ಸೋಮವಾರ, ಮೇ 6, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭರ್ಜರಿ ಶತಕ ಸಿಡಿಸಿ ದಾಖಲೆ ನಿರ್ಮಿಸಿದ ಆಸ್ಟ್ರೇಲಿಯಾ ಆಟಗಾರ ಟ್ರಾವಿಸ್ ಹೆಡ್!

Twitter
Facebook
LinkedIn
WhatsApp
travis head ton wtc final 696x506 1

WTC Final 2023: ಲಂಡನ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಆಸ್ಟ್ರೇಲಿಯಾ ಆಟಗಾರ ಟ್ರಾವಿಸ್ ಹೆಡ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಈ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಟ್ರಾವಿಸ್ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ್ದರು. ಪರಿಣಾಮ ಕೇವಲ 60 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಮಿಂಚಿದರು.

ಇನ್ನು ಅರ್ಧಶತಕದ ಬಳಿಕ ಕೂಡ ಟೀಮ್ ಇಂಡಿಯಾ ಬೌಲರ್​ಗಳನ್ನು ನಿರಾಯಾಸವಾಗಿ ಎದುರಿಸಿದ ಹೆಡ್ 14 ಫೋರ್ ಹಾಗೂ 1 ಸಿಕ್ಸ್​ನೊಂದಿಗೆ ಕೇವಲ 106 ಎಸೆತಗಳಲ್ಲಿ ಶತಕ ಪೂರೈಸಿದರು. ಇದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ಪಂದ್ಯದಲ್ಲಿ ಶತಕ ಬಾರಿಸಿದ ಮೊದಲ ಆಟಗಾರ ಎಂಬ ವಿಶ್ವ ದಾಖಲೆ ಟ್ರಾವಿಸ್ ಹೆಡ್ ಪಾಲಾಯಿತು.

ಇದಕ್ಕೂ ಮುನ್ನ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಅತ್ಯಧಿಕ ಸ್ಕೋರ್​ಗಳಿಸಿದ ದಾಖಲೆ ನ್ಯೂಜಿಲೆಂಡ್​ನ ಡೆವೊನ್ ಕಾನ್ವೆ ಹೆಸರಿನಲ್ಲಿತ್ತು. 2021 ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಕಾನ್ವೆ 54 ರನ್ ಬಾರಿಸಿದ್ದೇ ಗರಿಷ್ಠ ಸ್ಕೋರ್ ಆಗಿತ್ತು.

ಇದೀಗ ಓವಲ್ ಮೈದಾನದಲ್ಲಿ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ಟ್ರಾವಿಸ್ ಹೆಡ್ ಹೊಸ ದಾಖಲೆಯನ್ನು ನಿರ್ಮಿಸಿದ್ದಾರೆ. ಅದು ಕೂಡ ಟೀಮ್ ಇಂಡಿಯಾ ವಿರುದ್ಧದ ಚೊಚ್ಚಲ ಶತಕದೊಂದಿಗೆ ಎಂಬುದು ವಿಶೇಷ.

ಇನ್ನು ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುತ್ತಿರುವ ಆಸ್ಟ್ರೇಲಿಯಾ ತಂಡವು 71 ಓವರ್​ಗಳ ಮುಕ್ತಾಯದ ವೇಳೆಗೆ 3 ವಿಕೆಟ್ ನಷ್ಟಕ್ಕೆ 263 ರನ್​ ಕಲೆಹಾಕಿದೆ. ಕ್ರೀಸ್​ನಲ್ಲಿ ಸ್ಟೀವ್ ಸ್ಮಿತ್ (74*) ಹಾಗೂ ಟ್ರಾವಿಡ್ ಹೆಡ್ (111*) ಬ್ಯಾಟ್ ಮಾಡುತ್ತಿದ್ದಾರೆ.ಇನ್ನು ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುತ್ತಿರುವ ಆಸ್ಟ್ರೇಲಿಯಾ ತಂಡವು 71 ಓವರ್​ಗಳ ಮುಕ್ತಾಯದ ವೇಳೆಗೆ 3 ವಿಕೆಟ್ ನಷ್ಟಕ್ಕೆ 263 ರನ್​ ಕಲೆಹಾಕಿದೆ. ಕ್ರೀಸ್​ನಲ್ಲಿ ಸ್ಟೀವ್ ಸ್ಮಿತ್ (74*) ಹಾಗೂ ಟ್ರಾವಿಡ್ ಹೆಡ್ (111*) ಬ್ಯಾಟ್ ಮಾಡುತ್ತಿದ್ದಾರೆ.

ಟೀಮ್ ಇಂಡಿಯಾ ಪರ ಮೊಹಮ್ಮದ್ ಸಿರಾಜ್ (ಉಸ್ಮಾನ್ ಖ್ವಾಜಾ), ಶಾರ್ದೂಲ್ ಠಾಕೂರ್ (ಡೇವಿಡ್ ವಾರ್ನರ್) ಹಾಗೂ ಮೊಹಮ್ಮದ್ ಶಮಿ (ಮಾರ್ನಸ್ ಲಾಬುಶೇನ್) ತಲಾ 1 ವಿಕೆಟ್ ಪಡೆದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ