ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಜನಾರ್ದನ ರೆಡ್ಡಿ ಮತ್ತು ಪತ್ನಿಯ 100ಕ್ಕೂ ಹೆಚ್ಚು ಆಸ್ತಿಗಳ ಜಪ್ತಿ- ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ!

Twitter
Facebook
LinkedIn
WhatsApp
images 10

ಬೆಂಗಳೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಗಂಗಾವತಿ ಶಾಸಕ, ಮಾಜಿ ಸಚಿವ ಜನಾರ್ದನ ರೆಡ್ಡಿ (Janardhan Reddy) ಮತ್ತು ಪತ್ನಿ ಲಕ್ಷ್ಮೀ ಅರುಣಾ ರೆಡ್ಡಿ (Lakshmi Aruna Reddy) ಅವರ ಆಸ್ತಿ ಜಪ್ತಿ ಮಾಡುವಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಆದೇಶ ಹೊರಡಿಸಿದೆ.

ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಒಟ್ಟು 100ಕ್ಕೂ ಹೆಚ್ಚು ಆಸ್ತಿಗಳನ್ನು ಜಪ್ತಿ ಮಾಡುವಂತೆ ವಿಶೇಷ ಕೋರ್ಟ್ ಆದೇಶ ಪ್ರಕಟಿಸಿದೆ. ಜನಾರ್ದನ ರೆಡ್ಡಿ ದಂಪತಿಗೆ ಸೇರಿದ ಒಟ್ಟು 124 ಆಸ್ತಿಗಳ ಜಪ್ತಿ ಕೋರಿ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ತನಿಖೆ ವೇಳೆ ಸೈಟ್, ಕಟ್ಟಡ, ಖಾಲಿ ಜಮೀನು ಸೇರಿದಂತೆ ನೂರಕ್ಕೂ ಅಧಿಕ ಆಸ್ತಿಗಳನ್ನು ಸಿಬಿಐ ಪತ್ತೆ ಮಾಡಿತ್ತು.

ಹಿಂದೆ ಏನಾಗಿತ್ತು?
ಅಕ್ರಮ ಗಣಿಗಾರಿಕೆ (Illegal Mining) ಹಣದಿಂದ ರೆಡ್ಡಿ ಹೊಸದಾಗಿ ತೆಲಂಗಾಣ ರಾಜ್ಯಗಳಲ್ಲಿ 219 ಕಡೆ ಆಸ್ತಿಗಳನ್ನು ಖರೀದಿ ಮಾಡಿದ್ದಾರೆ. ಈ ಆಸ್ತಿಗಳನ್ನು ಜಪ್ತಿ ಮಾಡಲು ಅನುಮತಿ ನೀಡಬೇಕೆಂದು ಸರ್ಕಾರಕ್ಕೆ 2022ರ ಆಗಸ್ಟ್‌ 30 ರಂದು ಸಿಬಿಐ (CBI) ಮನವಿ ಮಾಡಿತ್ತು. 

ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆ ಸಿಬಿಐ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಸಿಬಿಐ ಅರ್ಜಿಗೆ ಸರ್ಕಾರ ಯಾವುದೇ ಉತ್ತರ ನೀಡಿರಲಿಲ್ಲ.

ಆಸ್ತಿ ಜಪ್ತಿ ಅರ್ಜಿ ವಿಚಾರ ತಿಳಿದ ರೆಡ್ಡಿ ಕರ್ನೂಲ್, ರಂಗಾರೆಡ್ಡಿ ಜಿಲ್ಲೆಗಳಲ್ಲಿ ಆಸ್ತಿ ಮಾರಾಟಕ್ಕೆ ಯತ್ನಿಸಿದ್ದರು.  ಈ ವಿಚಾರ ತಿಳಿಯುತ್ತಿದ್ದಂತೆ ಆಸ್ತಿ ಜಪ್ತಿಗೆ ಅನುಮತಿ ನೀಡುವಂತೆ ಸರ್ಕಾರಕ್ಕೆ ಆದೇಶ ನೀಡಬೇಕು ಅಂತಾ ಸಿಬಿಐ ಹೈಕೋರ್ಟ್‌ನಲ್ಲಿ ವಾದ ಮಂಡಿಸಿತ್ತು.

ನಿಮ್ಮ ಕಾರ್ಯವೈಖರಿ ಇದೇನಾ? ಐದು ತಿಂಗಳಾದರೂ ಯಾಕೆ ಕ್ರಮ ಕೈಗೊಂಡಿಲ್ಲ? ನಿಮ್ಮ ದೃಷ್ಟಿಯಲ್ಲಿ ನಿರ್ಧಾರ ಕೈಗೊಳ್ಳದೇ ಇರುವುದು ಒಂದು ಕ್ರಮವಿರಬಹುದು. ಈ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಚಾಟಿ ಬೀಸಿ ನೋಟಿಸ್ ಜಾರಿ ಮಾಡಿತ್ತು. ಹೈಕೋರ್ಟ್‌ ಬಿಸಿ ಮುಟ್ಟಿಸಿದ ಬೆನ್ನಲ್ಲೇ ಅಂದಿನ ಬೊಮ್ಮಾಯಿ ಸರ್ಕಾರ ಈ ವರ್ಷದ ಜನವರಿಯಲ್ಲಿ ರೆಡ್ಡಿಯ ಆಸ್ತಿ ಜಪ್ತಿಗೆ ಅನುಮತಿ ನೀಡಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist