'ಹೈ ವೇವ್ ಅಲರ್ಟ್' - ಕರಾವಳಿ ಭಾಗದಲ್ಲಿ ಮುಂದಿನ 5 ದಿನ ಸಮುದ್ರ ತೀರಕ್ಕೆ ಪ್ರವೇಶಿಸಿದಂತೆ ಎಚ್ಚರಿ
ಮಂಗಳೂರು, ಜೂ 14 : ಭಾರತೀಯ ಹವಾಮಾನ ಇಲಾಖೆಯೂ ಕರ್ನಾಟಕದ ಕರಾವಳಿ ಭಾಗದಲ್ಲಿ “ಹೈ ವೇವ್ ಅಲರ್ಟ್”ನ್ನು ಘೋಷಣೆ ಮಾಡಿದೆ.
ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು 42 ಕಿ.ಮೀ ನಷ್ಟು ಉದ್ದದ ಕರಾವಳಿ ತೀರದಲ್ಲಿ ಅರಬ್ಬೀ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಪಶ್ಚಿಮ ಕರಾವಳಿಗೆ “ಬಿಪರ್ ಜಾಯ್” ಚಂಡಮಾರುತವು ಅಪ್ಪಳಿಸುವ ಸಾಧ್ಯತೆಗಳು ಇರುತ್ತದೆ.
ಈ ಚಂಡಮಾರುತದ ತೀವ್ರತೆಯ ಪರಿಣಾಮದಿಂದ ಸಮುದ್ರದ ಅಲೆಗಳ ಎತ್ತರ 3 ರಿಂದ 4 ಮೀ. ನಷ್ಟು ಇರಲಿದ್ದು, ಕರಾವಳಿಯಲ್ಲಿ ಉಂಟಾಗಿರುವ ಪ್ರಕ್ಷುಬ್ಧ ವಾತಾವರಣದಿಂದಾಗಿ ಮುಂದಿನ 5 ದಿನಗಳವರೆಗೆ ಸಮುದ್ರ ತೀರಕ್ಕೆ ಪ್ರವೇಶಿಸದಂತೆ ಎಚ್ಚರಿಕೆಯನ್ನು ಜಿಲ್ಲಾಡಳಿತ ನೀಡಿದೆ.
ಜೂ. 19 ರವರೆಗೆ ಕರಾವಳಿ ತೀರದಲ್ಲಿ ಸಾರ್ವಜನಿಕರು, ಪ್ರವಾಸಿಗರು, ಮಕ್ಕಳು, ಸ್ಥಳೀಯರು, ಮೀನುಗಾರರು ಸಮುದ್ರಕ್ಕೆ ಯಾವುದೇ ಕಾರಣಕ್ಕೂ ಇಳಿಯದಂತೆ ಎಚ್ಚರಿಕೆ ನೀಡಿದೆ.ಅಲ್ಲದೇ, ಸಮುದ್ರದ ಹತ್ತಿರ ಓಡಾಡುವುದು ಹಾಗೂ ಆಟವಾಡುವುದನ್ನು ಕೂಡಾ ನಿಷೇಧಿಸಿದೆ.
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ತುರ್ತು ಸೇವೆಗೆ 107719824-2442590 ದೂರವಾಣಿಗೆ ಸಂಪರ್ಕಿಸುವಂತೆ ಜಿಲ್ಲಾಡಳಿತ ತಿಳಿಸಿದೆ.