ಭಾನುವಾರ, ಜೂನ್ 2, 2024
ಬೆಳ್ತಂಗಡಿ: ಬೈಕಿಗೆ ಡಿಕ್ಕಿ ಹೊಡೆದ ಲಾರಿ; ಬೈಕ್ ಸವಾರ ಸಾವು.!-ಇಂಗ್ಲೆಂಡ್ನಿಂದ 1 ಲಕ್ಷ ಕಿಲೋಗ್ರಾಂಗಳಷ್ಟು ಚಿನ್ನ ಭಾರತಕ್ಕೆ ಮರಳಿ ತಂದ ಭಾರತ; ಖಜಾನೆಗೆ ರವಾನಿಸಿದ ಆರ್ಬಿಐ.!-ರಾಹುಲ್ ಗಾಂಧಿ ಪ್ರಧಾನಿ ಹುದ್ದೆಗೆ ಸೂಕ್ತ ಅಭ್ಯರ್ಥಿ: ಮಲ್ಲಿಕಾರ್ಜುನ ಖರ್ಗೆ-ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಇಳಿಕೆ..!-ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಅಳವಡಿಸಲು ಜೂನ್ 12 ರವರೆಗೆ ಅವಕಾಶ ನೀಡಿದ ಹೈಕೋರ್ಟ್-ಸುಮಲತಾ ಅಂಬರೀಶ್ ಗೆ ವಿಧಾನ ಪರಿಷತ್‌ ಟಿಕೆಟ್ ಬಹುತೇಕ ಫಿಕ್ಸ್?-Pears: ಪಿಯರ್ಸ್ ಹಣ್ಣು ಮಾರುಕಟ್ಟೆಯಲ್ಲಿ ಎಷ್ಟು ಫೇಮಸೋ ಅಷ್ಟೇ ಆರೋಗ್ಯಕ್ಕೂ; ಇಲ್ಲಿದೆ ಮಾಹಿತಿ-ಗೃಹ ಸಚಿವ ಅಮಿತ್‌ ಶಾ ಪತ್ನಿ ಸೋನಲ್‌ ಶಾ ಜೊತೆಗೆ ತಿರುಪತಿ ದೇವಸ್ಥಾನಕ್ಕೆ ಭೇಟಿ-ಗುದನಾಳದಲ್ಲಿ ಬರೋಬ್ಬರಿ 1kg ಚಿನ್ನ ಬಚ್ಚಿಟ್ಟ ಗಗನಸಖಿ!-ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ ಸೂಚನೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 30 ವರ್ಷ ಜೈಲುಶಿಕ್ಷೆ

Twitter
Facebook
LinkedIn
WhatsApp
ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 30 ವರ್ಷ ಜೈಲುಶಿಕ್ಷೆ

ಕೋಲಾರ: ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ  ಅಪರಾಧಿಗೆ 30 ವರ್ಷ ಜೈಲುಶಿಕ್ಷೆ ವಿಧಿಸಲಾಗಿದೆ. ಅಪರಾಧಿ ಮುರುಗೇಶ್​ಗೆ 30 ವರ್ಷ ಜೈಲುಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ನ್ಯಾಯಾಧೀಶರಾದ ದೇವೆಮಾನೆ ಅವರು ಆದೇಶಿಸಿದ್ದಾರೆ.

2022 ರ ಅಕ್ಟೋಬರ್ 9ರಂದು ಎಂಟು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಮುರುಗೇಶ್ ಅತ್ಯಾಚಾರವೆಸಗಿದ್ದ. ಪ್ರಕರಣ ಸಂಬಂಧ ಮುಳಬಾಗಲು ಗ್ರಾಮಾಂತರ ಠಾಣಾ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ‌ ದಾಖಲಿಸಿಕೊಂಡಿದ್ದರು. ಸದ್ಯ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ದೇವೆಮಾನೆ ಅವರು ಅಪರಾಧಿಗೆ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.

ಇತ್ತೀಚೆಗಷ್ಟೇ, ತನ್ನ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿ ತಂದೆಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ದಾವಣಗೆರೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಎಫ್​ಟಿಎಸ್​ಪಿ (ಪೋಕ್ಸೋ ಕೋರ್ಟ್​) ತೀರ್ಪು ನೀಡಿತ್ತು. ಈ ಅಪರಾಧಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ತಗಡಿನ ಶೀಟ್ ಮನೆಯಲ್ಲಿ ಮಗಳ ಮೇಲೆ ನಿರಂತರ ಅತ್ಯಾಚಾರ ನಡೆಸುತ್ತಿದ್ದ. ಬಟ್ಟೆ ಹಾಗೂ ತಿಂಡಿ ಕೊಡುತ್ತಾ ಮಗಳ‌ ಮೇಲೆ ಅತ್ಯಾಚಾರ ಮಾಡುತ್ತಿದ್ದ. ವಿಚಾರ ತಿಳಿದ ನಂತರ ಹರಿಹರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯ ಮೂರ್ತಿ ಶ್ರೀಪಾದ ಎನ್, ಆರೋಪಿ ತಂದೆಗೆ 20 ವರ್ಷ ಜೈಲು ಶಿಕ್ಷೆ, 12 ಸಾವಿರ ದಂಡ ಹಾಗೂ ಸಂತ್ರಸ್ತೆಗೆ ಸರ್ಕಾರದಿಂದ ಐದು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ತೀರ್ಪು ನೀಡಿದ್ದರು.

ಬೆಸ್ಕಾಂಗೆ ನಕಲಿ ನೇಮಕಾತಿ ಮಾಡಿದ್ದ ಅರೋಪಿಗಳು ಅರೆಸ್ಟ್:

ಬೆಂಗಳೂರು: ಲಕ್ಷಾಂತರ ರೂಪಾಯಿ ಹಣ ಪಡೆದು ನಕಲಿ ನೇಮಕಾತಿ ಮಾಡಿದ್ದ ಐವರು ಆರೋಪಿಗಳನ್ನು ಬೆಂಗಳೂರು ನಗರದ ಹೈಗ್ರೌಂಡ್ಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ವೈಭವ್, ಶಿವಪ್ರಸಾದ್, ವಿಜಯ್ ಕುಮಾರ, ಪ್ರದೀಪ್, ಪುರುಷೋತ್ತಮ ಬಂಧಿತ ಅರೋಪಿಗಳಾಗಿದ್ದಾರೆ. ಇಪ್ಪತ್ತು ಲಕ್ಷ ಹಣಕ್ಕೆ ನಕಲಿ ನೇಮಕಾತಿ ಮಾಡಿ ವ್ಯಕ್ತಿಗಳಿಗೆ ವಂಚಿಸದ ಆರೋಪದಡಿ ಬಂಧಿಸಲಾಗಿದೆ.

ಬೆಂಗಳೂರಿನ ವಿದ್ಯುತ್ ಕಂಪನಿ ಅಧೀಕ್ಷಕರ ಹೆಸರಲ್ಲಿ ನೇಮಕಾತಿ ಆರ್ಡರ್ ನೀಡಿದ ಆರೋಪಿಗಳು, ಬೆಸ್ಕಾಂ ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಇಂಜಿನಿಯರ್ ಹೆಸರಲ್ಲಿ ನಕಲಿ ಸೀಲು ಹಾಕಿ ಹಣ ಕೊಟ್ಟ ಉದ್ಯೋಗ ಆಕಾಂಕ್ಷಿಗಳಿಗೆ ನೀಡಿದ್ದಾರೆ. ಅದರಂತೆ ನೇಮಕಾತಿ ಆದೇಶ ಪತ್ರ ಹಿಡಿದ ಕೆಸಲಕ್ಕೆ ಸೇರಕೆಂದು ಕಚೇರಿಗೆ ಆಗಮಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಬಂಧಿತ ವೈಭವ್ ಎಂಬಾತ ಆನಂದ್ ರಾವ್ ಸರ್ಕಲ್​ನಲ್ಲಿ ಇರುವ ಬೆಂಗಳೂರು ವಿದ್ಯುತ್ ಕಂಪನಿಯಲ್ಲಿ ಕೆಲಸಕ್ಕೆ ರಿಪೋರ್ಟ್ ಮಾಡಿಕೊಳ್ಳಲು ಬಂದಿದ್ದ. ಆದೇಶ ಪ್ರತಿ ನೋಡಿದಾಗ ಈ ರೀತಿ ಕಿರಿಯ ಸಹಾಯಕ ಹುದ್ದೆಗೆ ನೇಮಕಾತಿ ಆಗಿಲ್ಲಾ ಎಂದು ತಿಳಿಸಲಾಗಿದೆ. ನಂತರ ಆದೇಶ ಪ್ರತಿ ಪರಿಶೀಲನೆ ಮಾಡಿದಾಗ ಅದೊಂದು ನಕಲಿ ಆದೇಶ ಎಂದು ತಿಳಿದುಬಂದಿದೆ.

ಸರ್ಕಾರದ ಸೀಲು, ಅಧಿಕಾರಿಗಳ ಸಹಿ ಎಲ್ಲವನ್ನು ನಕಲಿಯಾಗಿ ಸೃಷ್ಟಿ ಮಾಡಲಾಗಿತ್ತು. ಈ ಬಗ್ಗೆ ಹೌಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಐವರನ್ನು ಬಂಧಿಸಿದ್ದು, ಅರೋಪಿಗಳು ಇನ್ನು ಹಲವರಿಗೆ ನಕಲಿ ನೇಮಕಾತಿ ಮಾಡಿರುವ ಶಂಕೆ ಹಿನ್ನೆಲೆ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ