ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬೆಳ್ತಂಗಡಿ ಸೌಜನ್ಯ ಕೇಸ್: ಸಿಬಿಐ ವಿಶೇಷ ಕೋರ್ಟಿನಿಂದ ತೀರ್ಪು ಪ್ರಕಟ; ಸಂತೋಷ್ ರಾವ್ ದೋಷ ಮುಕ್ತ!

Twitter
Facebook
LinkedIn
WhatsApp
images 14

ಬೆಂಗಳೂರು (ಜೂ.16): ಉಜಿರೆಯ ವಿದ್ಯಾರ್ಥಿನಿ ಸೌಜನ್ಯ ಕೊಲೆ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಿಬಿಐ ಕೋರ್ಟ್‌ ತೀರ್ಪು ನೀಡಿದ್ದು, ಆರೋಪಿ ಸಂತೋಷ್‌ ರಾವ್‌ರನ್ನು ಖುಲಾಸೆ ಮಾಡಿದೆ. ಅವರ ವಿರುದ್ಧ ಸಲ್ಲಿಕೆ ಮಾಡಲಾಗಿರುವ ಸಾಕ್ಷ್ಯಾಧಾರಗಳಲ್ಲಿ ಕೊರತೆ ಇದೆ ಎನ್ನುವ ಕಾರಣಕ್ಕೆ ಆರೋಪಿಯನ್ನು ದೋಷಮುಕ್ತ ಮಾಡಿರುವುದಾಗಿ ನ್ಯಾಯಮೂರ್ತಿ ಸಿಬಿ ಸಂತೋಷ್‌ ತಿಳಿಸಿದ್ದಾರೆ. ಧರ್ಮಸ್ಥಳದ ಸೌಜನ್ಯ ರೇಪ್ ಅಂಡ್ ಮರ್ಡರ್ ಇಂದು‌ ಸಿಬಿಐ ಕೋರ್ಟ್ ಶುಕ್ರವಾರ ತೀರ್ಪು ನೀಡಿದೆ.  ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ವಿದ್ಯಾರ್ಥಿನಿ ಆಗಿದ್ದ ಸೌಜನ್ಯ ಪ್ರಕರಣದಲ್ಲಿ 11 ವರ್ಷಗಳ ಬಳಿಕ ತೀರ್ಪು ನೀಡಿದೆ.  ಉಜಿರೆ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಆಗಿದ್ದ ಸೌಜನ್ಯಳನ್ನು ಅಪಹರಿಸಿ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿತ್ತು. 2012ರ ಅಕ್ಟೋಬರ್‌ 10 ರಂದುಸ ಧರ್ಮಸ್ಥಳದ ಬಳಿ ಸೌಜನ್ಯ ಮೃತದೇಹ ಪತ್ತೆಯಾಗಿತ್ತು. ಪ್ರಕರಣ ಸಂಬಂಧ ಆರೋಪಿ ಸಂತೋಷ್ ರಾವ್ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದರು. ಬಳಿಕ ಪೊಲೀಸರು ಸರಿಯಾಗಿ ತನಿಖೆ‌ ನಡೆಸಿಲ್ಲ ಎಂಬ ಆರೋಪ ವ್ಯಕ್ತವಾಗಿತ್ತು. ಹೀಗಾಗಿ ಹಲವು ಹೋರಾಟಗಳ ಬಳಿಕ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲಾಗಿತ್ತು. ಈಗ 11 ವರ್ಷಗಳ ಸುಧೀರ್ಘ ವಿಚಾರಣೆ ಬಳಿಕ ಸಿಬಿಐ ಕೋರ್ಟ್ ಅಂತಿಮ ತೀರ್ಪು ನೀಡಿದೆ.

ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಚಂದಪ್ಪ ಗೌಡ ಮತ್ತು ಕುಸುಮಾವತಿ ದಂಪತಿಯ ಪುತ್ರಿ ಸೌಜನ್ಯ ನಿಗೂಢ ಕೊಲೆ ಪ್ರಕರಣದಲ್ಲಿ ಆರೋಪಿಗಳು ಯಾರು ಎನ್ನುವುದು ಇನ್ನೂ ನಿಗೂಢವಾಗಿಯೇ ಉಳಿದುಕೊಂಡಂತಾಗಿದೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸೌಜನ್ಯ 2012ರ ಅಕ್ಟೋಬರ್ 9ರಂದು ಸಂಜೆ ಕಾಲೇಜಿನಿಂದ ಮನೆಗೆ ಬರುತ್ತಿದ್ದಾಗ ನಾಪತ್ತೆಯಾಗಿದ್ದಳು. ಮರುದಿನ ರಾತ್ರಿ ಮಣ್ಣಸಂಕ ಬಳಿ ಆಕೆಯ ಮೃತದೇಹ ಪತ್ತೆಯಾಗಿತ್ತು. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲು ಮಾಡಿತ್ತು. ಶಂಕಿತ ಆರೋಪಿ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ನಿವಾಸಿ ಸಂತೋಷ್ ರಾವ್ ಎಂಬಾತನನ್ನು ಬಾಹುಬಲಿ ಬೆಟ್ಟದ ಬಳಿ ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಆಗ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು. ನಂತರದ ಭಾರಿ ಪ್ರತಿಭಟನೆ ನಡೆದು ಪ್ರಕರಣವನ್ನು ಸಿಬಿಐಗೆ ನೀಡಲಾಗಿತ್ತು. ಸಂತೋಷ್ ರಾವ್ ಆರು ಬಾರಿ ಸಿಬಿಐ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

‘ಪ್ರಕರಣದಲ್ಲಿ ಸರಿಯಾದ ತನಿಖೆ ಮಾಡಲಾಗಿಲ್ಲ. ಆದ್ದರಿಂದ ಇಲ್ಲಿ ಸಾಕ್ಷ್ಯಾಧಾರದ ಕೊರತೆ ಎದ್ದು ಕಾಣುತ್ತಿದೆ. ಅತ್ಯಾಚಾರ, ರೇಪ್‌ ಆಗಿರುವ ವೇಳೆ ಆರೋಪಿ ಸ್ಥಳದಲ್ಲಿ ಇದ್ದಿರಲೇ ಇಲ್ಲ. ರೇಪ್‌ ಆಗಿರುವ ಬಗ್ಗೆ ವೈದ್ಯಕೀಯ ವರದಿ ಇಲ್ಲ ಎಂದು ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ತೀರ್ಪು ನೀಡಿದ್ದಾರೆ. ಸರ್ಕಾರ ಮೊದಲಿಗೆ ಈ ಪ್ರಕಣವನ್ನು ಸಿಐಡಿಗೆ ವಹಿಸಿತ್ತು. ಸಿಐಡಿ ಜೊತೆ ಸ್ಥಳೀಯ ಪೊಲೀಸರು ಪ್ರಕರಣದ ವಿಚಾರಣೆ ಮಾಡಿದ್ದರು. ಘಟನೆ ನಡೆದ ಒಂದು ವರ್ಷದ ಬಳಿಕ ಸಿಬಿಐಗೆ ಇದನ್ನು ವಹಿಸಲಾಗಿತ್ತು.

ಆರೋಪಿಯ ಪರವಾಗಿ ಬೆಂಗಳೂರಿನ ನ್ಯಾಯವಾದಿಗಳಾದ ಮೋಹಿತ್ ಕುಮಾರ್ ಹಾಗೂ ನವೀನ್ ಕುಮಾರ್ ಪದ್ಯಾಣ ವಾದಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist