ಉಡುಪಿ: ಸೀತಾನದಿ ಬಳಿ ಭೀಕರ ಅಪಫಾತ; ಇಬ್ಬರು ಶಿಕ್ಷಕರು ಸಾವು, ಮತ್ತೊರ್ವ ಗಂಭೀರ
ಉಡುಪಿ: ಖಾಸಗಿ ಬಸ್ಗೆ ಅಭಿಮುಖವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಉಡುಪಿ ಮೂಲದ ಇಬ್ಬರು ಶಿಕ್ಷಕರು ಸಾವನ್ನಪ್ಪಿದ್ದು, ಇನ್ನೋರ್ವ ಶಿಕ್ಷಕ ಗಂಭೀರ ಗಾಯಗೊಂಡಿರುವಂತಹ ಘಟನೆ ಹೆಬ್ರಿ ಠಾಣಾ ವ್ಯಾಪ್ತಿಯ ಸೋಮೇಶ್ವರ ಬಳಿ ನಡೆದಿದೆ. ಉಡುಪಿ ಡಿಡಿಪಿಐ ಆಫೀಸ್ನ ಪ್ರಥಮ ದರ್ಜೆ ಸಹಾಯಕ ಸುಬ್ಬಣ್ಣ ಗಾಣಿಗ ಮತ್ತು ಇಂದಿರಾ ನಗರ ಶಾಲೆಯಲ್ಲಿ ದೈಹಿಕ ಶಿಕ್ಷಕ ಸೋಮ ಶೇಖರ್ ಮೃತ ಶಿಕ್ಷಕರು. ಗಂಭೀರ ಗಾಯಗೊಂಡಿರುವ ಸುದರ್ಶನ ಹಾಗೂ ಕಾರು ಚಲಾಯಿಸುತ್ತಿದ್ದ ಸತೀಶ್ರನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಉಡುಪಿಯಿಂದ ಆಗುಂಬೆ ಹೋಗುತ್ತಿರುವ ಬಸ್ ಹಾಗೂ ಚೆನ್ನಗಿರಿಯಲ್ಲಿ ಮದುವೆ ಮುಗಿಸಿ ಉಡುಪಿಗೆ ಬರುತ್ತಿರುವ ಶಿಕ್ಷಕರ ಕಾರಿನ ನಡುವೆ ಅಪಘಾತ ನಡೆದಿದೆ.
ಮೃತಪಟ್ಟವರು ಉಡುಪಿ ಡಿಡಿಪಿಐ ಆಫೀಸ್ ನ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ಬಣ್ಣ ಗಾಣಿಗ ಹಾಗೂ ಉಡುಪಿ ಇಂದಿರಾ ನಗರ ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿರುವ ಸೋಮ ಶೇಖರ ಎನ್ನಲಾಗಿದೆ.
ಗಂಭೀರ ಗಾಯಗೊಂಡ ಶಿಕ್ಷಕ ಸುದರ್ಶನ ಹಾಗೂ ಕಾರು ಚಲಾಯಿಸುತ್ತಿದ್ದ ಸತೀಶ್ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಪಘಾತದ ತೀವ್ರತೆಯಿಂದ ಬಸ್ ನ ಒಳಗೆ ಸಿಲುಕಿದ್ದ ಕಾರನ್ನು ಹೊರತರಲು ಹರಸಾಹಸ ಪಡಬೇಕಾಯಿತು. ಅಂಬುಲೆನ್ಸ್ ಸಿಗದೆ ಯಾರು ಸಹಾಯಕ್ಕೆ ಬಾರದೆ ಇರುವುದನ್ನು ಗಮನಿಸಿ ಈ ಮಾರ್ಗದಲ್ಲಿ ಹೋಗುತ್ತಿದ್ದ ಪ್ರಮೋದ್ ಎಂಬವರು ನಾಲ್ವರನ್ನು ತನ್ನ ಕಾರಿಗೆ ಹಾಕಿಕೊಂಡು ಬಂದು ಹೆಬ್ರಿ ಸರಕಾರಿ ಆಸ್ಪತ್ರೆ ಸೇರಿಸಿದರು. ತುರ್ತು ಚಿಕಿತ್ಸೆ ಸಿಗದೆ ಇಬ್ಬರು ಮೃತಪಟ್ಟಿದ್ದಾರೆ.