ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರೈಲು ಹಳಿಗಳಲ್ಲಿ ಹೆಣಗಳ ರಾಶಿ, ಗಾಯಾಳುಗಳಿಂದ ತುಂಬಿದ ಆಸ್ಪತ್ರೆ ; ಊರಿನಲ್ಲಿ ತಮ್ಮವರಿಗಾಗಿ ಕಾಯುತ್ತಿರುವ ಕುಟುಂಬ- ರೈಲು ದುರಂತಕ್ಕೆ ಇಡೀ ಭಾರತವೇ ಸ್ಥಬ್ಧ...!

Twitter
Facebook
LinkedIn
WhatsApp
WhatsApp Image 2023 06 03 at 9.32.03 AM1

ಭುವನೇಶ್ವರ್: ಕೋರಮಂಡಲ್‌ ಎಕ್ಸ್‌ಪ್ರೆಸ್‌, ಬೆಂಗಳೂರು–ಹೌರಾ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌ ಮತ್ತು ಸರಕು ಸಾಗಣೆ ರೈಲುಗಳ ಮಧ್ಯೆ ಒಡಿಶಾದ ಬಾಲಸೋರ್‌ನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಅವಘಡದಲ್ಲಿ ಕನಿಷ್ಠ 233 ಮಂದಿ ಮೃತಪಟ್ಟು, ಸುಮಾರು 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಅಪಘಾತದ ಸ್ಥಳದಿಂದ ಗಾಯಗೊಂಡ ಪ್ರಯಾಣಿಕರನ್ನು ಆಸ್ಪತ್ರೆಗಳಿಗೆ ಸಾಗಿಸಲು 115 ಆಂಬ್ಯುಲೆನ್ಸ್‌ಗಳು ಮತ್ತು 50 ಬಸ್‌ಗಳು ಹರಸಾಹಸ ಪಟ್ಟವು. ಗಾಯಾಳುಗಳಿಂದ ಆಸ್ಪತ್ರೆ ತುಂಬಿ ತುಳುಕುತ್ತಿರವ ಕಾರಣ ಬಾಲಸೋರ್‌ನ ಜಿಲ್ಲಾ ಕೇಂದ್ರ ಆಸ್ಪತ್ರೆಯ ಹೊರಗೆ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಸಂಖ್ಯೆಯ ಗಾಯಾಳುಗಳನ್ನು ಭದ್ರಕ್ ಜಿಲ್ಲೆಗೆ ರವಾನಿಸಲಾಗಿದೆ.

ಕಾರ್ಯಾಚರಣೆಗಾಗಿ ಸುಮಾರು 600-700 ಸಿಬ್ಬಂದಿಯನ್ನು ಸರ್ಕಾರಿ ಸಂಸ್ಥೆಗಳು ಮತ್ತು ಸ್ಥಳೀಯ ಆಡಳಿತಗಳು ನಿಯೋಜಿಸಿವೆ. ಆದಾಗ್ಯೂ, ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸ್ಥಳಾಂತರಿಸಲು ರಕ್ಷಣಾ ತಂಡಗಳಿಗೆ ಅಗತ್ಯವಿರುವ ಆಂಬ್ಯುಲೆನ್ಸ್‌ಗಳು ಕೊರತೆ ಕಂಡು ಬಂತು, ಸಹಾಯಕ್ಕಾಗಿ ಬಸ್‌ಗಳು ಮತ್ತು ಇತರ ವಾಹನಗಳನ್ನು ಕಳುಹಿಸಲು ಸರ್ಕಾರ ನಿರ್ಧರಿಸಿದೆ.

50 ಆ್ಯಂಬುಲೆನ್ಸ್ ಗಳಿದ್ದರೂ ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸ್ಥಳಾಂತರಿಸಲು ಸಾಕಾಗಲಿಲ್ಲ. ಹೀಗಾಗಿ ಹೆಚ್ಚಿನ ಸಂಖ್ಯೆಯ ಬಸ್‌ಗಳನ್ನು ಸಜ್ಜುಗೊಳಿಸಲಾಗುತ್ತಿದೆ ”ಎಂದು ಮುಖ್ಯ ಕಾರ್ಯದರ್ಶಿ ಪ್ರದೀಪ್ ಜೆನಾ ಟ್ವೀಟ್ ಮಾಡಿದ್ದಾರೆ. ಆಸ್ಪತ್ರೆಗಳಲ್ಲಿ, ಹಲವಾರು ಪ್ರಯಾಣಿಕರಿಗೆ ಚಿಕಿತ್ಸೆಯ ಅಗತ್ಯವಿರುವುದರಿಂದ ರಕ್ತದ ಕೊರತೆ ಕಂಡುಬಂದಿದೆ.

ಭೀಕರ ದುರಂತದಲ್ಲಿ ಸುಮಾರು 233 ಮಂದಿ ಸಾವನ್ನಪ್ಪಿರುವುದರಿಂದ ರೈಲು ಹಳಿಗಳ ಮೇಲೆ ಹೆಣಗಳ ರಾಶಿಯೇ ಬಿದ್ದಿದೆ. ರೈಲ್ವೆ ಬೋಗಿಗಳು ಒಂದರ ಮೇಲೆ ಒಂದು ಬಿದ್ದಿರುವುದರಿಂದ ರಕ್ಷಣಾ ಕಾರ್ಯಾಚರಣೆ ಕ್ಲಿಷ್ಟಕರವಾಗಿದೆ. ಭಾರ ಎತ್ತುವ ಸಲುವಾಗಿ ಕ್ರೇನ್‌ಗಳನ್ನು ತರಿಸಲಾಗಿದೆ. ಕತ್ತಲಾಗಿರುವ ಕಾರಣ ಕಾರ್ಯಾಚರಣೆಗೆ ತೊಡಕುಂಟಾಗಿದೆ ಎಂದು ತಿಳಿದು ಬಂದಿದೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist