ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಸ್ತೆ ಅಪಘಾತ: ಬಿಗ್ ಬಾಸ್ ವಿನ್ನರ್ ರುಬೀನಾ ದಿಲೈಕ್ ಆಸ್ಪತ್ರೆಗೆ ದಾಖಲು

Twitter
Facebook
LinkedIn
WhatsApp
silvio berlusconi 346346 1

ಹಿಂದಿ ಕಿರುತೆರೆಯ ಖ್ಯಾತ ನಟಿ, ಬಿಗ್ ಬಾಸ್ ವಿನ್ನರ್ ರುಬೀನಾ ದಿಲೈಕ್ ಕಾರು ಅಪಘಾತಕ್ಕೀಡಾಗಿದೆ. ಟ್ರಾಫಿಕ್ ಸಿಗ್ನಲ್‌ನಲ್ಲಿದ್ದ ರುಬೀನಾ ಕಾರಿಗೆ ಟಾಟಾ ಯೋಧ ಟ್ರಕ್ ಬಂದು ಗುದ್ದಿದೆ. ಫೋನ್‌ನಲ್ಲಿ ಮಾತನಾಡುತ್ತಾ ಟ್ರಕ್ ಚಲಾಯಿಸುತ್ತಾ ಚಾಲಕ ರುಬೀನಾ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ಬಳಿಕ ರಿಬೀನಾ ಅರನ್ನು ಅಸ್ಪತ್ರೆಗೆ ಕರೆದೊಯ್ಯಲಾಗಿದ್ದು ತಕ್ಷಣ ಚಿಕಿತ್ಸೆ ಕೊಡಿಸಲಾಗಿದೆ. ಈ ಬಗ್ಗೆ ರಿಬೀನಾ ಪತಿ, ನಟ ಅಭಿನವ್ ಶುಕ್ಲಾ ಮಾಹಿತಿ ಹಂಚಿಕೊಂಡಿದ್ದಾರೆ. ಅಭಿನವ್ ಶೇರ್ ಮಾಡಿರುವ ಫೋಟೋಗಳಲ್ಲಿ 
ಟಾಟಾ ಯೋಧದ ಬಂಪರ್ ಮತ್ತು ಮುಂಭಾಗಕ್ಕೆ ಹಾನಿಯಾಗಿದೆ. ಇನ್ನು ರುಬೀನಾ ಇದ್ದ ಕಾರು MG ಗ್ಲೋಸ್ಟರ್‌ನ ಹಿಂಭಾಗ ಹಾನಿಯಾಗಿದೆ. 

ಈ ಬಗ್ಗೆ ನಟಿ ರುಬೀನಾ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. ತನಗೂ ಕೆಲವು ಗಾಯಗಳಾಗಿವೆ ಎಂದು ಹೇಳಿದ್ದಾರೆ. ಬೆನ್ನು ಮತ್ತು ತಲೆಗೆ ಪೆಟ್ಟು ಬಿದ್ದು ಆಘಾತಕ್ಕೊಳಗಾಗಿದ್ದೇನೆ ಎಂದು ಹೇಳಿದ್ದಾರೆ. ಆದರೆ, ವೈದ್ಯಕೀಯ ಪರೀಕ್ಷೆಗಳ ನಂತರ ಎಲ್ಲವೂ ಸರಿಯಾಗಿದೆ ಎಂದು ವರದಿಯಾಗಿದೆ. ಅಲ್ಲದೆ ಚಾಲಕನ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ. ರಸ್ತೆಯಲ್ಲಿ ಜಾಗರೂಕರಾಗಿರಿ ಎಂದು ನಾನು ನಿಮ್ಮೆಲ್ಲರನ್ನು ಒತ್ತಾಯಿಸುತ್ತೇನೆ . ನಿಯಮಗಳು ನಮ್ಮ ಸುರಕ್ಷತೆಗಾಗಿ’ ಎಂದು ಹೇಳಿದ್ದಾರೆ.

292740288 598299468318664 3303852413377714737 n

ಇನ್ನು ಪತಿ ಅಭಿನವ್ ಪ್ರತಿಕ್ರಿಯೆ ನೀಡಿ, ‘ಇಂದು ನಮಗೆ ಸಂಭವಿಸಿದೆ. ನಿಮಗೂ ಸಂಭಿವಸಬಹುದು. ಫೋನ್ ಹಿಡಿದು ಟ್ರಾಫಿಕ್ ಜಂಪ್ ಮಾಡುವ  ಈಡಿಯಟ್ಸ್ ಬಗ್ಗೆ ಎಚ್ಚರದಿಂದಿರಿ. ಆತ ನಗುತ್ತಾ ನಿಂತಿದ್ದ. ರುಬೀನಾ ಕಾರಿನಲ್ಲಿ ಇದ್ದಳು. ಸದ್ಯ ಆರೋಗ್ಯವಾಗಿ ಇದ್ದಾಳೆ. ಅವಳನ್ನು ವೈದ್ಯಕೀಯ ಚಿಕಿತ್ಸೆಗಾಗಿ ಕರೆದುಕೊಂಡು ಹೋಗಲಾಗಿದೆ. ಆ ಚಾಲಕನ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ನಿಮ್ಮನ್ನು ವಿನಂತಿಸುತ್ತೇನೆ’ ಎಂದು ಮುಂಬೈ ಪೊಲೀಸರಲ್ಲಿ ಮನವಿ ಮಾಡಿದ್ದಾರೆ. 

 

ರುಬಿನಾ ದಿಲೈಕ್ ಶೀಘ್ರ ಗುಣಮುಖರಾಗಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ. ಮುಂಬೈ ಪೊಲೀಸರು ಅಭಿನವ್ ಶುಕ್ಲಾ ಅವರ ಟ್ವೀಟ್‌ಗೆ ಪ್ರತ್ಯುತ್ತರ ನೀಡಿದ್ದಾರೆ. ‘ಘಟನೆ ನಡೆದ ಸ್ಥಳದ ಹತ್ತಿರದ ಪೊಲೀಸ್ ಠಾಣೆಗೆ ಘಟನೆಯನ್ನು ವರದಿ ಮಾಡಿ’ ಎಂದು ಹೇಳಿದ್ದಾರೆ.

345212069 1015409363172161 5585473835402509401 n

ನಟಿ ರುಬೀನಾ ದಿಲೈಕ್ 

ಪುನರ್ ವಿವಾಹ -ಏಕ್ ನಯೀ ಉಮೀದ್, ಸಿಂದೂರ್ ಬಿನ್ ಸುಹಾಗನ್, ಚೋಟಿ ಬಹು ಮತ್ತು ಶಕ್ತಿ: ಅಸ್ತಿತ್ವ ಕೆ ಅಹಸಾಸ್ ಕಿಯಂತಹ ಧಾರಾವಾಹಿಗಳಲ್ಲಿ ರುಬಿನಾ ದಿಲೈಕ್ ನಟಿಸಿದ್ದಾರೆ. ಹಿಂದಿ ಕಿರುತೆರೆ ಲೋಕದಲ್ಲಿ ಅತ್ಯಂತ ಜನಪ್ರಿಯ ನಟಿಯರಲ್ಲಿ ರುಬೀನಾ ಒಬ್ಬರಾಗಿದ್ದಾರೆ.  ನಟಿ ಬಿಗ್ ಬಾಸ್ 14 ರ ಭಾಗವಾಗಿದ್ದರು ಬಿಗ್ ಬಾಸ್ ಗೆದ್ದರು. ಬಿಗ್ ಬಾಸ್ ನಲ್ಲಿ ಪತಿ ಅಭಿನವ್ ಶುಕ್ಲಾ ಜೊತೆ ರುಬೀನಾ ಕಾಣಿಸಿಕೊಂಡರು.

292520623 598300458318565 7597184553253496008 n

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist