ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿ ನಡೆದಿದೆ. ನೆಲ್ಲಿಗುಡ್ಡೆ ನಿವಾಸಿ.
ಕಾರ್ತಿಕ್ (23) ಮೃತ ದುರ್ದೈವಿ. ಕಾರ್ತಿಕ್ ಬೈಲೂರಿನಿಂದ ಹೋಗುತ್ತಿದ್ದಾಗ ಕಾರ್ಕಳದಿಂದ ಉಡುಪಿಗೆ ಹೋಗುತ್ತಿದ್ದ ಖಾಸಗಿ ಬಸ್ ಢಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡ ಕಾರ್ತಿಕ್ ಅವರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಮೃತ ಕಾರ್ತಿಕ್ ಪತ್ನಿ ಹಾಗೂ 10 ತಿಂಗಳ ಮಗುವನ್ನು ಅಗಲಿದ್ದಾರೆ. ಮೃತದೇಹವನ್ನು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಶಿರ್ವ:ಬೈಕುಗಳ ಮುಖಾಮುಖಿ: ಓರ್ವ ಮೃತ್ಯು, ಇನ್ನೋರ್ವ ಗಂಭೀರ
ಶಂಕರಪುರ ಶಿರ್ವ ಮುಖ್ಯ ರಸ್ತೆ ಯ ದುರ್ಗಾನಗರ ಇಂಚರ ಬಸ್ಸು ನಿಲ್ದಾಣದ ಬಳಿ ಬೈಕುಗಳೆರಡು ಮುಖಾಮುಖಿ ಢಿಕ್ಕಿ ಹೊಡೆದು ಓರ್ವ ಮೃತ ಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜೂ.8 ರ ರಾತ್ರಿ 9 ಗಂಟೆಯ ವೇಳೆ ನಡೆದಿದೆ. ಶಂಕರಪುರ ದ ಶಂಕರ ಆಚಾರ್ಯ ಮೃತ ದುರ್ದೈವಿ ಎಂದು ತಿಳಿದು ಬಂದಿದೆ.
ಬಂಟಕಲ್ಲು ನಾಗರಿಕ ಸೇವಾ ಸಮಿತಿಯವರ ತುರ್ತು ವಾಹನದಲ್ಲಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪಾಂಬೂರಿನ ಕರುಣಾಕರ ಮೂಲ್ಯ ಗಾಯಳು ಎಂದು ತಿಳಿದು ಬಂದಿದೆ. ಶಿರ್ವ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.