಸುತ್ತೇನೆ’ ಎಂದರು.

ಹತ್ಯೆ ಬೆದರಿಕೆಗಳ ಬಗ್ಗೆ ನನಗೆ ಕಾಳಜಿ ಇಲ್ಲ. ಎಲ್ಲರೂ ಸಾಯಲೇಬೇಕು. ನನ್ನ ಅಜ್ಜಿ ಮತ್ತು ತಂದೆಯಿಂದ ನಾನು ಕಲಿತದ್ದು ಅದನ್ನೇ. ಹಾಗಾಗಿ ಅಂತಹ ಕಾರಣದಿಂದ ಹಿಂದೆ ಸರಿಯುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist