ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಜ್ಯದ ಸಿಎಂ ಆಗ್ತಾರಾ ಸಿ.ಟಿ.ರವಿ ..?

Twitter
Facebook
LinkedIn
WhatsApp
ರಾಜ್ಯದ ಸಿಎಂ ಆಗ್ತಾರಾ ಸಿ.ಟಿ.ರವಿ ..?

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಯಕತ್ವ ಬದಲಾಗೋದು ಖಚಿತ. ಈ ಹಿನ್ನೆಲೆಯಲ್ಲಿ ಸಿಎಂ ಹುದ್ದೆಗೆ ರೇಸ್‌ ಜೋರಾಗಿದೆ. ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಸಿಎಂ ಆಗೋ ಸಾಧ್ಯತೆ ದಟ್ಟವಾಗಿದ್ದು, ಶ್ರೀರಾಮುಲು ಮತ್ತು ಬಸವರಾಜ್‌ ಬೊಮ್ಮಾಯಿ ಅವರಿಗೆ ಡಿಸಿಎಂ ಪಟ್ಟ ಒಲಿಯಲಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ದ ಸ್ವ ಪಕ್ಷೀಯ ಶಾಸಕರೇ ಭಂಡಾಯದ ಬಾವುಟ ಹಾರಿದ್ದಾರೆ. ಒಂದೆಡೆ ಭ್ರಷ್ಟಾಚಾರ ಇನ್ನೊಂದೆಡೆ ವಯಸ್ಸಿನ ನೆಪವೊಡ್ಡಿ ರಾಜ್ಯ ಬಿಜೆಪಿ ಭೀಷ್ಮ ಯಡಿಯೂರಪ್ಪನವರ ಯುಗಾಂತ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ದೆಹಲಿ ನಾಯಕರು ಈಗಾಗಲೇ ಜುಲೈ ಅಂತ್ಯದವರೆಗೂ ಗಡುವು ನೀಡಿದ್ದು, ತಾವಾಗಿಯೇ ಸಿಎಂ ಕುರ್ಚಿಯಿಂದ ಯಡಿಯೂರಪ್ಪನವರನ್ನು ಇಳಿಸುವ ತಂತ್ರಗಾರಿಕೆ ಹೆಣೆದಿದ್ದಾರೆ.

ನಿಜವಾಗಿಯೂ ರಾಜ್ಯ ಬಿಜೆಪಿಯ ಆಂತರಿಕ ಕಲಹ ಕಡಿಮೆಯಾಗಿದೆಯ?

ಸದ್ಯದ ಸ್ಥಿತಿಯಲ್ಲಿ ಬಿಜೆಪಿ ಮೂರು ಭಾಗವಾಗಿದೆ. ಒಂದೆಡೆ ಯಡಿಯೂರಪ್ಪ ಬೆಂಬಲಿಗರು, ಇನ್ನೊಂದೆಡೆ ಭಂಡಾಯದ ಗುಂಪು. ಮತ್ತೊಂದೆಡೆ ಸಂಘಪರಿವಾರ. ಹೀಗಿರುವಾಗ ಪಕ್ಷವನ್ನು ಸಂಘಟನಾತ್ಮಕವಾಗಿ ಗಟ್ಟಿಗೊಳಿಸಿ ಮುಂದಿನ ಚುನಾವಣೆಗೆ ಅಣಿಗೊಳಿಸಬೇಕಾದ ಸಂದಿಗ್ದ ಸ್ಥಿತಿಯಲ್ಲಿ ಬಿಜೆಪಿ ಹೈಕಮಾಂಡ್‌ ಇದೆ. ಇದೇ ಕಾರಣಕ್ಕೆ ಈಗಾಗಲೇ ಯಡಿಯೂರಪ್ಪ ಅವರಿಗೆ ಗಡುವು ನೀಡಲಾಗಿದೆ.

ಬಿ.ಎಸ್.ಯಡಿಯೂರಪ್ಪ ಸಿಎಂ ಹುದ್ದೆಗೆ ಅಧಿಕೃತ ರಾಜೀನಾಮೆ ನೀಡಿಲ್ಲವಾದ್ರೂ, ಯಾವುದೇ ಮುಖ್ಯ ನಿರ್ಧಾರಗಳನ್ನು ಕೈಗೊಳ್ಳದಂತೆ. ಹೊಸ ಯೋಜನೆ ಘೋಷಣೆ ಮಾಡದಂತೆ. ಅಷ್ಟೇ ಯಾಕೆ ಅಧಿಕಾರಿಗಳ ವರ್ಗಾವಣೆದಂತೆ ಹೈಕಮಾಂಡ್‌ ಬ್ರೇಕ್‌ ಹಾಕಿದೆ. ರಾಜ್ಯದಲ್ಲಿ ಬಿಜೆಪಿಯನ್ನು ಹುಟ್ಟುಹಾಕಿ ನಾಲ್ಕು ಬಾರಿ ಅಧಿಕಾರಕ್ಕೆ ತಂದ ಯಡಿಯೂರಪ್ಪ ಇದೀಗ ಸ್ವಪಕ್ಷೀಯರ ವಿರೋಧದಿಂದಲೇ ನಿರ್ಗಮಿಸುತ್ತಿದ್ದಾರೆ. ಇನ್ನೊಂದೆಡೆ ಯಡಿಯೂರಪ್ಪ ನಿರ್ಗಮನದ ಬೆನ್ನಲ್ಲೇ ರಾಜ್ಯದ ಮುಖ್ಯಮಂತ್ರಿ ಯಾರಾಗ್ತಾರೆ ಅನ್ನೋ ಕುತೂಹಲ ವ್ಯಕ್ತ ವಾಗುತ್ತಿದೆ. ಈಗಾಗಲೇ ಡಿ.ವಿ.ಸದಾನಂದ ಗೌಡ, ಡಾ.ಅಶ್ವಥ್‌ ನಾರಾಯಣ. ಅರವಿಂದ ಬೆಲ್ಲದ್‌, ಪ್ರಹ್ಲಾದ್‌ ಜೋಷಿ, ಮುರುಗೇಶ್‌ ನಿರಾಣಿ ಹೆಸರು ಪ್ರಬಲವಾಗಿ ಕೇಳಿಬರುತ್ತಿದೆ. ಆದ್ರೆ ಎಲ್ಲಾ ಹೆಸರುಗಳ ನಡುವಲ್ಲೇ ಹೈಕಮಾಂಡ್‌ ಹಾಗೂ ಆರ್‌ಎಸ್‌ಎಸ್‌ ಪಾಳಯದಲ್ಲೀಗ ಸಿ.ಟಿ.ರವಿ ಹೆಸರು ಮುಂಚೂಣಿಗೆ ಬಂದಿದೆ.

ರಾಜ್ಯದ ಸಿಎಂ ಆಗ್ತಾರಾ ಸಿ.ಟಿ.ರವಿ ..?

ರಾಜೀನಾಮೆಯ ಸುಳಿವು ನೀಡಿದ ಸಿಎಂ ಯಡಿಯೂರಪ್ಪ
ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಗೆಲುವು ಕಂಡಿರುವ ಸಿ.ಟಿ.ರವಿ ಈಗಾಗಲೇ ಸಚಿವರಾಗಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ, ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ತಮಿಳುನಾಡು ಉಸ್ತುವಾರಿ ಪಕ್ಷ ಸಂಘಟನೆಯಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದಾರೆ.

ಒಕ್ಕಲಿಗ ಸಮುದಾಯದ ಪ್ರಬಲ ನಾಯಕ ಅಂತ ಗುರುತಿಸಿಕೊಂಡಿರುವ ಸಿ.ಟಿ.ರವಿ ಹುಟ್ಟು ಆರ್‌ಎಸ್‌ಎಸ್‌ ಕಾರ್ಯಕರ್ತ. ನರೇಂದ್ರ ಮೋದಿ ಗುಜರಾತ್‌ ಮುಖ್ಯಮಂತ್ರಿಯಾಗಿದ್ದ ಹೊತ್ತಲೇ ಸಿ.ಟಿ.ರವಿ ಮೋದಿ ಅವರ ಜೊತೆ ಉತ್ತಮ ಒಡನಾಟ ಹೊಂದಿದ್ದಾರೆ.

ಅನಂತ ಕುಮಾರ್‌, ಸಂತೋಷ್‌ ಜಿ ಅವರ ಜೊತೆ ಹೆಚ್ಚು ನಿಕಟ ಸಂಪರ್ಕವನ್ನು ಹೊಂದಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರಿಂದಿಗೂ ಒಳ್ಳೆಯ ಹೆಸರು ಗಳಿಸಿಕೊಂಡಿದ್ದಾರೆ. ಯಡಿಯೂರಪ್ಪ ಬೆನ್ನಲ್ಲೇ ಬಿಜೆಪಿಯನ್ನು ರಾಜ್ಯದಲ್ಲಿ ಪಕ್ಷ ಸಂಘಟನೆಗೆ ಸಿ.ಟಿ.ರವಿ ಸೂಕ್ತ ಅನ್ನೋ ನಿರ್ಧಾರಕ್ಕೆ ಬಿಜೆಪಿ ಹೈಕಮಾಂಡ್‌ ಬಂದಿದೆ ಎನ್ನಲಾಗುತ್ತಿದೆ.

ಆರಂಭದಲ್ಲಿ ಅಶ್ವಥ್‌ ನಾರಾಯಣ, ಅರವಿಂದ ಬೆಲ್ಲದ್‌ ಹೆಸರು ಮುಂಚೂಣಿಯಲ್ಲಿದ್ದರೂ ಅನುಭವದ ಕೊರತೆಯಿದೆ. ಇನ್ನೂ ಡಿ.ವಿ.ಸದಾನಂದ ಗೌಡ ಅವರು ಮೋದಿ ಅವರ ಮನಸ್ಸು ಗೆಲ್ಲುವಲ್ಲಿ ಸಫಲವಾಗಿಲ್ಲ. ಜೊತೆಗೆ ಜೋಷಿ ಅವರು ಕೇಂದ್ರಕ್ಕೆ ಸೀಮಿತಗೊಳಿಸೋ ಸಾಧ್ಯತೆಯಿದೆ. ಇನ್ನು ನಿರಾಣಿ ವಿಷಯದಲ್ಲಿ ಭ್ರಷ್ಟಾಚಾರದ ಆರೋಪವಿದೆ. ಹೀಗಾಗಿ ಸಿ.ಟಿ.ರವಿಗೆ ಪಟ್ಟಕಟ್ಟಿ ದೆಹಲಿ ನಾಯಕರೇ ಅಧಿಕಾರ ನಡೆಸುವ ಸಾಧ್ಯತೆ ದಟ್ಟವಾಗಿದೆ.

ಇನ್ನು ಗೋವಿಂದ ಕಾರಜೋಳ ಡಿಸಿಎಂ ಹುದ್ದೆ ಕಳೆದುಕೊಳ್ಳುವ ಸಾಧ್ಯತೆಯಿದ್ದು, ಶ್ರೀರಾಮುಲು, ಬಿಎಸ್‌ವೈ ಆಪ್ತ ಬಸವರಾಜ ಬೊಮ್ಮಾಯಿ ನೂತನ ಡಿಸಿಎಂ ಆಗಲಿದ್ದಾರೆ. ಉಳಿದಂತೆ ಅಶ್ವಥ್‌ ನಾರಾಯಣ, ಸವದಿ ತಮ್ಮ ಹುದ್ದೆಯಲ್ಲಿಯೇ ಮುಂದುವರಿಯಲಿದ್ದಾರೆ. ಇನ್ನೊಂದೆಡೆ ಬಿ.ಎಸ್.ಯಡಿಯೂರಪ್ಪ ಅವರಿಗೆ ಪಕ್ಷದ ಪ್ರಮುಖ ಹುದ್ದೆ ಲಭಿಸುವ ಸಾಧ್ಯತೆಯಿದ್ದು, ಸಿಎಂ ಪುತ್ರ ಬಿ.ವೈ.ವಿಜಯೇಂದ್ರ ಅವರು ಈ ಬಾರಿ ಕ್ಯಾಬಿನೆಟ್‌ ಸೇರೋದು ಖಚಿತ.

ರಾಜ್ಯದಲ್ಲಿ ನೂತನ ಮುಖ್ಯಮಂತ್ರಿಗಳ ಸಚಿವ ಸಂಪುಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹೊಸ ಮುಖಗಳೇ ಕಾಣಿಸಿಕೊಳ್ಳಲಿದೆ. ಬಹುತೇಕ ಹಾಲಿ ಸಚಿವರಿಗೆ ಕೋಕ್‌ ನೀಡುವ ಮೂಲಕ ಮುಂದಿನ ಚುನಾವಣೆಗೆ ಪಕ್ಷ ಸಂಘಟನೆ ಮಾಡಲು ಹೈಕಮಾಂಡ್‌ ನಿರ್ಧರಿಸಿದೆ. ಕೇಂದ್ರ ಸಚಿವ ಸಂಪುಟ ಮಾದರಿಯಲ್ಲೇ ಸಂಪುಟ ಪುನರಚನೆಯಾಗೋದು ಖಚಿತ ಎನ್ನುತ್ತಿದೆ ಪಕ್ಷದ ಮೂಲಗಳು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು