ಮಣಿಪುರ ಸಿಎಂ ಬಿರೇನ್ ಸಿಂಗ್ ರಾಜೀನಾಮೆ ಪತ್ರವನ್ನು ಹರಿದು ಹಾಕಿ ವಿರೋಧಿಸಿದ ಬೆಂಬಲಿಗರು
ಇಂಫಾಲ: ಕಳೆದ 2 ತಿಂಗಳಿನಿಂದ ಮಣಿಪುರದಲ್ಲಿ (Manipur) ನಡೆಯುತ್ತಿರುವ ಹಿಂಸಾಚಾರವನ್ನು ನಿಭಾಯಿಸುವಲ್ಲಿ ವಿಫಲವಾಗಿ ತೀವ್ರ ಟೀಕೆಗೆ ಗುರಿಯಾಗಿರುವ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ (N Biren Singh) ಅವರು ಶುಕ್ರವಾರ ರಾಜೀನಾಮೆ ನೀಡಲು ಮುಂದಾಗಿದ್ದರು. ಈ ವೇಳೆ ರಾಜೀನಾಮೆಯನ್ನು ವಿರೋಧಿಸಿದ ಮಹಿಳೆಯೊಬ್ಬರು ಅವರ ಪತ್ರವನ್ನು (Resignation Letter) ಹರಿದು ಹಾಕಿರುವ ಘಟನೆ ನಡೆದಿದೆ.
ಬಿರೇನ್ ಸಿಂಗ್ ತಮ್ಮ ರಾಜೀನಾಮೆ ಪತ್ರವನ್ನು ಹಿಡಿದು ರಾಜ್ಯಪಾಲರ ಭವನಕ್ಕೆ ಹೊರಟಿದ್ದರು. ಆದರೆ ಇಂಫಾಲದಲ್ಲಿರುವ ಸಿಎಂ ನಿವಾಸದ ಹೊರಗಡೆ ಅವರ ಬೆಂಬಲಿಗರು ಜಮಾಯಿಸಿ ರಾಜೀನಾಮೆಯನ್ನು ವಿರೋಧಿಸಿದ್ದಾರೆ. ಇಬ್ಬರು ಸಚಿವರು ನಿವಾಸದಿಂದ ಹೊರಗೆ ಬಂದಾಗ ಅವರ ರಾಜೀನಾಮೆ ಪತ್ರವನ್ನು ಮಹಿಳೆಯೊಬ್ಬರು ಕಸಿದುಕೊಂಡು ಅದನ್ನು ಹರಿದು ಹಾಕಿದ್ದಾರೆ.
#WATCH | Moment when women supporting Manipur CM Biren Singh tore up his resignation letter pic.twitter.com/dB8IjWNmya
— ANI (@ANI) June 30, 2023
ಇದೀಗ ರಾಜೀನಾಮೆ ಅಂಚಿನಲ್ಲಿದ್ದ ಬಿರೇನ್ ಸಿಂಗ್ ಸಾರ್ವಜನಿಕರ ಒತ್ತಡಕ್ಕೆ ಮಣಿದು ತಮ್ಮ ಮನಸ್ಸನ್ನು ಬದಲಾಯಿಸಿದ್ದಾರೆ ಎಂದು ಹಿರಿಯ ಸಚಿವರೊಬ್ಬರು ತಿಳಿಸಿದ್ದಾರೆ.
ಕಳೆದ 2 ತಿಂಗಳಿನಿಂದ ಮಣಿಪುರದಲ್ಲಿ ಎಸ್‌ಟಿ ಮೀಸಲಾತಿ ವಿಚಾರವಾಗಿ ಮೇಟಿ ಹಾಗೂ ಕುಕಿ ಸಮುದಾಯಗಳ ನಡುವೆ ಹಿಂಸಾಚಾರ ನಡೆಯುತ್ತಿದೆ. ಎರಡು ಸಮುದಾಯಗಳ ಜನಾಂಗೀಯ ಹಿಂಸಾಚಾರದಲ್ಲಿ ಇಲ್ಲಿಯವರೆಗೆ 100ಕ್ಕೂ ಹೆಚ್ಚು ಜನರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ.