ಕಾಂಗ್ರೆಸ್ ನ ಹಿರಿಯ ನಾಯಕ ಮತ್ತು ಬಸವರಾಜ್ ಬೊಮ್ಮಾಯಿ ಭೇಟಿ ; ಭಾರಿ ಚರ್ಚೆಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಬೊಮ್ಮಾಯಿ !
ಬೆಂಗಳೂರು : ಕಾಂಗ್ರೆಸ್ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಭೇಟಿ ಮಾಡಿರುವುದು ಈಗ ಭಾರೀ ಸುದ್ದಿಯಾಗಿದೆ. ಈ ಬಗ್ಗೆ ಸ್ವತಃ ಬಸವರಾಜ ಬೊಮ್ಮಾಯಿಯವರೇ ಸ್ಪಷ್ಟನೆ ನೀಡಿದ್ದು, ಸ್ನೇಹ ಸಂಬಂಧಗಳೇ ಬೇರೆ, ರಾಜಕೀಯ ಸಂಬಂಧಗಳೇ ಬೇರೆ. ನಾನು ನನ್ನ ರಾಜಕೀಯ ನಿಲುವಿನಲ್ಲಿ ಯಾವುದೇ ರಾಜೀ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರು ನಮ್ಮ ಹಿರಿಯರು ಮತ್ತು ದೂರದ ಸಂಬಂಧಿಯೂ ಹೌದು. ಹಲವಾರು ಬಾರಿ ನಾವು, ಅವರು ನಮ್ಮ ಮನೆಯಲ್ಲಿ ಭೇಟಿ ಆಗಿದ್ದೇವೆ. ಇದರಲ್ಲಿ ರಾಜಕಾರಣ ಬೆರೆಸುವುದು ಸೂಕ್ತವಲ್ಲ. ಅವರನ್ನು ಭೇಟಿಯಾದ ಸಂದರ್ಭದಲ್ಲಿ ಯಾವುದೇ ರಾಜಕೀಯ ವಿಷಯ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಶಾಮನೂರು ಶಿವಶಂಕರಪ್ಪ ಅವರು ನಮ್ಮ ಹಿರಿಯರು ಮತ್ತು ದೂರದ ಸಂಬಂಧಿಯೂ ಹೌದು ಹಲವಾರು ಬಾರಿ ನಾವು ಅವರು ನಮ್ಮ ಮನೆಯಲ್ಲಿ ಭೇಟಿ ಆಗಿದ್ದೇವೆ. ಇದರಲ್ಲಿ ರಾಜಕಾರಣ ಬೆರೆಸುವುದು ಸೂಕ್ತವಲ್ಲ.
— Basavaraj S Bommai (@BSBommai) June 14, 2023
ನಾನು ಶಿಗ್ಗಾಂವಿಯಿಂದ ಬೆಂಗಳೂರಿಗೆ ಬರುವಾಗ ರಾತ್ರಿ ಊಟ ಮಾಡಲು ಹೊಟೆಲ್ ಗೆ ಹೋದಾಗ ಅವರು ತಮ್ಮ ಮೊಮ್ಮಕ್ಕಳ ಬಗ್ಗೆ ಹೊಸ ಸಂಬಂಧದ ಕುರಿತು ಚರ್ಚೆ ಮಾಡಲು…
ನಾನು ಶಿಗ್ಗಾಂವಿಯಿಂದ ಬೆಂಗಳೂರಿಗೆ ಬರುವಾಗ ರಾತ್ರಿ ಊಟ ಮಾಡಲು ಹೋಟೆಲ್ಗೆ ಹೋದಾಗ ಅವರು ತಮ್ಮ ಮೊಮ್ಮಕ್ಕಳ ಬಗ್ಗೆ ಹೊಸ ಸಂಬಂಧದ ಕುರಿತು ಚರ್ಚೆ ಮಾಡಲು ಸೇರಿದ್ದರು. ಆ ಸಂದರ್ಭದಲ್ಲಿ ಅವರ ಜೊತೆಗೆ ಹತ್ತು ನಿಮಿಷ ಉಭಯ ಕುಶಲೊಪರಿ ಮಾತನಾಡಿದ್ದೇನೆ. ಅಲ್ಲಿ ಯಾವುದೇ ರಾಜಕೀಯ ವಿಷಯ ಪ್ರಸ್ತಾಪ ಆಗಿಲ್ಲ. ಸ್ನೇಹ ಸಂಬಂಧಗಳೇ ಬೇರೆ ರಾಜಕೀಯ ಸಂಬಂಧವೇ ಬೇರೆ, ನಾನು ನನ್ನ ರಾಜಕೀಯ ನಿಲುವಿನಲ್ಲಿ ಯಾವುದೇ ರಾಜೀ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.
ರಿಟೈರ್ಡ್ ಹರ್ಟ್ ಆಗಿರುವ @CTRavi_BJP ಈಗ ಸ್ವಪಕ್ಷದ ವಿರುದ್ಧವೇ ತಿರುಗಿ ಬಿದ್ದಿದ್ದಾರೆ, ಅವರ ಅರಣ್ಯ ರೋಧನಕ್ಕೆ @mepratap ದನಿ ಜೋಡಿಸಿದ್ದಾರೆ.
— Karnataka Congress (@INCKarnataka) June 14, 2023
ಇಬ್ಬರಿಗೂ ದಮ್ಮು ತಾಕತ್ತು ಇದ್ದರೆ ಅಡ್ಜಸ್ಟಮೆಂಟ್ ಮಾಡಿಕೊಂಡ ತಮ್ಮ ಪಕ್ಷದ ನಾಯಕರ ಹೆಸರು ಹೇಳಿ ಆರೋಪಿಸಲಿ.
ಅಂದಹಾಗೆ ಬಿಜೆಪಿಯೊಂದಿಗೆ ಅಡ್ಜಸ್ಟ್ ಮಾಡಿಕೊಂಡಿದ್ದ ಕುಮಾರಸ್ವಾಮಿ ತಲೆ…
ಏನಿದು ಭೇಟಿ – ವಿವಾದ?
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಸಂಜೆ ಕಾಂಗ್ರೆಸ್ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರನ್ನು ಹೋಟೆಲ್ ಒಂದರಲ್ಲಿ ಭೇಟಿಯಾಗಿದ್ದಾರೆ. ದಾವಣಗೆರೆ ಹೊರವಲಯದಲ್ಲಿರುವ ಖಾಸಗಿ ಹೋಟೆಲ್ನ ಕೋಣೆಯೊಂದರಲ್ಲಿ ಉಭಯ ನಾಯಕರು ರಹಸ್ಯ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಸುಮಾರು 20 ರಿಂದ 25 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದ್ದು, ದಾವಣಗೆರೆ ಬಿಜೆಪಿ ಕಾರ್ಯಕರ್ತರಲ್ಲಿ ಈ ವಿಚಾರ ಅಸಮಾಧಾನಕ್ಕೆ ಕಾರಣವಾಗಿದೆ.
ಏನಿದು ಭೇಟಿ – ವಿವಾದ?
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಸಂಜೆ ಕಾಂಗ್ರೆಸ್ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರನ್ನು ಹೋಟೆಲ್ ಒಂದರಲ್ಲಿ ಭೇಟಿಯಾಗಿದ್ದಾರೆ. ದಾವಣಗೆರೆ ಹೊರವಲಯದಲ್ಲಿರುವ ಖಾಸಗಿ ಹೋಟೆಲ್ನ ಕೋಣೆಯೊಂದರಲ್ಲಿ ಉಭಯ ನಾಯಕರು ರಹಸ್ಯ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಸುಮಾರು 20 ರಿಂದ 25 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದ್ದು, ದಾವಣಗೆರೆ ಬಿಜೆಪಿ ಕಾರ್ಯಕರ್ತರಲ್ಲಿ ಈ ವಿಚಾರ ಅಸಮಾಧಾನಕ್ಕೆ ಕಾರಣವಾಗಿದೆ.