ಭಾರಿ ಮಳೆ ಹಿನ್ನೆಲೆ ಮಂಗಳೂರು, ಬಂಟ್ವಾಳ ತಾಲೂಕು ಸೇರಿದಂತೆ 5 ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ರಜೆ!
Twitter
Facebook
LinkedIn
WhatsApp
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.4ರ ಮಂಗಳವಾರ ಮಂಗಳೂರು, ಮೂಲ್ಕಿ, ಉಲ್ಲಾಳ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆಗಳು ಹಾಗೂ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.
ಕರಾವಳಿಯಲ್ಲಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ 4 ದಿನ ಆರು ಜಿಲ್ಲೆಗಳಲ್ಲಿ ಭಾರತೀಯ ಹವಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ದ.ಕ.ದಲ್ಲಿ ತಹಶೀಲ್ದಾರ್‌ಗೆ ಶಾಲಾ-ಕಾಲೇಜಿಗೆ ರಜೆ ಘೋಷಿಸುವ ಅಧಿಕಾರ ನೀಡಿ ಡಿಸಿ ಆದೇಶಿಸಿದ್ದಾರೆ. ಉಳಿದ ತಾಲೂಕಿನಲ್ಲಿ ಮಳೆ ಪರಿಸ್ಥಿತಿ ನೋಡಿ ರಜೆ ನೀಡಲು ಸೂಚಿಸಲಾಗಿದ್ದು, ಕಾಸರಗೋಡು ಜಿಲ್ಲೆಯಲ್ಲಿ ಇಂದು ರಜೆ ಘೋಷಿಸಲಾಗಿದೆ