ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವಿಧಾನ ಪರಿಷತ್ ಉಪಚುನಾವಣೆ; ಕಾಂಗ್ರೆಸ್ ನಿಂದ ಯಾರಿಗೆಲ್ಲ ಟಿಕೆಟ್ - ಇಲ್ಲಿದೆ ಅಪ್ಡೇಟ್ಸ್

Twitter
Facebook
LinkedIn
WhatsApp
WhatsApp Image 2023 06 19 at 6.26.52 PM

ಬೆಂಗಳೂರು: ವಿಧಾನಪರಿಷತ್​​ನ ಮೂರು ಸ್ಥಾನಗಳಿಗೆ ಜೂನ್ 30ರಂದು ನಡೆಯಲಿರುವ ಉಪ ಚುನಾವಣೆಗೆ (MLC By Election) ಕಾಂಗ್ರೆಸ್ ಪಕ್ಷವು ಸೋಮವಾರ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಬಿಜೆಪಿ ತ್ಯಜಿಸಿ ಕಾಂಗ್ರೆಸ್​​ಗೆ ಸೇರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲನುಭವಿಸಿದ್ದ ಜಗದೀಶ ಶೆಟ್ಟರ್​ಗೆ (Jagadish Sjettar) ಟಿಕೆಟ್ ನೀಡಲಾಗಿದೆ. ನಿರೀಕ್ಷೆಯಂತೆಯೇ ಎನ್‌ಎಸ್ ಬೋಸರಾಜು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಬಲಿಗ ತಿಪ್ಪಣ್ಣ ಕಮಕನೂರ್​ ಅವರಿಗೂ ಟಿಕೆಟ್​​ ಘೋಷಣೆ ಮಾಡಲಾಗಿದೆ. ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಮಂಗಳವಾರ (ಜೂನ್ 20) ಕೊನೆಯ ದಿನವಾಗಿದೆ. ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ.

ಜೂನ್‌ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಜೂನ್‌ 23 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಜೂನ್‌ 30 ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಶಾಸಕರು ಮತದಾನ ಮಾಡಲಿದ್ದಾರೆ. ಆ ನಂತರ ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಪ್ರಕಟವಾಗಲಿದೆ.

ಬೋಸರಾಜು ಅವರು ಸದ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಉಭಯ ಸದನಗಳ ಸದಸ್ಯರಲ್ಲದ ಕಾರಣ ಸಚಿವರಾಗಿ ಮುಂದುವರಿಯಲು ಪರಿಷತ್​ಗೆ ಆಯ್ಕೆಯಾಗುವುದು ಅನಿವಾರ್ಯವಾಗಿದೆ.

ಜಗದೀಶ್ ಶೆಟ್ಟರ್​ ಅವರು ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ ಮಹೇಶ್ ಟೆಂಗಿನಕಾಯಿ ವಿರುದ್ಧ ಸೋಲನುಭವಿಸಿದ್ದರು. ಅವರು ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ಆಕಾಂಕ್ಷಿ ಎಂದು ಹೇಳಲಾಗಿತ್ತು. ಕಾಂಗ್ರೆಸ್ ಸರ್ಕಾರದ ಪೂರ್ಣಪ್ರಮಾಣದ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದ ಬಳಿಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹುಬ್ಬಳ್ಳಿಗೆ ತೆರಳಿ ಶೆಟ್ಟರ್ ಅವರ ಜತೆ ಮಾತುಕತೆ ನಡೆಸಿದ್ದರು. ಸೂಕ್ತ ಸ್ಥಾನಮಾನ ನೀಡುವ ಭರವಸೆಯನ್ನೂ ನೀಡಿದ್ದರು.

ಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಬಲಿಗ ತಿಪ್ಪಣ್ಣಪ್ಪ ಕಮಕನೂರ್​​ಗೆ ಕಾಂಗ್ರೆಸ್ ಪಕ್ಷವು ಪರಿಷತ್ ಚುನಾವಣೆ ಟಿಕೆಟ್ ಘೋಷಣೆ ಮಾಡಲಾಗಿದೆ ಎನ್ನಲಾಗಿದೆ. ಕೋಲಿ ಸಮಾಜದ ಮುಖಂಡರಾಗಿರುವ ತಿಪ್ಪಣ್ಣಪ್ಪ ಕಮಕನೂರ್ ಈ ಹಿಂದೆ ಕೂಡಾ ಹತ್ತು ತಿಂಗಳ ಕಾಲ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ಕಲಬುರಗಿ ಜಿಲ್ಲೆಯಲ್ಲಿ ಕೋಲಿ ಸಮಾಜದ ಜನ ಹೆಚ್ಚಿದ್ದು, ಲೋಕಸಭೆ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್ ಈ ಹೆಜ್ಜೆ ಇಟ್ಟಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಕೋಲಿ ಸಮಾಜದ ಬಾಬುರಾವ್ ಚಿಂಚನಸೂರ್ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಆ ಸ್ಥಾನವನ್ನು ಮತ್ತೋರ್ವ ಕೋಲಿ ಸಮಾಜದ ಮುಖಂಡನಿಗೆ ಸಿಗುವಂತೆ ಮಾಡಲು ಕಾಂಗ್ರೆಸ್ ಮುಂದಾಗಿದೆ.

ವಿಧಾನಪರಿಷತ್ ಸದಸ್ಯರಾಗಿದ್ದ ಆರ್. ಶಂಕರ್, ಲಕ್ಷ್ಮಣ ಸವದಿ, ಬಾಬುರಾವ್ ಚಿಂಚನಸೂರ್ ವಿಧಾನಸಭೆ ಚುನಾವಣೆಗೂ ಮುನ್ನ ಪರಿಷತ್ ಸ್ಥಾನಕ್ಕೆ ಹಾಗೂ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಹೀಗಾಗಿ ಪರಿಷತ್​​ನಲ್ಲಿ ಮೂರು ಸ್ಥಾನ ತೆರವಾಗಿದ್ದವು. ಇದೀಗ ಆ ಸ್ಥಾನಗಳ ಭರ್ತಿಗೆ ಉಪಚುನಾವಣೆ ನಡೆಯುತ್ತಿದೆ.

ಬಾಬುರಾವ್‌ ಚಿ೦ಚನಸೂರು ಅವರ ಪರಿಷತ್ ಸದಸ್ಯತ್ವ ಅವಧಿ 2024ರ ಜೂನ್‌ 17ಕ್ಕೆ, ಆರ್‌ ಶ೦ಕರ್‌ ಅವರ ಅವಧಿ 2026 ರ ಜೂನ್‌ 30ಕ್ಕೆ ಹಾಗೂ ಲಕ್ಷ್ಮಣ ಸವದಿ ಸದಸ್ಯತ್ವ ಅವಧಿ 2028ರ ಜೂನ್ 14ಕ್ಕೆ ಕೊನೆಗೊಳ್ಳುವುದರಲ್ಲಿತ್ತು. ಆದರೆ ಕಾಂಗ್ರೆಸ್‌ನಿ೦ದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಸಲುವಾಗಿ ಇವರು ಎ೦ಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist