ಬೆಳ್ತಂಗಡಿ : ಮೂವರು ಶಿಕ್ಷಕಿಯರ ಜಗಳಕ್ಕೆ ಹೆದರಿ ಶಾಲೆ ತ್ಯಜಿಸಿದ 37 ವಿದ್ಯಾರ್ಥಿಗಳು!
Twitter
Facebook
LinkedIn
WhatsApp
ಬೆಳ್ತಂಡಗಿ (ಜು.4) : ಶಿಕ್ಷಕರ ಜಗಳದಿಂದ ಬೇಸತ್ತ ವಿದ್ಯಾರ್ಥಿಗಳ ಪೋಷಕರು ಮಕ್ಕಳನ್ನು ಬೇರೆ ಶಾಲೆಗಳಿಗೆ ವರ್ಗಾವಣೆ ಮಾಡಿಸಿಕೊಂಡಿದ್ದು, ವಿದ್ಯಾರ್ಥಿಗಳಿಲ್ಲದೆ ಶಾಲೆಯೇ ಖಾಲಿಯಾದ ವಿದ್ಯಮಾನ ದ.ಕ. ಜಿಲ್ಲೆ ಬೆಳ್ತಂಗಡಿ ತಾಲೂಕು ಸೋಣಂದೂರು ಸರ್ಕಾರಿ ಶಾಲೆಯಲ್ಲಿ ನಡೆದಿದೆ.
ಸುಮಾರು 75 ವರ್ಷದ ಇತಿಹಾಸ ಇರುವ ಮಾಲಾಡಿ ಗ್ರಾ.ಪಂ. ವ್ಯಾಪ್ತಿಯ ಸೋಣಂದೂರು ದ.ಕ. ಜಿ.ಪಂ. ಹಿ.ಪ್ರಾ.ಶಾಲೆಯಲ್ಲಿ 1ರಿಂದ 7ನೇ ತರಗತಿ ತನಕ 37 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದರು. ಶಿಕ್ಷಕಿಯರ ಜಗಳದಿಂದ ಬೇಸತ್ತು ಪೋಷಕರು ತಮ್ಮ ಮಕ್ಕಳನ್ನು ಅಕ್ಕಪಕ್ಕದ ಸರ್ಕಾರಿ, ಖಾಸಗಿ ಶಾಲೆಗಳಿಗೆ ಸೇರಿಸಿದ್ದಾರೆ.
ಮತ್ತು ಕಳೆದ ವರ್ಷ ಈ ಶಾಲೆಯನ್ನು ದತ್ತು ಪಡೆದುಕೊಂಡಿದ್ದು ಅಭಿವೃದ್ಧಿ ಪರ ಗಮನ ಹರಿಸಿತ್ತಾದರು ಈ ಶೈಕ್ಷಣಿಕ ವರ್ಷದಲ್ಲಿ ತರಗತಿಗಳು ಖಾಲಿಯಾಗಿವೆ.