ಬಹುಭಾಷಾ ನಟಿ, ಕನ್ನಡತಿ ಪ್ರಿಯಾಮಣಿ (Priyamani) ಅವರು ಮತ್ತೆ ಶಾರುಖ್ ಖಾನ್ (Sharukh Khan) ಜೊತೆ ನಟಿಸುವ ಬಗ್ಗೆ ಸಿಹಿಸುದ್ದಿ ನೀಡಿದ್ದಾರೆ. ಈ ಹಿಂದೆ ʻಚೆನ್ನೈ ಎಕ್ಸಪ್ರೆಸ್’ (Chennai Express) ಸಿನಿಮಾದಲ್ಲಿ ಸೊಂಟ ಬಳುಕಿಸಿದ್ದ ನಟಿ ಮತ್ತೆ ಶಾರುಖ್ ಜೊತೆ ನಟಿಸುವ ಬಿಗ್ ಚಾನ್ಸ್ ಗಿಟ್ಟಿಸಿಕೊಂಡಿದ್ದಾರೆ. ಈ ಬಗ್ಗೆ ಪ್ರಿಯಾಮಣಿ ರಿಯಾಕ್ಟ್ ಮಾಡಿದ್ದಾರೆ.
ನ್ ಇಂಡಿಯಾ ನಟಿಯಾಗಿ ಪ್ರಿಯಾಮಣಿ, ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಶಾರುಖ್ ನಟನೆಯ ‘ಜವಾನ್’ (Jawan) ಚಿತ್ರದಲ್ಲಿ ಪ್ರಿಯಾಮಣಿ ನಟಿಸುತ್ತಿದ್ದಾರೆ. ಈ ಬಗ್ಗೆ ನಟಿ ಕೂಡ ಖುಷಿಯಿಂದ ರಿಯಾಕ್ಟ್ ಮಾಡಿದ್ದಾರೆ.