ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

'ಆದಿಪುರುಷ' ನಿರ್ಮಾಪಕರಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ; ಸಿಬಿಎಫ್‌ಸಿ, ಕೇಂದ್ರಕ್ಕೆ ನೋಟಿಸ್

Twitter
Facebook
LinkedIn
WhatsApp
Adipurush

ಲಖನೌ: ರಾಮಾಯಣ ಮಹಾಕಾವ್ಯ ಆಧರಿತ ಆದಿಪುರುಷ ಚಿತ್ರದಲ್ಲಿ ಪ್ರಮುಖ ಪಾತ್ರಗಳಾದ ರಾಮ ಮತ್ತು ರಾವಣನನ್ನು ಚಿತ್ರಿಸಿರುವ ರೀತಿ ಬಗ್ಗೆ ಅಲಹಾಬಾದ್ ಹೈಕೋರ್ಟ್‌ನ ಲಖನೌ ಪೀಠ ಮಂಗಳವಾರ ತೀವ್ರ ಕಳವಳ ವ್ಯಕ್ತಪಡಿಸಿದೆ.ಒಂದು ನಿರ್ದಿಷ್ಟ ಸಮುದಾಯದ ಸಹಿಷ್ಣುತೆಯನ್ನು ಏಕೆ ಪರೀಕ್ಷೆ ಮಾಡುತ್ತೀರಿ? ಎಂದು ಹೈಕೋರ್ಟ್, ಆದಿಪುರುಷ ಚಿತ್ರ ತಯಾರಕರನ್ನು ತೀವ್ರ ತರಾಟಗೆ ತೆಗೆದುಕೊಂಡಿದೆ.

‘ಆದಿಪುರುಷ’ ಚಿತ್ರದ ಸಂಭಾಷಣೆಗಳು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಮತ್ತು ಇದು ಪ್ರೇಕ್ಷಕರನ್ನು ಕೆರಳಿಸಿದೆ. ಹೀಗಾಗಿ ಚಿತ್ರವನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್​, ಚಿತ್ರದ ನಿರ್ದೇಶಕ ಓಂ ರಾವತ್​ರನ್ನು ತರಾಟೆಗೆ ತೆಗೆದುಕೊಂಡಿದೆ. ಈ ಪ್ರಕರಣದಲ್ಲಿ ಸಹ ಲೇಖಕ ಮನೋಜ್ ಮುಂತಶಿರ್ ಶುಕ್ಲಾ ಅವರನ್ನು ಕಕ್ಷಿದಾರರನ್ನಾಗಿ ಮಾಡುವಂತೆ ನ್ಯಾಯಾಲಯ ಸೂಚಿಸಿದ್ದು, ಈ ಕುರಿತು ನಾಳೆ ಮಧ್ಯಾಹ್ನದ ಒಳಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರ ಹಾಗೂ ಸಿಬಿಎಫ್ ಸಿಗೆ ನೋಟಿಸ್ ಜಾರಿ ಮಾಡಿದೆ.

ಪುಣ್ಯಕ್ಕೆ ಸಿನಿಮಾ ನೋಡಿದ ಬಳಿಕ ಜನರು ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದಿಲ್ಲ. ಈ ಸಿನಿಮಾದಲ್ಲಿ ಹನುಮಂತ ಮತ್ತು ಸೀತೆ ಏನೂ ಅಲ್ಲವೆಂಬಂತೆ ತೋರಿಸಲಾಗಿದೆ. ನೀವು ಭಗವಾನ್ ರಾಮ, ಲಕ್ಷ್ಮಣ, ಹನುಮಂತ, ರಾವಣನನ್ನು ತೋರಿಸಿ ನಂತರ ಅದು ರಾಮಾಯಣವಲ್ಲ ಎಂದು ಹೇಳೋಕಾಗುತ್ತಾ? ನಮ್ಮ ದೇಶದ ಜನರು, ಯುವಕರು ಬುದ್ಧಿ ಇಲ್ಲದವರು ಅಂದುಕೊಂಡಿದ್ದೀರಾ?” ಎಂದು ಕೋರ್ಟ್​ ಕಿಡಿಕಾರಿದೆ.

“ಚಿತ್ರದಲ್ಲಿನ ಸಂಭಾಷಣೆಗಳು ಒಂದು ದೊಡ್ಡ ಸಮಸ್ಯೆಯಾಗಿದೆ. ರಾಮಾಯಣವು ನಮಗೆ ಒಂದು ಮಾದರಿಯಾಗಿದೆ. ಜನರು ಮನೆಯಿಂದ ಹೊರಡುವ ಮೊದಲು ರಾಮಚರಿತಮಾನಸ ಓದುತ್ತಾರೆ. ಚಲನಚಿತ್ರಗಳು ಕೆಲವು ವಿಷಯಗಳನ್ನು ಮುಟ್ಟಬಾರದು” ಎಂದು ಕೋರ್ಟ್​ ಹೇಳಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist