ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಏಷ್ಯಾಕಪ್; ಲಂಕಾ, ಪಾಕ್ ಆತಿಥ್ಯ – ಬುಮ್ರಾ ಕಂಬ್ಯಾಕ್ ಸಾಧ್ಯತೆ!

Twitter
Facebook
LinkedIn
WhatsApp
Bumrah Afridi Chameera 1 780x438 1

ಮುಂಬೈ: ಭಾರೀ ಕುತೂಹಲ ಕೆರಳಿಸಿದ್ದ 2023ರ ಆವೃತ್ತಿಯ ಏಷ್ಯಾಕಪ್ (Asia Cup 2023) ಟೂರ್ನಿಯ ಗೊಂದಲಗಳಿಗೆ ತೆರೆ ಎಳೆಯಲಾಗಿದೆ. ಆಗಸ್ಟ್ 31ರಿಂದ ಸೆಪ್ಟೆಂಬರ್ 17ರ ವರೆಗೆ ಏಷ್ಯಾಕಪ್ ಟೂರ್ನಿ ನಡೆಯಲಿದ್ದು, ಪಾಕಿಸ್ತಾನ (Pakistan) ಹಾಗೂ ಶ್ರೀಲಂಕಾ (SriLanka) ದೇಶಗಳು ಜಂಟಿ ಆತಿಥ್ಯ ವಹಿಸಲಿವೆ.

ಈ ಟೂರ್ನಿಯು ಪಾಕಿಸ್ತಾನ ಮತ್ತು ಶ್ರೀಲಂಕಾದಲ್ಲಿ ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ. ಸೆಪ್ಟೆಂಬರ್ 17ರಂದು ಫೈನಲ್ ಪಂದ್ಯ ನಡೆಯಲಿದೆ. ಈ ಬಾರಿ ಏಷ್ಯಾಕಪ್ ಟೂರ್ನಿಯ ಹಕ್ಕು ಪಾಕಿಸ್ತಾನದ ಬಳಿಯೇ ಇದ್ದರೂ, ಭಾರತ-ಪಾಕಿಸ್ತಾನದಲ್ಲಿ (Ind vs Pak) ಆಡಲು ಒಪ್ಪಿಗೆ ಸೂಚಿಸದ ಕಾರಣ ಟೂರ್ನಿಯನ್ನ ಹೈಬ್ರಿಡ್ ಮಾದರಿಯಲ್ಲಿ ನಡೆಸಲು ಏಷ್ಯಾಕಪ್ ಕ್ರಿಕೆಟ್ ಸಮಿತಿ (ACC) ನಿರ್ಧರಿಸಿದೆ. 

ಟೂರ್ನಿಯಲ್ಲಿ ಒಟ್ಟು 6 ತಂಡಗಳು ಪಾಲ್ಗೊಳ್ಳಲಿದ್ದು, 3 ತಂಡಗಳ 2 ಗುಂಪು ರಚಿಸಲಾಗಿದೆ. ಭಾರತ, ಪಾಕಿಸ್ತಾನ ಮತ್ತು ನೇಪಾಳ `A’ ಗುಂಪಿನಲ್ಲಿದ್ದರೆ, ಶ್ರೀಲಂಕಾ, ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶ ತಂಡಗಳು `B’ ಗುಂಪಿನಲ್ಲಿ ಇರಲಿವೆ. ಎರಡು ಗುಂಪಿನಲ್ಲಿ ಅಗ್ರಸ್ಥಾನ ಪಡೆದ 2 ತಂಡಗಲು ಸೂಪರ್ ಫೋರ್ ಪ್ರವೇಶಿಸಲಿವೆ. ರಾಬಿನ್ ರೌಂಡ್ಸ್ ಮಾದರಿಯಲ್ಲಿ ನಡೆಯಲಿರುವ ಸೂಪರ್ ಫೋರ್ ಹಂತದಲ್ಲಿ ಅಗ್ರಸ್ಥಾನ ಪಡೆದ ಎರಡು ತಂಡಗಳು ಫೈನಲ್ ಪಂದ್ಯದಲ್ಲಿ ಸೆಣಸಲಿವೆ.

ಏಷ್ಯಾಕಪ್‌ನ 4 ಪಂದ್ಯಗಳು ಮಾತ್ರ ಪಾಕಿಸ್ತಾನದ ಲಾಹೋರ್‌ನಲ್ಲಿ ನಡೆಯಲಿದ್ದು, 9 ಪಂದ್ಯಗಳು ಶ್ರೀಲಂಕಾದ ಪಲ್ಲೆಕೆಲೆ ಹಾಗೂ ಕ್ಯಾಂಡಿನಗರಗಳಲ್ಲಿ ನಡೆಯಲಿದೆ. ಆದ್ರೆ ಪಂದ್ಯಗಳು ನಡೆಯವ ದಿನಾಂಕಗಳನ್ನ ಏಷ್ಯಾಕಪ್ ಕ್ರಿಕೆಟ್ ಸಮಿತಿ ಇನ್ನಷ್ಟೇ ಪ್ರಕಟಿಸಬೇಕಿದೆ. 

ಬುಮ್ರಾ, ಅಯ್ಯರ್ ಕಂಬ್ಯಾಕ್ ಸಾಧ್ಯತೆ:
ಗಾಯದ ಸಮಸ್ಯೆಯಿಂದಾಗಿ T20 ವಿಶ್ವಕಪ್ (T20 Worldcup), 2023ರ ಐಪಿಎಲ್ ಟೂರ್ನಿ, ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಟೂರ್ನಿಗಳಲ್ಲಿ ಅವಕಾಶ ಕಳೆದುಕೊಂಡ ಭಾರತ ತಂಡದ ವೇಗಿ ಜಸ್ಪ್ರೀತ್ ಬುಮ್ರಾ ಏಕದಿನ ಏಷ್ಯಾಕಪ್ ವೇಳೆಗೆ ಟೀಂ ಇಂಡಿಯಾಕ್ಕೆ ಮರಳುವ ಸಾಧ್ಯತೆಯಿದೆ. ಜೊತೆಗೆ ಬಾರ್ಡರ್ ಗವಾಸ್ಕರ್ ಟ್ರೋಫಿ ವೇಳೆ ಗಾಯದ ಸಮಸ್ಯೆಯಿಂದ ಟೀಂ ಇಂಡಿಯಾ ಟೆಸ್ಟ್ ತಂಡದಿಂದ ಹೊರಗುಳಿದ ಶ್ರೇಯಸ್ ಅಯ್ಯರ್ ಸಹ ಟೀಂ ಇಂಡಿಯಾಕ್ಕೆ ಉತ್ತಮ ಕಂಬ್ಯಾಕ್ ಮಾಡುವ ಸಾಧ್ಯತೆ ಇದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist