ಭಾನುವಾರ, ಏಪ್ರಿಲ್ 28, 2024
ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಡಿ ನೋಟಿಫಿಕೇಷನ್ ಕೇಸ್ ನಲ್ಲಿ ಮಾಜಿ ಸಿಎಂ ಯಡಿಯೂರಪ್ಪರಿಗೆ ಬಿಗ್‌ ರಿಲೀಫ್‌

Twitter
Facebook
LinkedIn
WhatsApp
ಡಿ ನೋಟಿಫಿಕೇಷನ್ ಕೇಸ್ ನಲ್ಲಿ ಮಾಜಿ ಸಿಎಂ ಯಡಿಯೂರಪ್ಪರಿಗೆ ಬಿಗ್‌ ರಿಲೀಫ್‌

ಬೆಂಗಳೂರು: ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ (BS Yediyurappa)ವಿರುದ್ಧದ ಡಿನೋಟಿಫಿಕೇಷನ್ (de-notification )ಪ್ರಕರಣವನ್ನು ಹೈಕೋರ್ಟ್​ ರದ್ದುಪಡಿಸಿದೆ. ಆ ಮೂಲಕ ಬಿ.ಎಸ್​ ಯಡಿಯೂರಪ್ಪ ಅವರಿಗೆ ಬಿಗ್​ ರಿಲೀಫ್ ನೀಡಿದೆ. 2015ರಲ್ಲಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿತ್ತು. ಈ ಹಿಂದೆ ಸಿಎಜಿ ವರದಿ ಆಧರಿಸಿದ 15 ಕೇಸ್ ಹೈಕೋರ್ಟ್ ರದ್ದುಪಡಿಸಿತ್ತು. ಹಿಂದಿನ ತೀರ್ಪು ಆಧರಿಸಿ 19 ಡಿಸೆಂಬರ್​ 2015ರ ಕೇಸ್​ನ್ನು ಹೈಕೋರ್ಟ್ ರದ್ದುಪಡಿಸಿದೆ.

2006-07ರಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಯಡಿಯೂರಪ್ಪ ಅವರು ಕಾನೂನಿ ವಿರುದ್ಧವಾಗಿ ಬೆಳ್ಳಂದೂರು ಮತ್ತು ದೇವರಬೀಸನಹಳ್ಳಿ ಗ್ರಾಮಗಳಲ್ಲಿ ಎಂಟು ಎಜರೆ ಹತ್ತು ಗುಂಟೆ ಜಮೀನನ್ನು ಡಿನೋಟಿಫೈ ಮಾಡಿದ್ದಾರೆ ಎಂದು ಆರೋಪಿಸಿ ವಾಸುದೇವ ರೆಡ್ಡಿ ಎಂಬುವರು 2013ರಲ್ಲಿ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.

ಬಳಿಕ ಕೋರ್ಟ್ ಆದೇಶದಂತೆ 2015ರ ಫೆಬ್ರವರಿ 21ರಂದು ಲೋಕಾಯುಕ್ತ ಪೊಲೀಸರು ಎಫ್​ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದರು. ನಂತರ ತನಿಖೆಯಲ್ಲಿ ಯಾವುದೇ ಪ್ರಗತಿ ಕಂಡುಬಂದಿಲ್ಲ. ಈ ಹಿನ್ನೆಲೆಯಲ್ಲಿ ಪ್ರಕರಣ ರದ್ದು ಮಾಡುವಂತೆ ಕೋರಿ ಯಡಿಯೂರಪ್ಪ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಆದ್ರೆ, ಅದನ್ನು 2020ರಲ್ಲಿ ಹೈಕೋರ್ಟ್ ವಜಾ ಮಾಡಿತ್ತು. ತನಿಖೆಯನ್ನು ವಿಳಂಬಗೊಳಿಸುತ್ತಿರುವುದಕ್ಕೆ ಪೊಲೀಸರನ್ನು ಹೈಕೋರ್ಟ್ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರು ತರಾಟೆಗೆ ತೆಗೆದುಕೊಂಡಿದ್ದರು. ತನಿಖೆಯನ್ನು ಉದ್ದೇಶಪೂರ್ವಕವಾಗಿ ತಡ ಮಾಡಲಾಗುತ್ತಿದೆ ಎನ್ನುವುದು ಸ್ಪಷ್ಟವಾಗಿ ಕಂಡುಬರುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದರು.

ಸುಪ್ರೀಂ ಕೋರ್ಟ್​ ಮೊರೆ ಹೋದ ಯಡಿಯೂರಪ್ಪ  

ಬೆಳ್ಳಂದೂರು ಮತ್ತು ದೇವರಬೀಸನಹಳ್ಳಿ ಡಿನೋಟಿಫೈ ಪ್ರಕರಣದ ತನಿಖೆ ರದ್ದುಪಡಿಸುವಂತೆ ಕೋರಿ ಯಡಿಯೂರಪ್ಪ ಅವರು ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು. ಅ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಂದಿನ ವಿಚಾರಣೆಯನ್ನು ಫೆ. 14ಕ್ಕೆ ಮುಂದೂಡಿತ್ತು.

ಭ್ರಷ್ಟಾಚಾರ ತಡೆ ಕಾಯ್ದೆಗೆ 2018ರಲ್ಲಿ ತಿದ್ದುಪಡಿ ತರಲಾಗಿದೆ. ಬಿಎಸ್‌ವೈ ವಿರುದ್ಧದ ತನಿಖೆಯನ್ನು ರದ್ದುಪಡಿಸುವಂತೆ ವಕೀಲರ ಮನವಿ ಮಾಡಿದ್ದರು. ಇದಕ್ಕೆ ಪ್ರತಿವಾದಿ ವಾಸುದೇವರೆಡ್ಡಿ ಪರ ವಕೀಲ ಕೆ.ವಿ.ಧನಂಜಯ ವಿರೋಧಿಸಿದ್ದು, ವಿಚಾರಣಾ ಹಂತದಲ್ಲಿರುವ ಪ್ರಕರಣಕ್ಕೆ ಈ ತಿದ್ದುಪಡಿ ಅನ್ವಯವಾಗಲ್ಲ ಎಂದಿದ್ದರು. ಬಳಿಕ ವಾದ ಮಂಡನೆಗೆ ವಕೀಲರು 2 ಗಂಟೆಗಳ ಕಾಲಾವಕಾಶ ಕೇಳಿದ್ದರು. ಇದರಿಂದ ಸುಪ್ರೀಂಕೋರ್ಟ್ ವಿಚಾರಣೆಯನ್ನು ಫೆಬ್ರವರಿ 14ಕ್ಕೆ ಮುಂದೂಡಲಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ