ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಜಸ್ಥಾನ: ಟ್ರಕ್​ ಡಿಕ್ಕಿ ಹೊಡೆದು ಹೊತ್ತಿ ಉರಿದ ಲಾರಿಗಳು; 12 ಜಾನುವಾರು ಸಹಿತ ಐವರು ಸಜೀವ ದಹನ

Twitter
Facebook
LinkedIn
WhatsApp
9B407993 FFD5 4CEB A71E 3F9CCE3731EB

ಜೈಪುರ: ರಾಜಸ್ಥಾನದ ಜೈಪುರ-ಅಜ್ಮೀರ್ ರಸ್ತೆಯಲ್ಲಿ ಬುಧವಾರ ಲಾರಿಯೊಂದು ರಸ್ತೆಬದಿಯಲ್ಲಿ ನಿಂತಿದ್ದ ಎರಡು ಟ್ರಕ್ ಗಳಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಐವರು ಸಜೀವ ದಹನವಾಗಿದ್ದಾರೆ.ಭೀಕರ ಅಪಘಾತದಲ್ಲಿ ದನಗಳನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಸೇರಿದಂತೆ ಎಲ್ಲಾ ಮೂರು ಟ್ರಕ್‌ಗಳು ಹೊತ್ತಿ ಉರಿದಿದ್ದು, ಹನ್ನೆರಡು ಜಾನುವಾರು ಸಹ ಸಜೀವ ದಹನಗೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೈಪುರ ಗ್ರಾಮಾಂತರದ ದುಡು ಪ್ರದೇಶದಲ್ಲಿನಿನ್ನೆ ಬೆಳಗ್ಗೆ 5.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ಟ್ರಕ್ ಡಿಕ್ಕಿಯ ನಂತರ ಬೆಂಕಿ ಕಾಣಿಸಿಕೊಂಡಿದ್ದು, ಅದು ಎಲ್ಲಾ ಮೂರು ಟ್ರಕ್‌ಗಳಿಗೂ ಆವರಿಸಿದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ(ಜೈಪುರ ಗ್ರಾಮಾಂತರ) ದಿನೇಶ್ ಶರ್ಮಾ ತಿಳಿಸಿದ್ದಾರೆ.

ಒಂದು ಟ್ರಕ್‌ನ ಚಾಲಕ ಸೇರಿದಂತೆ ಐವರು ಸಜೀವ ದಹನವಾಗಿದ್ದಾರೆ ಎಂದು ಇನ್ನೊಬ್ಬ ಪೊಲೀಸ್ ಅಧಿಕಾರಿ ಹೇಳಿದ್ದಾರೆ

ಮೃತರನ್ನು ಹರ್ಯಾಣದ ಮೂವರು ಪವನ್(28), ಸಂಜು(18), ಧರಮ್‌ವೀರ್(34) ಮತ್ತು ಬಿಹಾರದ ಛಾಪ್ರಾ ಮೂಲದ ಇಬ್ಬರು – ಜಾನ್ ವಿಜಯ್ (35) ಮತ್ತು ಬಿಜ್ಲಿ (26) ಎಂದು ಗುರುತಿಸಲಾಗಿದೆ.

“ಎರಡು ಟ್ರಕ್‌ಗಳು ರಸ್ತೆಬದಿಯಲ್ಲಿ ನಿಂತಿದ್ದವು. ಹರಿಯಾಣದಿಂದ ಪುಣೆಗೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಟ್ರಕ್ ಅವುಗಳಲ್ಲಿ ಒಂದಕ್ಕೆ ಡಿಕ್ಕಿ ಹೊಡೆದಿದೆ. ಚಾಲಕನ ನಿದ್ರೆಯ ಮಂಪರು ಈ ಅಪಘಾತಕ್ಕೆ ಕಾರಣವಾಗಿರಬಹುದು” ಎಂದು ಅಧಿಕಾರಿ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist